Champions Trophy 2025: ಚಾಂಪಿಯನ್ಸ್ ಟ್ರೋಫಿ ಫೈನಲಿಸ್ಟ್ಗಳು ಯಾರೆಂದು ತಿಳಿಸಿದ ರಿಕಿ ಪಾಂಟಿಂಗ್
Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ 19 ರಿಂದ ಆರಂಭವಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅದರಂತೆ ಭಾರತದ ಪಂದ್ಯಗಳು ದುಬೈನಲ್ಲಿ ಜರುಗಲಿದ್ದು, ಉಳಿದ ಮ್ಯಾಚ್ಗಳಿಗೆ ಪಾಕಿಸ್ತಾನ್ ಆತಿಥ್ಯವಹಿಸಲಿದೆ. ಈ ಟೂರ್ನಿಯ ಭಾರತದ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ.

ಚಾಂಪಿಯನ್ಸ್ ಟ್ರೋಫಿ 2025 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ಎಂಟು ತಂಡಗಳಲ್ಲಿ ಈ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಫೈನಲ್ ಆಡಲಿವೆ ಎಂದು ಆಸೀಸ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಕಳೆದ ಮೂರು ಐಸಿಸಿ ಟೂರ್ನಿಗಳಲ್ಲಿ 2 ಬಾರಿ ಫೈನಲ್ ಆಡಿವೆ. 2023ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್, 2023 ರ ಏಕದಿನ ವಿಶ್ವಕಪ್ನಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿರುವುದರಿಂದ ಈ ಬಾರಿ ಕೂಡ ಉಭಯ ತಂಡಗಳಿಂದ ಹಣಾಹಣಿಯನ್ನು ನಿರೀಕ್ಷಿಸಬಹುದು ಎಂದು ಪಾಂಟಿಂಗ್ ಹೇಳಿದ್ದಾರೆ.
ಹೀಗಾಗಿ 2023ರ ಏಕದಿನ ವಿಶ್ವಕಪ್ ಫೈನಲ್ನಂತೆ ಈ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುವುದು ಬಹುತೇಕ ಖಚಿತ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.
ಅಂದಹಾಗೆ ಈ ಬಾರಿ ಚಾಂಪಿಯನ್ಸ್ ಟ್ರೋಫಿ ನಡೆಯುತ್ತಿರುವುದು ಏಕದಿನ ಸ್ವರೂಪದಲ್ಲಿ. ಹೀಗಾಗಿ ಏಕದಿನ ವಿಶ್ವಕಪ್ನಲ್ಲಿ ಫೈನಲ್ ಆಡಿದ ತಂಡಗಳೇ ಈ ಬಾರಿ ಕೂಡ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿದೆ. ಅದರಂತೆ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಫೈನಲ್ ಆಡಲಿದೆಯಾ ಕಾದು ನೋಡಬೇಕಿದೆ.
ಚಾಂಪಿಯನ್ಸ್ ಟ್ರೋಫಿಗಾಗಿ ಉಭಯ ತಂಡಗಳು:
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆರೋನ್ ಹಾರ್ಡಿ, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಆ್ಯಡಂ ಝಂಪಾ.
ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಪವರ್ಗೆ ವಿರಾಟ್ ಕೊಹ್ಲಿಯ ದಾಖಲೆ ಉಡೀಸ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.
ಚಾಂಪಿಯನ್ಸ್ ಟ್ರೋಫಿ ಭಾರತದ ವೇಳಾಪಟ್ಟಿ:
- ಭಾರತ vs ಬಾಂಗ್ಲಾದೇಶ್: ಫೆಬ್ರವರಿ 20 (ದುಬೈ)
- ಭಾರತ vs ಪಾಕಿಸ್ತಾನ್: ಫೆಬ್ರವರಿ 23 (ದುಬೈ)
- ಭಾರತ vs ನ್ಯೂಝಿಲೆಂಡ್: ಮಾರ್ಚ್ 2 (ದುಬೈ)
- ಸೆಮಿಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 4 (ದುಬೈ)
- ಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 9 (ದುಬೈ)