‘ನಿಧಾನವಾಗಿ ಕಾರು ಓಡಿಸು’; ರಿಷಬ್ ಪಂತ್​ಗೆ ಮೊದಲೇ ಎಚ್ಚರಿಕೆ ನೀಡಿದ್ದ ಶಿಖರ್ ಧವನ್; ವಿಡಿಯೋ ನೋಡಿ

Rishabh Pant accident: ಸಂದರ್ಶನವೊಂದರಲ್ಲಿ ಪರಸ್ಪರ ಈ ಆಟಗಾರರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ರಿಷಬ್ ಪಂತ್, ನನಗೆ ನೀವು ಏನು ಸಲಹೆ ನೀಡಲು ಬಯಸುತ್ತೀರಿ ಎಂದು ಶಿಖರ್ ಧವನ್ ಬಳಿ ಕೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಶಿಖರ್ ಧವನ್ ಆರಾಮವಾಗಿ ವಾಹನ ಚಲಾಯಿಸುವಂತೆ ಎಚ್ಚರಿಕೆ ನೀಡಿದ್ದಾರೆ.

‘ನಿಧಾನವಾಗಿ ಕಾರು ಓಡಿಸು’; ರಿಷಬ್ ಪಂತ್​ಗೆ ಮೊದಲೇ ಎಚ್ಚರಿಕೆ ನೀಡಿದ್ದ ಶಿಖರ್ ಧವನ್; ವಿಡಿಯೋ ನೋಡಿ
ಶಿಖರ್ ಧವನ್, ರಿಷಭ್ ಪಂತ್
Follow us
TV9 Web
| Updated By: ಪೃಥ್ವಿಶಂಕರ

Updated on:Dec 31, 2022 | 11:05 AM

ಡಿಸೆಂಬರ್ 30 ರ ಮುಂಜಾನೆ ಯಾರು ಊಹಿಸದ ಘಟನೆಯೊಂದು ನಡೆದುಹೋಗಿದೆ. ಕೂದಲೆಳೆ ಅಂತರದಲ್ಲಿ ಟೀಂ ಇಂಡಿಯಾದ ಭವಿಷ್ಯದ ಸ್ಟಾರ್ ಕ್ರಿಕೆಟರ್​ ಬದುಕುಳಿದಿದ್ದಾರೆ. ತನ್ನ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಯುವ ಕ್ರಿಕೆಟರ್ ರಿಷಬ್ ಪಂತ್ (Rishabh Pant) ಇದೀಗ ತಿಂಗಳುಗಟ್ಟಲೆ ಆಸ್ಪತ್ರೆ ಬೆಡ್ ಮೇಲೆ ಕಾಲ ಕಳೆಯಬೇಕಿದೆ. ಸದ್ಯ, ರಿಷಬ್ ಪಂತ್ ಅವರ ರಕ್ತಸಿಕ್ತ, ಸುಟ್ಟ ಕಾರು ಮತ್ತು ಸುಟ್ಟ ಕಾರಿನ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿವೆ. ರಿಷಭ್ ಪಂತ್ ಕಾರು ನರ್ಸನ್ ಗಡಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ. ಕಾರು ಡ್ರೈವಿಂಗ್ ಮಾಡುತ್ತಿದ್ದಾಗ ನಿದ್ರೆಗೆ ಜಾರಿದೆ, ಹೀಗಾಗಿ ಕಾರು ನಿಯಂತ್ರಣ ಕಳೆದುಕೊಂಡಿತು ಎಂದು ಪಂತ್ ಪೊಲೀಸರಿಗೆ ಹೇಳಿದ್ದಾರೆ. ತನ್ನ ಅತಿ ವೇಗದಿಂದಲೇ ಈಗ ನೋವಿನಲ್ಲಿ ನರಳುತ್ತಿರುವ ಪಂತ್, ತಮ್ಮ ಹಿರಿಯ ಕ್ರಿಕೆಟಿಗ ಶಿಖರ್ ಧವನ್ (Shikhar Dhawan) ಅವರ ಸಲಹೆಯನ್ನು ಅನುಸರಿಸಿದ್ದರೆ, ಇಂದು ಈ ಪರಿಸ್ಥಿತಿಗೆ ಬರುತ್ತಿರಲಿಲ್ಲ. ವಾಸ್ತವವಾಗಿ ಪಂತ್​ ಅಪಘಾತಕ್ಕೀಡಾದ ನಂತರ ರಿಷಬ್ ಪಂತ್ ಮತ್ತು ಶಿಖರ್ ಧವನ್ ಅವರ ಹಳೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದರಲ್ಲಿ ಶಿಖರ್ ಧವನ್ ನಿಧಾನವಾಗಿ ವಾಹನ ಚಲಾಯಿಸುವಂತೆ ರಿಷಬ್ ಪಂತ್​ಗೆ ಎಚ್ಚರಿಕೆ ನೀಡುತ್ತಿದ್ದಾರೆ.

ದೆಹಲಿಯಿಂದ ಉತ್ತರ ಖಂಡದ ಹರಿದ್ವಾರದಲ್ಲಿರುವ ರೂರ್​ಕೀಯಲ್ಲಿರುವ ತನ್ನ ಮನೆಗೆ ರಿಷಭ್ ಪಂತ್ ತನ್ನ ಬೆನ್ಝ್​ ಕಾರ್​​ನಲ್ಲಿ ಬರ್ತಿದ್ರು. ಈ ವೇಳೆ ಪಂತ್​ ಇದ್ದ ಕಾರು ಅಪಘಾತಕ್ಕೀಡಾಗಿದೆ. ದೆಹಲಿ-ಡೆಹ್ರಾಡೂನ್ ಹೈವೇನಲ್ಲಿ ರಭಸವಾಗಿ ಬಂದ ಕಾರು ಡಿವೈಡರ್​ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಪಲ್ಟಿಯಾಗಿದ್ದಲ್ಲದೆ, ಕಾರಿನಲ್ಲಿ ಬೆಂಕಿ ಹತ್ತಿಕೊಂಡಿದೆ. ಕಾರಿಗೆ ಬೆಂಕಿ ಹೊತ್ತಿಕೊಳ್ತಿದ್ದಂತೆ ಪಂತ್​ ಹೇಗೋ ಕಾರಿನಿಂದ  ಹೊರ ಬಿದ್ದಿದ್ದಾರೆ. ಈ ಅವಘಡದಲ್ಲಿ ಪಂತ್​ ಅವರ ಹಣೆಗೆ, ಕಾಲುಗಳಿಗೆ ಮತ್ತು ಬೆನ್ನಿಗೆ ಗಾಯಗಳಾಗಿವೆ. ಪಂತ್​ ದೇಹದ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು, ಸದ್ಯ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Rishabh Pant accident: ಪಂತ್ ಜೀವ ಉಳಿಸಿದ ಚಾಲಕ ಮತ್ತು ಕಂಡಕ್ಟರ್​ಗೆ ರಾಜ್ಯ ಸರ್ಕಾರದಿಂದ ಗೌರವ ಸನ್ಮಾನ

ರಿಷಬ್ ಪಂತ್​ಗೆ ಶಿಖರ್ ಧವನ್ ಸಲಹೆ

ಆದರೆ ಪಂತ್ ಅಪಘಾತದ ಬಳಿಕ ರಿಷಬ್ ಪಂತ್ ಮತ್ತು ಶಿಖರ್ ಧವನ್ ಅವರ ಹಳೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಇಬ್ಬರೂ ಆಟಗಾರರು ಡೆಲ್ಲಿ ತಂಡದ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಪರಸ್ಪರ ಈ ಆಟಗಾರರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ರಿಷಬ್ ಪಂತ್, ನನಗೆ ನೀವು ಏನು ಸಲಹೆ ನೀಡಲು ಬಯಸುತ್ತೀರಿ ಎಂದು ಶಿಖರ್ ಧವನ್ ಬಳಿ ಕೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಶಿಖರ್ ಧವನ್ ಆರಾಮವಾಗಿ ವಾಹನ ಚಲಾಯಿಸುವಂತೆ ಎಚ್ಚರಿಕೆ ನೀಡಿದ್ದಾರೆ. ಶಿಖರ್ ಧವನ್ ಸಲಹೆಯಂತೆ ನಡೆದುಕೊಂಡಿದ್ದರೆ ಇಂದು ಇಂತಹ ಅವಘಡ ಸಂಭವಿಸುತ್ತಿರಲಿಲ್ಲ.

ಅಪಘಾತದ ದೃಶ್ಯಗಳು ಹೇಳುತ್ತಿರುವುದೇನು?

ಪಂತ್ ಅಪಘಾತಕ್ಕೀಡಾಗಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಇದರಲ್ಲಿ ಪಂತ್ ಕಾರನ್ನು ಅತಿವೇಗದಲ್ಲಿ ಚಲಾಯಿಸುತ್ತಿರುವುದನ್ನು ಕಾಣಬಹುದಾಗಿದೆ. ಮೊದಲೇ ಮುಂಜಾನೆಯಾಗಿದ್ದರಿಂದ, ನಿದ್ರೆಯ ಮಂಪರಿನಲ್ಲಿದ್ದ ಪಂತ್, ನಿಯಂತ್ರಣ ಕಳೆದುಕೊಂಡು ಡಿವೈಡ್‌ಗೆ ಡಿಕ್ಕಿ ಹೊಡೆದಿದ್ದಾರೆ. ಇದಾದ ಬಳಿಕ ಡಿವೈಡರ್ ಮೇಲೆ ಬಹಳ ದೂರ ಹೋದ ಬಳಿಕ ಕಾರು ಪಲ್ಟಿಯಾಗಿದೆ. ಇದಾದ ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಸಮಯಕ್ಕೆ ಸರಿಯಾಗಿ ಕಾರಿನಿಂದ ಇಳಿದ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:01 am, Sat, 31 December 22

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ