Rinku Singh: 23 ಎಸೆತ ಅಜೇಯ 42 ರನ್: ಕೆಕೆಆರ್​ಗೆ ಗೆಲುವು ತಂದಿಟ್ಟ ರಿಂಕು ಸಿಂಗ್ ಸ್ಫೋಟಕ ಆಟ ನೋಡಿ

KKR vs RR, IPL 2022: ಸಾಧಾರಣ ಟಾರ್ಗೆಟ್ ಬೆನ್ನಟ್ಟಲು ಹೊರಟ ಕೆಕೆಆರ್ ಆರಂಭದಲ್ಲಿ ಮುಖ್ಯ ವಿಕೆಟ್​ಗಳನ್ನು ಕಳೆದುಕೊಂಡಿತಾದರೂ ಕೊನೆಯ ಹಂತದಲ್ಲಿ ರಿಂಕು ಸಿಂಗ್ (Rinku Singh) ಆಡಿದ ಸ್ಫೋಟಕ ಆಟ ತಂಡಕ್ಕೆ ನೆರವಾಯಿತು. ಇವರಿಗೆ ನಿತೀಶ್ ರಾಣ (Nitish Rana) ಕೂಡ ಅತ್ಯುತ್ತಮ ಸಾಥ್ ನೀಡಿದರು.

Rinku Singh: 23 ಎಸೆತ ಅಜೇಯ 42 ರನ್: ಕೆಕೆಆರ್​ಗೆ ಗೆಲುವು ತಂದಿಟ್ಟ ರಿಂಕು ಸಿಂಗ್ ಸ್ಫೋಟಕ ಆಟ ನೋಡಿ
Rinku Singh and Nithish Rana KKR vs RR
Follow us
TV9 Web
| Updated By: Vinay Bhat

Updated on:May 03, 2022 | 7:40 AM

ಇಂಡಿಯನ್ ಪ್ರೀಮಿಯರ್ ಲೀಗ್​ 2022 ರಲ್ಲಿ ನಡೆದ 47ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಜಯ ಸಾಧಿಸುವ ಮೂಲಕ ಸತತ ಸೋಲಿನ ಸರಪಳಿಯಿಂದ ಬಿಡಿಸಿಕೊಂಡಿದೆ. ರಾಜಸ್ಥಾನ್ ರಾಯಲ್ಸ್ (KKR vs RR) ವಿರುದ್ಧ ನಡೆದ ಪಂದ್ಯದಲ್ಲಿ ಶ್ರೇಯಸ್ ಪಡೆ 7 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದ್ದು ತನ್ನ ಪ್ಲೇ ಆಫ್ ಹಾದಿಯನ್ನು ಇನ್ನೂ ಜೀವಂತವಾಗಿರಿಸಿದೆ. ಇದು ಹೈ ಸ್ಕೋರ್ ಗೇಮ್ ಏನೂ ಆಗಿರಲಿಲ್ಲ. ಸಾಧಾರಣ ಟಾರ್ಗೆಟ್ ಬೆನ್ನಟ್ಟಲು ಹೊರಟ ಕೆಕೆಆರ್ ಆರಂಭದಲ್ಲಿ ಮುಖ್ಯ ವಿಕೆಟ್​ಗಳನ್ನು ಕಳೆದುಕೊಂಡಿತಾದರೂ ಕೊನೆಯ ಹಂತದಲ್ಲಿ ರಿಂಕು ಸಿಂಗ್ (Rinku Singh) ಆಡಿದ ಸ್ಫೋಟಕ ಆಟ ತಂಡಕ್ಕೆ ನೆರವಾಯಿತು. ಇವರಿಗೆ ನಿತೀಶ್ ರಾಣ (Nitish Rana) ಕೂಡ ಅತ್ಯುತ್ತಮ ಸಾಥ್ ನೀಡಿದರು. ಕೊನೆಯ ಓವರ್ ವರೆಗೂ ನಡೆದ ಕಾದಾಟದಲ್ಲಿ ರಾಜಸ್ಥಾನ್ ಬೌಲರ್​​ಗಳು ಘಾತಕವಾಗಿ ಪರಿಣಮಿಸಲಿಲ್ಲ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ದೇವದತ್ ಪಡಿಕ್ಕಲ್ ಕೇವಲ 2 ರನ್‌ಗಳಿಗೆ ಔಟ್ ಆದರು. ಬಳಿಕ ಜೊತೆಗೂಡಿದ ಜೋಸ್ ಬಟ್ಲರ್ ಹಾಗೂ ನಾಯಕ ಸಂಜು ಸ್ಯಾಮ್ಸನ್ ದ್ವಿತೀಯ ವಿಕೆಟ್‌ಗೆ 48 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. ಆದರೆ ಟೂರ್ನಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಜೋಸ್ ಬಟ್ಲರ್ 22 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು.  ನಂತರ ಕ್ರೀಸಿಗಿಳಿದ ಕನ್ನಡಿಗ ಕರುಣ್ ನಾಯರ್‌ (13) ಮತ್ತೊಮ್ಮೆ ವೈಫಲ್ಯ ಅನುಭವಿಸಿದರು. ಅತ್ತ ನಾಯಕನ ಆಟವಾಡಿದ ಸಂಜು ಸ್ಯಾಮ್ಸನ್ ಆಕರ್ಷಕ ಅರ್ಧಶತಕ ಗಳಿಸಿದರು.

ರಾಜಸ್ಥಾನ್ ಬ್ಯಾಟರ್‌ಗಳು ನಿಧಾನಗತಿಯ ಆಟ ಆಡಿರುವುದು ಹಿನ್ನಡೆಗೆ ಕಾರಣವಾಯಿತು. 18ನೇ ಓವರ್‌ನಲ್ಲಿ ಸಂಜು ಕೂಡ ಪೆವಿಲಿಯನ್ ಸೇರಿದರು. 49 ಎಸೆತಗಳನ್ನು ಎದುರಿಸಿದ ಸಂಜು 7 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 54 ರನ್ ಗಳಿಸಿದರು. ಕೊನೆಯ ಹಂತದಲ್ಲಿ ಶಿಮ್ರಾನ್ ಹೆಟ್ಮೆಯರ್ ಬಿರುಸಿನ ಆಟವಾಡುವ (ಅಜೇಯ 27, 13 ಎಸೆತ, 1 ಬೌಂಡರಿ, 2 ಸಿಕ್ಸರ್) ಮೂಲಕ ಗಮನ ಸೆಳೆದರು. ಇನ್ನುಳಿದಂತೆ ರಿಯಾನ್ ಪರಾಗ್ 19 ರನ್ ಗಳಿಸಿದರು. ಈ ಮೂಲಕ ರಾಜಸ್ಥಾನ್ 20 ಓವರ್​ಗೆ 5  ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತು.

IPL 2022: ಸೋಲಿನ ಸುಳಿಯಲ್ಲಿ ಸಿಲುಕಿರುವ RCB ಮುಂದಿದೆ ದೊಡ್ಡ ಸವಾಲು

153 ರನ್‌ಗಳ ಟಾರ್ಗೆಟ್‌ ಎದುರಿಸಿದ ಕೊಲ್ಕತ್ತಾ ನೈಟ್‌ ರೈಡರ್ಸ್‌ ಕೂಡ ನಿರೀಕ್ಷಿತ ಆರಂಭ ಕಾಣಲಿಲ್ಲ. ಇನ್ನಿಂಗ್ಸ್‌ ಆರಂಭಿಸಿದ ಬಾಬಾ ಇಂದ್ರಜಿತ್‌(15) ಹಾಗೂ ಆರನ್‌ ಫಿಂಚ್‌(4) ಬಹುಬೇಗನೆ ವಿಕೆಟ್‌ ಒಪ್ಪಿಸಿದರು. ಆದರೆ ನಂತರ ಕಣಕ್ಕಿಳಿದ ನಾಯಕ ಶ್ರೇಯಸ್‌ ಅಯ್ಯರ್‌ 34 ರನ್‌ (32 ಬಾಲ್‌, 3 ಬೌಂಡರಿ, 1 ಸಿಕ್ಸ್‌) ಉಪಯುಕ್ತ ರನ್‌ಗಳಿಸಿ ಹೊರ ನಡೆದರು. ನಿರ್ಣಾಯಕ ಹಂತದಲ್ಲಿ ಶ್ರೇಯಸ್‌ ಅಯ್ಯರ್‌ ವಿಕೆಟ್‌ ಕಳೆದುಕೊಂಡ ಕೆಕೆಆರ್‌ ಸ್ವಲ್ಪಮಟ್ಟಿನ ಆತಂಕಕ್ಕೆ ಸಿಲುಕಿತು. ಆದರೆ ಈ ವೇಳೆ ಜೊತೆಯಾದ ನಿತೀಶ್‌ ರಾಣ 48* ರನ್‌(37 ಬಾಲ್‌, 3 ಬೌಂಡರಿ, 2 ಸಿಕ್ಸ್‌) ಹಾಗೂ ರಿಂಕು ಸಿಂಗ್‌ 42* ರನ್‌ (23 ಬಾಲ್‌, 6 ಬೌಂಡರಿ, 1 ಸಿಕ್ಸ್‌) ಜವಾಬ್ದಾರಿಯ ಆಟವಾಡಿದರು. ಅಲ್ಲದೇ 4ನೇ ವಿಕೆಟ್‌ಗೆ ಅಜೇಯ 66 ರನ್‌ಗಳ ಜೊತೆಯಾಟದಿಂದ ತಂಡವನ್ನ ಗೆಲುವಿನ ದಡಸೇರಿಸುವಲ್ಲಿ ಯಶಸ್ವಿಯಾದರು. ಕೆಕೆಆರ್‌ ಗೆಲುವಿಗೆ ಪ್ರಮುಖ ಕಾರಣರಾದ ರಿಂಕು ಸಿಂಗ್‌, ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಇದರೊಂದಿಗೆ 10 ಪಂದ್ಯಗಳಲ್ಲಿ ನಾಲ್ಕನೇ ಗೆಲುವು ದಾಖಲಿಸಿರುವ ಕೆಕೆಆರ್, ಒಟ್ಟು ಎಂಟು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೇರಿದೆ. ಇನ್ನೊಂದೆಡೆ ಈ ಸೋಲಿನ ಹೊರತಾಗಿಯೂ ರಾಜಸ್ಥಾನ್, 10 ಪಂದ್ಯಗಳಲ್ಲಿ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಕಾಯ್ದುಕೊಂಡಿದೆ. ರಿಂಕು ಸಿಂಗ್ ಅವರ ಸ್ಫೋಟಕ ಆಟದ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:40 am, Tue, 3 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್