AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಂಕು ಸಿಂಗ್​ಗೆ ದಾವೂದ್ ಇಬ್ರಾಹಿಂ ಗ್ಯಾಂಗ್​ನಿಂದ ಬೆದರಿಕೆ! ಕೇಳಿದ್ದು ಎಷ್ಟು ಕೋಟಿ ಗೊತ್ತಾ?

Rinku Singh Threatened: ಟೀಂ ಇಂಡಿಯಾ ಆಟಗಾರ ರಿಂಕು ಸಿಂಗ್‌ಗೆ ದಾವೂದ್ ಇಬ್ರಾಹಿಂ ಗ್ಯಾಂಗ್‌ನಿಂದ 5 ಕೋಟಿ ರೂಪಾಯಿ ಸುಲಿಗೆಗೆ ಬೆದರಿಕೆ ಕರೆಗಳು ಬಂದಿವೆ. ಫೆಬ್ರವರಿ-ಏಪ್ರಿಲ್ ನಡುವೆ ಮೂರು ಬೆದರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ವೆಸ್ಟ್ ಇಂಡೀಸ್‌ನಲ್ಲಿ ಬಂಧಿಸಿದ್ದಾರೆ. ರಿಂಕು ಸಿಂಗ್ ತನ್ನ ಐಪಿಎಲ್ ಯಶಸ್ಸಿನ ನಂತರ ಕ್ರಿಕೆಟ್ ಅಕಾಡೆಮಿ ತೆರೆದಿದ್ದರು. ಈ ಪ್ರಕರಣದಲ್ಲಿ ಹಣಕ್ಕಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ರಿಂಕು ಸಿಂಗ್​ಗೆ ದಾವೂದ್ ಇಬ್ರಾಹಿಂ ಗ್ಯಾಂಗ್​ನಿಂದ ಬೆದರಿಕೆ! ಕೇಳಿದ್ದು ಎಷ್ಟು ಕೋಟಿ ಗೊತ್ತಾ?
Rinku Singh
ಪೃಥ್ವಿಶಂಕರ
|

Updated on:Oct 09, 2025 | 4:35 PM

Share

ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಂಕು ಸಿಂಗ್‌ಗೆ (Rinku Singh) ಭೂಗತ ಲೋಕದಿಂದ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಯಾಗಿದೆ. ಮಾಹಿತಿಯ ಪ್ರಕಾರ, ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಗ್ಯಾಂಗ್ ಸದಸ್ಯರಿಂದ ರಿಂಕು ಸಿಂಗ್‌ಗೆ ಬೆದರಿಕೆ ಹಾಕಲಾಗಿದೆ. ಈ ವರ್ಷದ ಫೆಬ್ರವರಿ ಮತ್ತು ಏಪ್ರಿಲ್ ನಡುವೆ ದಾವೂದು ಸಹಚರರು, ರಿಂಕು ಸಿಂಗ್​ಗೆ ಮೂರು ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ. ಡಿ-ಕಂಪನಿಯಿಂದ ಬಂದ ಈ ಬೆದರಿಕೆಯ ಸಂದೇಶದಲ್ಲಿ ರಿಂಕು ಸಿಂಗ್ ಅವರಿಂದ 5 ಕೋಟಿ ರೂ. ಸುಲಿಗೆಗೆ ಬೇಡಿಕೆ ಇಟ್ಟಿವೆ ಎಂದು ವರದಿಯಾಗಿದೆ. ಆದಾಗ್ಯೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ದಾವೂದ್ ಸಹಚರರನ್ನು ಬಂಧಿಸಿದ್ದಾರೆ.

5 ಕೋಟಿ ರೂ.ಗೆ ಬೇಡಿಕೆ

ಐಪಿಎಲ್​ನಲ್ಲಿ ಬೆಳಕಿಗೆ ಬಂದ ರಿಂಕು ಸಿಂಗ್, ಒಂದೇ ಓವರ್​ನಲ್ಲಿ ಸತತ 5 ಸಿಕ್ಸರ್ ಸಿಡಿಸಿ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದರು. ಆ ಬಳಿಕ ಟೀಂ ಇಂಡಿಯಾಕ್ಕೂ ಆಯ್ಕೆಯಾದರು. ಇದರಿಂದ ಅವರ ಐಪಿಎಲ್ ಸಂಬಳವೂ ಹೆಚ್ಚಾಗಿತ್ತು. ಇದರಿಂದಾಗಿ ರಿಂಕು ಸಿಂಗ್ ತಮ್ಮ ತವರಿನಲ್ಲಿ ಬಡ ಕ್ರಿಕೆಟಿಗರಿಗಾಗಿ ಅಕಾಡೆಮಿಯನ್ನು ತೆರೆದಿದ್ದರು. ಇದೀಗ ರಿಂಕು ಸಿಂಗ್​ಗೆ ಹಣಕ್ಕಾಗಿ ಬೆದರಿಕೆ ಹಾಕಿದ್ದಕ್ಕಾಗಿ ಪೊಲೀಸರು ಬಂಧಿಸಿದ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರು ಬೆದರಿಕೆ ಹಾಕಿರುವುದಾಗಿ ಒಪ್ಪಿಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ನಂಟು

5 ಕೋಟಿ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಆರೋಪಿಗಳಾದ ಮೊಹಮ್ಮದ್ ದಿಲ್ಶಾದ್ ಮತ್ತು ಮೊಹಮ್ಮದ್ ನವೀದ್ ಅವರನ್ನು ವೆಸ್ಟ್ ಇಂಡೀಸ್‌ನಲ್ಲಿ ಬಂಧಿಸಲಾಗಿದೆ. ಅಲ್ಲದೆ ವೆಸ್ಟ್ ಇಂಡೀಸ್ ಸರ್ಕಾರ ಈ ಇಬ್ಬರನ್ನು ಆಗಸ್ಟ್ 1 ರಂದು ಭಾರತಕ್ಕೆ ಹಸ್ತಾಂತರಿಸಿದೆ ಎಂದು ವರದಿಯಾಗಿದೆ.

ಫೈನಲ್‌ನಲ್ಲಿ ಏನು ಮಾಡುತ್ತೇವೆ ಎಂಬುದನ್ನು 20 ದಿನ ಮುಂಚೆಯೇ ಬರೆದುಕೊಟ್ಟಿದ್ದ ರಿಂಕು- ತಿಲಕ್

ವಾಸ್ತವವಾಗಿ ಮಾಜಿ ಶಾಸಕ ಬಾಬಾ ಸಿದ್ದಿಕಿ ಅವರ ಹತ್ಯೆಯ ನಂತರ ಅವರ ಮಗ ಜೀಶನ್ ಸಿದ್ದಿಕಿ ಅವರಿಂದ 10 ಕೋಟಿ ರೂಪಾಯಿಗಳ ಸುಲಿಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಈ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಾದ ನಂತರ, ಆರೋಪಿಗಳಲ್ಲಿ ಒಬ್ಬನು ರಿಂಕು ಸಿಂಗ್ ಅವರಿಗೆ ಕರೆ ಮಾಡಿ ಅವರಿಂದ ಸುಲಿಗೆ ಬೇಡಿಕೆ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾನೆ.

ಏಪ್ರಿಲ್ 19 ಮತ್ತು 21 ರ ನಡುವೆ ಜೀಶನ್ ಸಿದ್ದಿಕಿಗೆ ಹಣ ನೀಡುವಂತೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿತ್ತು ಎಂದು ಮುಂಬೈ ಪೊಲೀಸ್ ಅಪರಾಧ ವಿಭಾಗ ವರದಿ ಮಾಡಿದೆ. ಹಾಗೆಯೇ ರಿಂಕು ಸಿಂಗ್​ಗೆ ಫೆಬ್ರವರಿ ಮತ್ತು ಏಪ್ರಿಲ್ ನಡುವೆ ಮೂರು ಬೆದರಿಕೆಯ ಮೇಲ್​ಗಳನ್ನು ಕಳುಹಿಸಲಾಗಿತ್ತು ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Thu, 9 October 25

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?