IND vs SA 2nd T20I: ರಿಂಕು ಸಿಂಗ್ ಸ್ಫೋಟಕ ಆಟದಿಂದ ಆಫ್ರಿಕಾಕ್ಕೆ ಭಾರೀ ನಷ್ಟ: ಗಾಜುಗಳು ಪುಡಿ ಪುಡಿ

Rinku Singh Six Video, South Africa vs India 2nd T20I: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿತಾದರೂ ಟೀಮ್ ಇಂಡಿಯಾದ ಯುವ ಫಿನಿಶರ್ ರಿಂಕು ಸಿಂಗ್ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಇವರು ಸಿಡಿಸಿದ ಎರಡು ಸಿಕ್ಸರ್ ಕೂಡ ಅದ್ಭುತವಾಗಿತ್ತು. ಅದರಲ್ಲೂ ಒಂದು ಸಿಕ್ಸ್ ಪ್ರೆಸ್ ಬಾಕ್ಸ್‌ನ ಗಾಜಿಗೆ ತಾಗಿ ಒಡೆದು ಹೋಯಿತು.

IND vs SA 2nd T20I: ರಿಂಕು ಸಿಂಗ್ ಸ್ಫೋಟಕ ಆಟದಿಂದ ಆಫ್ರಿಕಾಕ್ಕೆ ಭಾರೀ ನಷ್ಟ: ಗಾಜುಗಳು ಪುಡಿ ಪುಡಿ
Rinku Singh Six
Follow us
Vinay Bhat
|

Updated on:Dec 13, 2023 | 8:38 AM

ಗ್ಕೆಬರ್ಹಾದ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ಸೋಲನುಭವಿಸಿತು. ಆದರೆ, ಟೀಮ್ ಇಂಡಿಯಾದ ಯುವ ಫಿನಿಶರ್ ರಿಂಕು ಸಿಂಗ್ (Rinku Singh) ಆರ್ಭಟ ಹರಿಣಗಳ ನಾಡಲ್ಲೂ ಮುಂದುವರೆಯಿತು. ಸ್ಫೋಟಕ ಬ್ಯಾಟಿಂಗ್ ನಡೆಸಿದ ರಿಂಕು ಕೇವಲ 39 ಎಸೆತಗಳಲ್ಲಿ 9 ಫೋರ್, 2 ಸಿಕ್ಸರ್​ನೊಂದಿಗೆ ಅಜೇಯ 68 ರನ್ ಚಚ್ಚಿದರು. ಈ ಮೂಲಕ ತಂಡದ ಮೊತ್ತವನ್ನು 180ರ ಅಂಚಿಗೆ ತರುವಲ್ಲಿ ಪ್ರಮುಖ ಪಾತ್ರವಹಿಸಿದರು. ರಿಂಕು ಸಿಡಿಸಿದ ಎರಡು ಸಿಕ್ಸ್ ಕೂಡ ಅದ್ಭುತವಾಗಿತ್ತು. ಅದರಲ್ಲೂ ಒಂದು ಸಿಕ್ಸ್ ಮಾಧ್ಯಮ ಬಾಕ್ಸ್‌ನ ಗಾಜನ್ನು ಒಡೆಯಿತು.

ದಕ್ಷಿಣ ಆಫ್ರಿಕಾದ ನಾಯಕ ಏಡೆನ್ ಮಾರ್ಕ್ರಾಮ್ ಅವರ ಬೌಲಿಂಗ್​ನಲ್ಲಿ ರಿಂಕು ಎರಡು ಸ್ಫೋಟಕ ಸಿಕ್ಸರ್‌ಗಳನ್ನು ಸಿಡಿಸಿದರು. ಅವುಗಳಲ್ಲಿ ಒಂದು ಪ್ರೆಸ್ ಬಾಕ್ಸ್‌ನ ಗಾಜಿಗೆ ತಾಗಿ ಒಡೆದು ಹೋಯಿತು. ಇದು ಆಫ್ರಿಕಾಕ್ಕೆ ಭಾರೀ ನಷ್ಟ ಉಂಟು ಮಾಡಿದೆ. ಈ ಘಟನೆಯು 19 ನೇ ಓವರ್‌ನಲ್ಲಿ ಸಂಭವಿಸಿತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ಸೋತರೂ ಕೈಬಿಡದ ನಾಯಕ: ಪಂದ್ಯದ ಬಳಿಕ ಸೂರ್ಯಕುಮಾರ್ ಏನು ಹೇಳಿದ್ರು ನೋಡಿ
Image
IND vs SA: ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾಗೆ ಭರ್ಜರಿ ಜಯ
Image
ಕಿಂಗ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಸೂರ್ಯ
Image
ಸೆಹ್ವಾಗ್-ದ್ರಾವಿಡ್ ಪುತ್ರರ ಮುಖಾಮುಖಿಯಲ್ಲಿ ಮಿಂಚಿದ್ದು ಯಾರು?

ಇಲ್ಲಿದೆ ನೋಡಿ ರಿಂಕು ಸಿಂಗ್ ಸಿಡಿಸಿದ ಸಿಕ್ಸರ್​ಗಳ ವಿಡಿಯೋ:

ಈ ಪಂದ್ಯದಲ್ಲಿ ಭಾರತ 19.3 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿದಾಗ ಮಳೆ ಮಧ್ಯಪ್ರವೇಶಿತು. ಬಳಿಕ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ದಕ್ಷಿಣ ಆಫ್ರಿಕಾಕ್ಕೆ 15 ಓವರ್‌ಗಳಲ್ಲಿ 152 ರನ್‌ಗಳ ಗುರಿಯನ್ನು ನೀಡಲಾಯಿತು. ಪ್ರೋಟಿಯಸ್ ಆರಂಭಿಕ ಆಟಗಾರ ರೀಜಾ ಹೆಂಡ್ರಿಕ್ಸ್ ಭಾರತೀಯ ಬೌಲರ್​ಗಳ ಬೆವರಿಳಿಸಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿದರು. 27 ಎಸೆತಗಳಲ್ಲಿ 49 ರನ್ ಗಳಿಸಿದರು. ನಾಯಕ ಏಡೆನ್ ಮಾರ್ಕ್ರಾಮ್ ಕೂಡ ಚೇಸಿಂಗ್​ನಲ್ಲಿ 17 ಎಸೆತಗಳಲ್ಲಿ 30 ರನ್ ಗಳಿಸಿದರು.

ಸೆಹ್ವಾಗ್-ದ್ರಾವಿಡ್ ಪುತ್ರರ ಮುಖಾಮುಖಿಯಲ್ಲಿ ಮಿಂಚಿದ್ದು ಯಾರು?

ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಫ್ರಿಕಾನ್ನರು 1-0 ಮುನ್ನಡೆ ಪಡೆದುಕೊಂಡಿದ್ದಾರೆ. ಕೊನೆಯ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಸರಣಿಯ ನಿರ್ಣಾಯಕ ಕದನಕ್ಕಾಗಿ ಉಭಯ ತಂಡಗಳು ಜೋಹಾನ್ಸ್‌ಬರ್ಗ್‌ಗೆ ಪ್ರಯಾಣಿಸಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:56 am, Wed, 13 December 23

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ