Rishabh Pant Accident: ರಿಷಬ್ ಪಂತ್ ಇಂಜುರಿ ಬಗ್ಗೆ ಅಪ್​ಡೇಟ್ ನೀಡಿದ ಡಿಡಿಸಿಎ ಕಾರ್ಯದರ್ಶಿ

Rishabh Pant Accident: ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿರುವ ಪಂತ್ ಸ್ಥಿರವಾಗಿದ್ದಾರೆ ಮತ್ತು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದಾರೆ. ನಾವೆಲ್ಲರೂ ಚಿಂತಿತರಾಗಿದ್ದೇವೂ ಆದರೆ ಅದೃಷ್ಟವಶಾತ್ ಅವರು ಸ್ಥಿರವಾಗಿದ್ದಾರೆ ಎಂದಿದ್ದಾರೆ.

Rishabh Pant Accident: ರಿಷಬ್ ಪಂತ್ ಇಂಜುರಿ ಬಗ್ಗೆ ಅಪ್​ಡೇಟ್ ನೀಡಿದ ಡಿಡಿಸಿಎ ಕಾರ್ಯದರ್ಶಿ
ರಿಷಬ್ ಪಂತ್
Follow us
TV9 Web
| Updated By: ಪೃಥ್ವಿಶಂಕರ

Updated on:Dec 30, 2022 | 11:06 AM

ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಪಂತ್ (Rishabh Pant) ಸದ್ಯದ ಸ್ಥಿತಿಯ ಬಗ್ಗೆ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (DDCA secretary) ಕಾರ್ಯದರ್ಶಿ ಸಿದ್ಧಾರ್ಥ್ ಸಾಹಿಬ್ ಸಿಂಗ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.‘ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿರುವ ಪಂತ್ ಸ್ಥಿರವಾಗಿದ್ದಾರೆ ಮತ್ತು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದಾರೆ. ನಾವೆಲ್ಲರೂ ಚಿಂತಿತರಾಗಿದ್ದೇವೂ ಆದರೆ ಅದೃಷ್ಟವಶಾತ್ ಅವರ ಆರೋಗ್ಯ ಸ್ಥಿರವಾಗಿದೆ. ನಾವು ಡಿಡಿಸಿಎಯಲ್ಲಿ ಟ್ಯಾಬ್ ಇರಿಸುತ್ತಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇವೆ” ಎಂದು ಡಿಡಿಸಿಎ ಕಾರ್ಯದರ್ಶಿ ಸಿದ್ಧಾರ್ಥ್ ಸಾಹಿಬ್ ಸಿಂಗ್ (Siddharth Sahib Singh) ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ಪಂತ್, ತಮ್ಮ ಹುಟ್ಟೂರಾದ ಉತ್ತರಾಖಂಡದ ರೂರ್ಕಿಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತಕ್ಕೀಡಾಗಿದ್ದಾರೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅವರ ಬಿಎಂಡಬ್ಲ್ಯು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪಂತ್ ಅವರ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅವರ ತಲೆ, ಬೆನ್ನು ಮತ್ತು ಕಾಲಿಗೆ ತೀವ್ರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಸಕ್ಷಮ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

Rishabh Pant Accident: ಕಾರು ಅಪಘಾತದಲ್ಲಿ ರಿಷಭ್ ಪಂತ್‌ಗೆ ಗಂಭೀರ ಗಾಯ; ಬೇಗ ಗುಣಮುಖರಾಗಲಿ ಎಂದ ಮಾಜಿ ಕ್ರಿಕೆಟಿಗರು

ದುಬೈಗೆ ಹಾರಿದ್ದ ಪಂತ್

ಕಳೆದ ವಾರ ಬಾಂಗ್ಲಾದೇಶ ವಿರುದ್ಧದ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಪಂತ್ ಕೊನೆಯದಾಗಿ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಪ್ರಮುಖ 93 ರನ್ ಭಾರಿಸಿದ್ದ ಪಂತ್, ಟೀಂ ಇಂಡಿಯಾ ಸರಣಿಯನ್ನು 2-0 ರಿಂದ ಗೆದ್ದುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿ ಮುಗಿದ ಬಳಿಕ ದುಬೈಗೆ ಹಾರಿದ್ದ ಪಂತ್, ಅಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಜೊತೆಗೂಡಿ ಸಮಯ ಕಳೆದಿದ್ದರು.

ಕ್ರಿಕೆಟ್‌ನಿಂದ ದೂರ?

ಮೂಲಗಳ ಪ್ರಕಾರ ಪಂತ್ ಅವರ ಕಾಲು ಮುರಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅವರು ಕ್ರಿಕೆಟ್​ನಿಂದ ಸ್ವಲ್ಪ ದಿನ ದೂರ ಉಳಿಯಲಿದ್ದಾರೆ. ಇತ್ತೀಚೆಗಷ್ಟೇ ಅವರನ್ನು ಟೀಂ ಇಂಡಿಯಾದಿಂದ ಕೈಬಿಡಲಾಗಿದೆ. ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಪಂತ್ ಸ್ಥಾನ ಪಡೆದಿರಲಿಲ್ಲ. ಮೊಣಕಾಲು ಗಾಯದಿಂದ ಬಳಲುತ್ತಿದ್ದ ಪಂತ್​ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿರುವ ಎನ್​ಸಿಎಗೆ ತೆರಳುವಂತೆ ಬಿಸಿಸಿಐ ಹೇಳಿತ್ತು. ಇದೀಗ ಈ ಘಟನೆಯ ನಂತರ ಪಂತ್ ಸಂಕಷ್ಟ ಮತ್ತಷ್ಟು ಹೆಚ್ಚಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:59 am, Fri, 30 December 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್