Rinku Singh: ಟೆಸ್ಟ್ ಕ್ರಿಕೆಟ್​ಗೂ ರಿಂಕು ಸಿಂಗ್ ಎಂಟ್ರಿ..!

India 'A' squad: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಮಾತ್ರ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಅಂದರೆ ಇನ್ನುಳಿದ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ಲಯನ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡುವ ಆಟಗಾರರಿಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಗಬಹುದು.

Rinku Singh: ಟೆಸ್ಟ್ ಕ್ರಿಕೆಟ್​ಗೂ ರಿಂಕು ಸಿಂಗ್ ಎಂಟ್ರಿ..!
Rinku Singh
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 23, 2024 | 9:49 AM

ಇಂಗ್ಲೆಂಡ್ ಲಯನ್ಸ್ ವಿರುದ್ಧದ ಅನಧಿಕೃತ 2ನೇ ಟೆಸ್ಟ್ ಪಂದ್ಯಕ್ಕೆ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ಅಭಿಮನ್ಯು ಈಶ್ವರನ್ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಯುವ ಎಡಗೈ ದಾಂಡಿಗ ರಿಂಕು ಸಿಂಗ್ (Rinku Singh) ಸ್ಥಾನ ಪಡೆದಿರುವುದು ವಿಶೇಷ. ಈಗಾಗಲೇ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅಮೋಘ ಪ್ರದರ್ಶನ ನೀಡಿರುವ ರಿಂಕು ಸಿಂಗ್ ಅವರನ್ನು ಇದೀಗ ಟೆಸ್ಟ್ ಕ್ರಿಕೆಟ್​ಗೂ ಪರಿಗಣಿಸಲಾಗಿದೆ.

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ರಿಂಕು ಸಿಂಗ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರ ಫಲವಾಗಿ ಇದೀಗ ಉತ್ತರ ಪ್ರದೇಶ ರಣಜಿ ತಂಡದಲ್ಲಿದ್ದ ಎಡಗೈ ದಾಂಡಿಗನನ್ನು ಭಾರತ ಎ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಕನ್ನಡಿಗನಿಗೂ ಸ್ಥಾನ:

ಭಾರತ ಎ ಟೆಸ್ಟ್ ತಂಡದಲ್ಲಿ ಕರ್ನಾಟಕದಿಂದ ಏಕೈಕ ಆಟಗಾರ ಆಯ್ಕೆಯಾಗಿದ್ದಾರೆ. ಕರ್ನಾಟಕದ ವೇಗದ ಬೌಲರ್​ ಕೊಡಗಿನ ಕುವರ ವಿಧ್ವತ್ ಕಾವೇರಪ್ಪ ಟೀಮ್ ಇಂಡಿಯಾ-ಎ ಟೆಸ್ಟ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.

ಯುವ ಆಟಗಾರರ ದಂಡು:

ಭಾರತ ಎ ಟೆಸ್ಟ್ ತಂಡದಲ್ಲಿ ಯುವ ಆಟಗಾರರ ದಂಡೇ ಕಾಣಿಸಿಕೊಂಡಿದೆ. ತಂಡದಲ್ಲಿ ಯುವ ಎಡಗೈ ದಾಂಡಿಗರಾದ ಸಾಯಿ ಸುದರ್ಶನ್, ತಿಲಕ್ ವರ್ಮಾ ಸ್ಥಾನ ಪಡೆದಿದ್ದಾರೆ. ಹಾಗೆಯೇ ರಜತ್ ಪಾಟಿದಾರ್, ಉಪೇಂದ್ರ ಕುಮಾರ್, ಕುಮಾರ್ ಕುಶಾಗ್ರ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಟೀಮ್ ಇಂಡಿಯಾ ಆಟಗಾರರಾದ ಅರ್ಷದೀಪ್ ಸಿಂಗ್ ಹಾಗೂ ವಾಷಿಂಗ್ಟನ್ ಸುಂದರ್ ಸಹ ಈ ಬಳಗದಲ್ಲಿದ್ದಾರೆ.

4 ದಿನಗಳ ಪಂದ್ಯ:

ಭಾರತ ಎ ಮತ್ತು ಇಂಗ್ಲೆಂಡ್ ನಡುವೆ 4 ದಿನಗಳ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿತ್ತು. ಜನವರಿ 24 ರಿಂದ 2ನೇ ಪಂದ್ಯ ಶುರುವಾಗಲಿದ್ದು, ಅಹಮದಾಬಾದ್​ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ.

ಭಾರತ ಎ ಟೆಸ್ಟ್ ತಂಡ: ಅಭಿಮನ್ಯು ಈಶ್ವರನ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ತಿಲಕ್ ವರ್ಮಾ, ಕುಮಾರ್ ಕುಶಾಗ್ರ, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್, ಅರ್ಷದೀಪ್ ಸಿಂಗ್, ತುಷಾರ್ ದೇಶಪಾಂಡೆ, ವಿದ್ವತ್ ಕಾವೇರಪ್ಪ, ಉಪೇಂದ್ರ ಯಾದವ್, ಆಕಾಶ್ ದೀಪ್, ಯಶ್ ದಯಾಳ್, ರಿಂಕು ಸಿಂಗ್.

ಇದನ್ನೂ ಓದಿ: VIDEO: ಅಯೋಧ್ಯೆಯಲ್ಲಿ ಡುಪ್ಲಿಕೇಟ್ ವಿರಾಟ್ ಕೊಹ್ಲಿ: ಮುಗಿಬಿದ್ದ ಫ್ಯಾನ್ಸ್​..!

ಭಾರತ- ಇಂಗ್ಲೆಂಡ್ ಸರಣಿ:

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಇದೀಗ ಈ ತಂಡದಿಂದ ವೈಯುಕ್ತಿಕ ಕಾರಣ ನೀಡಿ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿ ಆಟಗಾರನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ. ಒಂದು ವೇಳೆ ಭಾರತ ಎ ತಂಡದಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರನಿಗೆ ಬಿಸಿಸಿಐ ಮಣೆ ಹಾಕಬಹುದು.

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​