Rinku Singh: ಇಶಾನ್ ಕಿಶನ್ ಔಟ್: ಟೆಸ್ಟ್ ಕ್ರಿಕೆಟ್​ಗೂ ಕಾಲಿಟ್ಟ ರಿಂಕು ಸಿಂಗ್: ಬಿಸಿಸಿಐಯಿಂದ ಶಾಕಿಂಗ್ ತಂಡ ಪ್ರಕಟ

India A vs England Lions Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯು ಜನವರಿ 25 ರಿಂದ ಪ್ರಾರಂಭವಾಗಲಿದೆ, ಆದರೆ ಅದಕ್ಕೂ ಮೊದಲು ಭಾರತ ಎ ಮತ್ತು ಇಂಗ್ಲೆಂಡ್ ಲಯನ್ಸ್ ನಡುವೆ ಈಗಾಗಲೇ ಸರಣಿ ಪ್ರಾರಂಭವಾಗಿದೆ. ಈ ಸರಣಿಯಲ್ಲಿ ಇನ್ನೂ 2 ಪಂದ್ಯಗಳು ನಡೆಯಬೇಕಿದ್ದು, ಇದಕ್ಕಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿದೆ.

Rinku Singh: ಇಶಾನ್ ಕಿಶನ್ ಔಟ್: ಟೆಸ್ಟ್ ಕ್ರಿಕೆಟ್​ಗೂ ಕಾಲಿಟ್ಟ ರಿಂಕು ಸಿಂಗ್: ಬಿಸಿಸಿಐಯಿಂದ ಶಾಕಿಂಗ್ ತಂಡ ಪ್ರಕಟ
Rinku Singh IND vs ENG Test
Follow us
Vinay Bhat
|

Updated on: Jan 20, 2024 | 9:31 AM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಟೆಸ್ಟ್ ಸರಣಿ ಜನವರಿ 25 ರಿಂದ ಪ್ರಾರಂಭವಾಗಲಿದೆ. ಈ ಬಾರಿ ಉಭಯ ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳು ನಡೆಯಲಿರುವ ಕಾರಣ ಸರಣಿ ಕುತೂಹಲ ಕೆರಳಿಸಿದೆ. ಇಂಗ್ಲೆಂಡ್ ತಂಡ ಸರಣಿಗಾಗಿ ಭಾರತಕ್ಕೆ ಆಗಮಿಸಲಿದ್ದು, ಟೀಮ್ ಇಂಡಿಯಾ ಕೂಡ ಶೀಘ್ರದಲ್ಲೇ ತನ್ನ ತರಬೇತಿ ಶಿಬಿರವನ್ನು ಪ್ರಾರಂಭಿಸಲಿದೆ. ಇವೆಲ್ಲದರ ನಡುವೆ ರಿಂಕು ಸಿಂಗ್ ಕೂಡ ಆಂಗ್ಲ ತಂಡದ ವಿರುದ್ಧ ಆಡಲಿದ್ದಾರೆ. ಬಿಸಿಸಿಐ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯಕ್ಕೆ ಭಾರತ ಎ ತಂಡವನ್ನು ಪ್ರಕಟಿಸಿದ್ದು, ಇಶಾನ್ ಕಿಶನ್​ರನ್ನು ಹೊರಗಿಟ್ಟು, ರಿಂಕುಗೆ ಅವಕಾಶ ಕಲ್ಪಿಸಲಾಗಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಜನವರಿ 25 ರಿಂದ ಹೈದರಾಬಾದ್‌ನಲ್ಲಿ ಆರಂಭವಾಗಲಿದೆ. ಈ ಸರಣಿಯೊಂದಿಗೆ ಈಗಾಗಲೇ ಭಾರತ ಎ ಮತ್ತು ಇಂಗ್ಲೆಂಡ್ ಲಯನ್ಸ್ ನಡುವೆ ಅನಧಿಕೃತ ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಿದೆ. ಮೊದಲ ಪಂದ್ಯ ಜನವರಿ 17 ರಂದು ಅಹಮದಾಬಾದ್‌ನಲ್ಲಿ ಶುರುವಾಯಿತು. ಈ ಸರಣಿಯಲ್ಲಿ ಇನ್ನೂ 2 ಪಂದ್ಯಗಳು ನಡೆಯಬೇಕಿದ್ದು, ಇದಕ್ಕಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿದೆ.

ಇದನ್ನೂ ಓದಿ
Image
ಭಾರತ-ಇಂಗ್ಲೆಂಡ್ ಟೆಸ್ಟ್ ಯಾವಾಗ?, ಎಷ್ಟು ಗಂಟೆಗೆ?, ಯಾವುದರಲ್ಲಿ ಲೈವ್?
Image
ಭಾರತದ ಮೂವರು ಸ್ಟಾರ್ ಆಟಗಾರರನ್ನು ವಿದೇಶಕ್ಕೆ ಕಳುಹಿಸಿದ ಬಿಸಿಸಿಐ
Image
U19 ವಿಶ್ವಕಪ್​ನಲ್ಲಿಂದು ಭಾರತದ ಮೊದಲ ಪಂದ್ಯ: ಎಷ್ಟು ಗಂಟೆಗೆ?
Image
ಗುರು ದ್ರಾವಿಡ್ ಆದೇಶವನ್ನು ಮತ್ತೆ ಧಿಕ್ಕರಿಸಿದ್ರಾ ಇಶಾನ್ ಕಿಶನ್..!

IND vs ENG Test Series: ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಯಾವಾಗ?, ಎಷ್ಟು ಗಂಟೆಗೆ?, ಯಾವುದರಲ್ಲಿ ಲೈವ್?

ಬಿಸಿಸಿಐನ ಪುರುಷರ ಹಿರಿಯ ಆಯ್ಕೆ ಸಮಿತಿಯು ಜನವರಿ 19 ಶುಕ್ರವಾರದಂದು ಸರಣಿಯ ಎರಡನೇ ಮತ್ತು ಮೂರನೇ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದೆ. ಈ ಎರಡೂ ಪಂದ್ಯಗಳಲ್ಲಿಯೂ ತಂಡದ ನಾಯಕತ್ವ ಅಭಿಮನ್ಯು ಈಶ್ವರನ್​ಗೆ ನೀಡಲಾಗಿದೆ. ಆದರೆ ಕೆಲವು ಆಟಗಾರರು ಈ ಸರಣಿಗೆ ಪ್ರವೇಶಿಸಿದ್ದಾರೆ. ಇದರಲ್ಲಿ ಅತ್ಯಂತ ಜನಪ್ರಿಯ ಹೆಸರು ರಿಂಕು ಸಿಂಗ್.

ಟೀಮ್ ಇಂಡಿಯಾದ ಈ ಉದಯೋನ್ಮುಖ ಸ್ಫೋಟಕ ಬ್ಯಾಟ್ಸ್‌ಮನ್ ಮೂರನೇ ಪಂದ್ಯಕ್ಕೆ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ನಂತರ, ರಿಂಕು ಪ್ರಸ್ತುತ ಉತ್ತರ ಪ್ರದೇಶ ತಂಡದಲ್ಲಿ ರಣಜಿ ಟ್ರೋಫಿ ಪಂದ್ಯಗಳನ್ನು ಆಡುತ್ತಿದ್ದಾರೆ.

ರಿಂಕು ಅಲ್ಲದೆ ವಾಷಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ ಕೂಡ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸುಂದರ್ ಮತ್ತು ತಿಲಕ್ ಎರಡೂ ಪಂದ್ಯಗಳಿಗೆ ಲಭ್ಯರಿರುತ್ತಾರೆ. ಹಾಗೆಯೆ ಅರ್ಷದೀಪ್ ಸಿಂಗ್ ಮತ್ತು ಯಶ್ ದಯಾಲ್ ಕೂಡ ಆಯ್ಕೆಯಾಗಿದ್ದಾರೆ. ಧ್ರುವ್ ಜುರೈಲ್ ಮತ್ತು ಕೆಎಸ್ ಭರತ್ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿರುವುದರಿಂದ ವಿಕೆಟ್ ಕೀಪರ್​ಗಳಾದ ಕುಮಾರ್ ಕುಶಾಗ್ರಾ ಮತ್ತು ಉಪೇಂದ್ರ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಎರಡನೇ ಪಂದ್ಯ ಜನವರಿ 24ರಿಂದ ಆರಂಭವಾಗಲಿದ್ದು, ಮೂರನೇ ಪಂದ್ಯ ಫೆಬ್ರವರಿ 1ಕ್ಕೆ ಶುರುವಾಗಲಿದೆ.

ಇನ್ನು ಕ್ರಿಕೆಟ್‌ನಿಂದ ವಿರಾಮದಲ್ಲಿರುವ ಇಶಾನ್ ಕಿಶನ್ ಈ ಸರಣಿಯಲ್ಲೂ ಆಡುವುದಿಲ್ಲ. ಕಿಶನ್ ಕಳೆದ ತಿಂಗಳು ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಮಾನಸಿಕ ಆಯಾಸ ಎಂದು ಟೆಸ್ಟ್ ಸರಣಿಯಿಂದ ತಮ್ಮ ಹೆಸರನ್ನು ಹಿಂಪಡೆದಿದ್ದರು. ಅಂದಿನಿಂದ ಅವರು ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಅಫ್ಘಾನಿಸ್ತಾನ ಸರಣಿಗೂ ಮುನ್ನ ಕೋಚ್ ರಾಹುಲ್ ದ್ರಾವಿಡ್ ಅವರು ಇಶಾನ್ ಆಯ್ಕೆಗೆ ಲಭ್ಯವಾಗಲಿಲ್ಲ ಎಂದು ಹೇಳಿದ್ದರು. ಕಿಶನ್ ದೇಶೀಯ ಕ್ರಿಕೆಟ್‌ನಲ್ಲಿ ಆಡಬೇಕು ಎಂದು ದ್ರಾವಿಡ್ ಹೇಳಿದ್ದರು. ಆದರೆ ಇಶಾನ್ ಸತತ ಎರಡು ರಣಜಿ ಪಂದ್ಯಗಳಿಗೆ ಹಾಜರಾಗಲಿಲ್ಲ. ಈಗ ಭಾರತ ಎ ತಂಡಕ್ಕೂ ಆಯ್ಕೆಯಾಗಿಲ್ಲ.

ಎರಡನೇ ಪಂದ್ಯಕ್ಕೆ ಭಾರತ ಎ ತಂಡ: ಅಭಿಮನ್ಯು ಈಶ್ವರನ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ತಿಲಕ್ ವರ್ಮಾ, ಕುಮಾರ್ ಕುಶಾಗ್ರಾ, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್, ಅರ್ಷದೀಪ್ ಸಿಂಗ್, ತುಷಾರ್ ದೇಶಪಾಂಡೆ, ವಿದ್ವತ್ ಕಾವೇರಪ್ಪ, ಉಪೇಂದ್ರ ಯಾದವ್ ಮತ್ತು ಯಶ್ ದಯಾಳ್.

ಮೂರನೇ ಪಂದ್ಯಕ್ಕೆ ಭಾರತ ಎ ತಂಡ: ಅಭಿಮನ್ಯು ಈಶ್ವರನ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ತಿಲಕ್ ವರ್ಮಾ, ರಿಂಕು ಸಿಂಗ್, ಕುಮಾರ್ ಕುಶಾಗ್ರಾ, ವಾಷಿಂಗ್ಟನ್ ಸುಂದರ್, ಶಮ್ಸ್ ಮುಲಾನಿ, ಅರ್ಷದೀಪ್ ಸಿಂಗ್, ತುಷಾರ್ ದೇಶಪಾಂಡೆ, ವಿದ್ವತ್ ಕಾವೇರಪ್ಪ, ಉಪೇಂದ್ರ ಯಾದವ್, ಆಕಾಶ್ ದಯಾಳ್ ಮತ್ತು ಯಶ್ ದಯಾಳ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ