AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಮ್ಮಪ್ಪನ ದರ್ಶನ ಪಡೆದ ರಿಷಭ್ ಪಂತ್- ಅಕ್ಷರ್ ಪಟೇಲ್; ತಂಡ ಸೇರುವುದು ಯಾವಾಗ? ವಿಡಿಯೋ ನೋಡಿ

Rishabh Pant, Axar Patel: ಗಾಯದಿಂದಾಗಿ ಪ್ರಸ್ತುತ ಭಾರತ ವಿಶ್ವಕಪ್ ತಂಡದಿಂದ ಹೊರಗುಳಿದಿರುವ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಮತ್ತು ಆಲ್​ರೌಂಡರ್ ಅಕ್ಷರ್ ಪಟೇಲ್ ಇಂದು ಮುಂಜಾನೆ ಅಂದರೆ ಶುಕ್ರವಾರ ಬೆಳಗ್ಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ತಿಮ್ಮಪ್ಪನ ದರ್ಶನ ಪಡೆದ ರಿಷಭ್ ಪಂತ್- ಅಕ್ಷರ್ ಪಟೇಲ್; ತಂಡ ಸೇರುವುದು ಯಾವಾಗ? ವಿಡಿಯೋ ನೋಡಿ
ರಿಷಬ್ ಪಂತ್, ಅಕ್ಸರ್ ಪಟೇಲ್
ಪೃಥ್ವಿಶಂಕರ
|

Updated on:Nov 03, 2023 | 3:24 PM

Share

ಗಾಯದಿಂದಾಗಿ ಪ್ರಸ್ತುತ ಭಾರತ ವಿಶ್ವಕಪ್ (ICC World Cup 2023) ತಂಡದಿಂದ ಹೊರಗುಳಿದಿರುವ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ (Rishabh Pant) ಮತ್ತು ಆಲ್​ರೌಂಡರ್ ಅಕ್ಷರ್ ಪಟೇಲ್ (Axar Patel) ಇಂದು ಮುಂಜಾನೆ ಅಂದರೆ ಶುಕ್ರವಾರ ಬೆಳಗ್ಗೆ ತಿರುಪತಿ ತಿಮ್ಮಪ್ಪನ (Lord Balaji) ದರ್ಶನ ಪಡೆದಿದ್ದಾರೆ. ಕೊರಳಲ್ಲಿ ರುದ್ರಾಕ್ಷಿ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡ ಈ ಇಬ್ಬರು ಆಟಗಾರರು ಶ್ರೀವಾರಿ ಸೇವೆಯಲ್ಲಿ ಪಾಲ್ಗೊಂಡರು. ಇಂಜುರಿಯಿಂದ ಚೇತರಿಸಿಕೊಂಡು ಆದಷ್ಟು ಬೇಗ ಭಾರತ ತಂಡವನ್ನು ಸೇರಿಕೊಳ್ಳುವ ತವಕದಲ್ಲಿರುವ ಪಂತ್ ಮತ್ತು ಅಕ್ಷರ್ ಪಟೇಲ್ ತಿಮ್ಮಪ್ಪನ ಸನ್ನಿದಾನದಲ್ಲಿ ಕಾಣಿಸಿಕೊಂಡಿರುವ ವೀಡಿಯೊ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಸೆಲ್ಫಿ ಕ್ಲಿಕ್ಕಿಸಿಕೊಂಡ ಪಂತ್- ಅಕ್ಷರ್

ಅಕ್ಷರ್ ಪಟೇಲ್ ಮತ್ತು ರಿಷಬ್ ಪಂತ್ ಬಿಳಿ ಶರ್ಟ್ ಮತ್ತು ಧೋತಿ ಧರಿಸಿದ್ದು, ಇಬ್ಬರ ಹೆಗಲ ಮೇಲೆ ಕೆಂಪು ಬಣ್ಣದ ಟವೆಲ್ ಕಾಣಬಹುದಾಗಿದೆ. ಈ ಇಬ್ಬರು ಸ್ಟಾರ್ ಕ್ರಿಕೆಟಿಗರನ್ನು ನೋಡಿದ ತಕ್ಷಣ ಅಭಿಮಾನಿಗಳ ದಂಡು ಅವರ ಸುತ್ತವರೆದಿದೆ. ಬಳಿಕ ಕೆಲ ಸಮಯ ಅಭಿಮಾನಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಈ ಇಬ್ಬರೊಂದಿಗೆ ಅಲ್ಲಿದ್ದ ಪೊಲೀಸರು ಕೂಡ ಫೋಟೋ ತೆಗೆಸಿಕೊಂಡರು.

ಏಷ್ಯಾಕಪ್ ವೇಳೆ ಗಾಯಗೊಂಡಿದ್ದ ಅಕ್ಷರ್

ಭಾರತ ತಂಡದ ಸ್ಟಾರ್ ಆಲ್ ರೌಂಡರ್ ಅಕ್ಷರ್ ಪಟೇಲ್ 2023ರ ಏಷ್ಯಾಕಪ್ ವೇಳೆ ಗಾಯಗೊಂಡಿದ್ದರು. ಅಂದಿನಿಂದ ಅವರು ಕ್ರಿಕೆಟ್​ನಿಂದ ದೂರ ಉಳಿದು ಚೇತರಿಸಿಕೊಳ್ಳುತ್ತಿದ್ದಾರೆ. ಅಕ್ಷರ್ ಭಾರತದ ವಿಶ್ವಕಪ್ ತಂಡದ ಭಾಗವಾಗಿದ್ದರು. ಆದರೆ ಸಮಯ ಕಳೆದಂತೆ ಗಾಯದಿಂದ ಚೇತರಿಸಿಕೊಳ್ಳಲು ಸಾಧ್ಯವಾಗದೇ ಇದ್ದಾಗ ಅವರ ಬದಲಿಗೆ ಅನುಭವಿ ರವಿಚಂದ್ರನ್ ಅಶ್ವಿನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಯಿತು. ಪ್ರಸ್ತುತ ಅಕ್ಷರ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಸರಣಿಯಲ್ಲಿ ಗುಜರಾತ್ ತಂಡದ ಪರ ಆಡುತ್ತಿದ್ದಾರೆ.

ಮುಂದಿನ ವರ್ಷ ಪಂತ್ ರೀ ಎಂಟ್ರಿ

ಇವರಲ್ಲದೆ, ನಾವು ರಿಷಬ್ ಬಗ್ಗೆ ಮಾತನಾಡುವುದಾದರೆ, ಟೀಂ ಇಂಡಿಯಾದ ಈ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಕಳೆದ ಡಿಸೆಂಬರ್ (2022) ನಲ್ಲಿ ಭೀಕರ ಕಾರು ಅಪಘಾತಕ್ಕೊಳಗಾಗಿದ್ದರು. ಆ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಇದಾದ ನಂತರ ಪಂತ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಪ್ರಸ್ತುತ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಪಂತ್ ಮುಂದಿನ ವರ್ಷದ ಆರಂಭದಲ್ಲಿ ತಂಡದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Fri, 3 November 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ