AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡ-ಬಲ ಕಾಂಬಿನೇಷನ್: ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್ ಪ್ಲ್ಯಾನ್?

Team India: ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಬಲಗೈ ದಾಂಡಿಗ ಶುಭ್​ಮನ್ ಗಿಲ್ ಜೊತೆ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಕಣಕ್ಕಿಳಿದಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಲೆಫ್ಟ್​ ಹ್ಯಾಂಡ್ ಬ್ಯಾಟರ್ ತಿಲಕ್ ವರ್ಮಾ ಆಡಿದ್ದರು. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದದ್ದು ಬಲಗೈ ಬ್ಯಾಟರ್ ಸೂರ್ಯಕುಮಾರ್ ಯಾದವ್.

ಎಡ-ಬಲ ಕಾಂಬಿನೇಷನ್: ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್ ಪ್ಲ್ಯಾನ್?
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 13, 2023 | 10:37 PM

ಟಿ20 ವಿಶ್ವಕಪ್ (T20 World Cup 2024)​ ಆರಂಭಕ್ಕೆ ಇನ್ನು ತಿಂಗಳುಗಳು ಮಾತ್ರ ಬಾಕಿಯಿವೆ. ಆದರೆ ಈ ತಿಂಗಳುಗಳ ಅಂತರದಲ್ಲಿ ಟೀಮ್ ಇಂಡಿಯಾ ಮುಂದಿರುವುದು ಕೇವಲ 4 ಟಿ20 ಪಂದ್ಯಗಳು ಮಾತ್ರ. ಹೀಗಾಗಿಯೇ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂಲಕ ಭಾರತ ತಂಡವು ಪ್ರಯೋಗಕ್ಕೆ ಕೈ ಹಾಕಿದೆ. ಅದು ಕೂಡ ಎಡ-ಬಲ ಬ್ಯಾಟರ್​ಗಳ ಮಾಸ್ಟರ್​ಪ್ಲ್ಯಾನ್.

ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 7 ಬ್ಯಾಟರ್​ಗಳನ್ನು ಕಣಕ್ಕಿಳಿಸಿತ್ತು. ಈ ಏಳು ಬ್ಯಾಟರ್​ಗಳಲ್ಲಿ ನಾಲ್ವರು ಎಡಗೈ ದಾಂಡಿಗರು ಎಂಬುದು ವಿಶೇಷ.

ಅಂದರೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಎಡಗೈ ದಾಂಡಿಗರ ಕೊರತೆ ಅನುಭವಿಸುತ್ತಿದ್ದ ಟೀಮ್ ಇಂಡಿಯಾ ಇದೀಗ ಒಮ್ಮೆಲೆ ನಾಲ್ವರು ಎಡಗೈ ಬ್ಯಾಟ್ಸ್​ಮನ್​ಗಳನ್ನು ಕಣಕ್ಕಿಳಿಸಿವೆ. ಈ ಮೂಲಕ ರೈಟ್-ಲೆಫ್ಟ್​ ಕಾಂಬಿನೇಷನ್ ರೂಪಿಸಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಬಲಗೈ ದಾಂಡಿಗ ಶುಭ್​ಮನ್ ಗಿಲ್ ಜೊತೆ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಕಣಕ್ಕಿಳಿದಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಲೆಫ್ಟ್​ ಹ್ಯಾಂಡ್ ಬ್ಯಾಟರ್ ತಿಲಕ್ ವರ್ಮಾ ಆಡಿದ್ದರು. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದದ್ದು ಬಲಗೈ ಬ್ಯಾಟರ್ ಸೂರ್ಯಕುಮಾರ್ ಯಾದವ್.

ಇನ್ನು ಐದನೇ ಕ್ರಮಾಂಕದಲ್ಲಿ ಮತ್ತೆ ಎಡಗೈ ದಾಂಡಿಗನಾಗಿ ರಿಂಕು ಸಿಂಗ್ ಬ್ಯಾಟ್ ಬೀಸಿದ್ದರು. 6ನೇ ಕ್ರಮಾಂಕದಲ್ಲಿ ರೈಟ್ ಹ್ಯಾಂಡ್ ಬ್ಯಾಟರ್ ಜಿತೇಶ್ ಶರ್ಮಾ ಅವಕಾಶ ಪಡೆದಿದ್ದರು. ಹಾಗೆಯೇ 7ನೇ ಕ್ರಮಾಂಕದಲ್ಲಿ ಎಡಗೈ ದಾಂಡಿಗ ರವೀಂದ್ರ ಜಡೇಜಾ ಕಾಣಿಸಿಕೊಂಡಿದ್ದರು.

ವಿಶೇಷ ಎಂದರೆ ಈ ಎಡಗೈ-ಬಲಗೈ ಕಾಂಬಿನೇಷನ್​ನಲ್ಲಿ ಬದಲಾವಣೆ ತರಬೇಕಿದ್ದರೂ ಟೀಮ್ ಇಂಡಿಯಾ ಮುಂದೆ ಉತ್ತಮ ಆಯ್ಕೆಗಳಿವೆ. ಏಕೆಂದರೆ ಈ ಪಂದ್ಯದಲ್ಲಿ ಬಲಗೈ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಹಾಗೂ ಎಡಗೈ ಬ್ಯಾಟರ್ ಇಶಾನ್ ಕಿಶನ್ ಕಣಕ್ಕಿಳಿದಿರಲಿಲ್ಲ. ಹೀಗಾಗಿ ರೈಟ್-ಲೆಫ್ಟ್ ಕಾಂಬಿನೇಷನ್​ನಲ್ಲೂ ಬದಲಾವಣೆ ಮಾಡಿಕೊಳ್ಳಲು ಟೀಮ್ ಇಂಡಿಯಾ ಮುಂದೆ ಉತ್ತಮ ಆಯ್ಕೆಗಳಿವೆ.

ಜೂನ್​ನಿಂದ ಟಿ20 ವಿಶ್ವಕಪ್ ಆರಂಭ:

ಟಿ20 ವಿಶ್ವಕಪ್ ಜೂನ್ 4 ರಿಂದ ಶುರುವಾಗಲಿದೆ. ಆದರೆ ಅದಕ್ಕೂ ಮುನ್ನ ಟೀಮ್ ಇಂಡಿಯಾ ಮುಂದಿರುವುದು ಕೇವಲ 4 ಟಿ20 ಪಂದ್ಯಗಳು ಮಾತ್ರ. ಕೇವಲ ನಾಲ್ಕು ಪಂದ್ಯಗಳಿರುವಾಗ ಭಾರತ ತಂಡವು ರೈಟ್ ಅ್ಯಂಡ್ ಲೆಫ್ಟ್ ಕಾಂಬಿನೇಷನ್​ನ ಪ್ರಯೋಗಕ್ಕೆ ಕೈಹಾಕಿರುವುದು ಟಿ20 ವಿಶ್ವಕಪ್​ನ ಪೂರ್ವ ತಯಾರಿ ಎಂದು ವಿಶ್ಲೇಷಿಸಲಾಗುತ್ತಿದೆ.

ಹೀಗಾಗಿ ಮುಂದಿನ ಪಂದ್ಯಗಳಲ್ಲೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಕನಿಷ್ಠ ಮೂವರು ಎಡಗೈ ದಾಂಡಿಗರನ್ನು ನಿರೀಕ್ಷಿಸಬಹುದು. ಈ ಮೂಲಕ ಟಿ20 ವಿಶ್ವಕಪ್​ಗೂ ಮುನ್ನ ಭಾರತ ತಂಡವು ಬಲಿಷ್ಠ ಬ್ಯಾಟಿಂಗ್ ಲೈನಪ್ ಅನ್ನು ರೂಪಿಸಿಕೊಳ್ಳಲು ಮುಂದಾಗಿದೆ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್ ಲೋಗೊ ಅನಾವರಣ

ಟೀಮ್ ಇಂಡಿಯಾದ ಟಿ20 ಸರಣಿ ವೇಳಾಪಟ್ಟಿ:

  1. ಡಿಸೆಂಬರ್ 14- ಭಾರತ vs ಸೌತ್ ಆಫ್ರಿಕಾ- ಮೂರನೇ ಟಿ20 ಪಂದ್ಯ (ಜೋಹಾನ್ಸ್​ಬರ್ಗ್​)
  2. ಜನವರಿ 11- ಭಾರತ vs ಅಫ್ಘಾನಿಸ್ತಾನ್- ಮೊದಲ ಟಿ20 ಪಂದ್ಯ
  3. ಜನವರಿ 14- ಭಾರತ vs ಅಫ್ಘಾನಿಸ್ತಾನ್- ಎರಡನೇ ಟಿ20 ಪಂದ್ಯ
  4. ಜನವರಿ 17- ಭಾರತ vs ಅಫ್ಘಾನಿಸ್ತಾನ್- ಮೂರನೇ ಟಿ20 ಪಂದ್ಯ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್