Rishabh Pant: ಪಂತ್ ಪವರ್​ಫುಲ್ ಸೆಂಚುರಿಗೆ ಧೋನಿ ದಾಖಲೆ ಉಡೀಸ್

Fastest Century in Test: ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಇದ್ದಾರೆ. ಅಜರ್ 1997 ರಲ್ಲಿ ಸೌತ್ ಆಫ್ರಿಕಾ ವಿರುದ್ದ ಕೇವಲ 74 ಎಸೆತಗಳಲ್ಲಿ ಶತಕ ಬಾರಿಸಿ ಮಿಂಚಿದ್ದರು.

Rishabh Pant: ಪಂತ್ ಪವರ್​ಫುಲ್ ಸೆಂಚುರಿಗೆ ಧೋನಿ ದಾಖಲೆ ಉಡೀಸ್
Rishabh Pant
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 02, 2022 | 11:58 AM

ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ (England vs India)​ ವಿರುದ್ದದ 5ನೇ ಟೆಸ್ಟ್‌ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ರಿಷಭ್ ಪಂತ್ (Rishabh Pant) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ವಿಶೇಷ ಎಂದರೆ ಈ ಅಬ್ಬರದೊಂದಿಗೆ ಪಂತ್ ಮಹೇಂದ್ರ ಸಿಂಗ್ ಧೋನಿಯ (Ms Dhoni) ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 98 ರನ್​ ಆಗುವಷ್ಟರಲ್ಲಿ 5 ಪ್ರಮುಖ ವಿಕೆಟ್​ಗಳನ್ನು ಕಳೆದುಕೊಂಡಿತು. ಈ ಹಂತದಲ್ಲಿ ಜೊತೆಗೂಡಿದ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ಅತ್ಯುತ್ತಮ ಜೊತೆಯಾಟವಾಡಿದರು. 6ನೇ ವಿಕೆಟ್​ಗೆ 222 ರನ್​ಗಳ ಪಾಲುದಾರಿಕೆ ಮೂಲಕ ತಂಡಕ್ಕೆ ಆಸರೆಯಾದರು. ಇದರ ನಡುವೆ ರಿಷಭ್ ಪಂತ್ ಶತಕ ಪೂರೈಸಿದರೆ, ಜಡೇಜಾ ಅರ್ಧಶತಕ ಬಾರಿಸಿ ಬ್ಯಾಟ್ ಮೇಲೆಕ್ಕೆತ್ತಿದ್ದರು.

ಕೇವಲ 89 ಎಸೆತಗಳಲ್ಲಿ 15 ಫೋರ್ ಹಾಗೂ ಒಂದು ಸಿಕ್ಸ್​ನೊಂದಿಗೆ​ ಶತಕ ಪೂರೈಸಿದ ರಿಷಭ್ ಪಂತ್ ಟೀಮ್ ಇಂಡಿಯಾ ಪರ ಹೊಸ ದಾಖಲೆ ನಿರ್ಮಿಸಿದರು. ಹೌದು, ಟೀಮ್ ಇಂಡಿಯಾ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಎಂಬ ದಾಖಲೆ ಇದೀಗ ಪಂತ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. 16 ವರ್ಷಗಳ ಹಿಂದೆ, ಅಂದರೆ 2006 ರಲ್ಲಿ ಧೋನಿ ಪಾಕಿಸ್ತಾನ್ ವಿರುದ್ದ ಫೈಸಲಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಕೇವಲ 93 ಎಸೆತಗಳಲ್ಲಿ ಶತಕ ಪೂರೈಸಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿದು 24 ವರ್ಷದ ಪಂತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಹಾಗೆಯೇ ವಿದೇಶಿ ಪಿಚ್​ನಲ್ಲಿ ಅತೀ ವೇಗವಾಗಿ ಶತಕ ಬಾರಿಸಿದ ಮೂರನೇ ಟೀಮ್ ಇಂಡಿಯಾ ಬ್ಯಾಟ್ಸ್​ಮನ್ ಎಂಬ ದಾಖಲೆ ಕೂಡ ಪಂತ್ ಪಾಲಾಗಿದೆ. ಈ ಪಟ್ಟಿಯಲ್ಲಿ ವೀರೇಂದ್ರ ಸೆಹ್ವಾಗ್ ಅಗ್ರಸ್ಥಾನದಲ್ಲಿದ್ದು, ಸೆಹ್ವಾಗ್ 2006 ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಗ್ರಾಸ್ ಐಲೆಟ್ ಮೈದಾನದಲ್ಲಿ ಕೇವಲ 78 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇನ್ನು 1990 ರಲ್ಲಿ ಮೊಹಮ್ಮದ್ ಅಜರುದ್ದೀನ್ ಇಂಗ್ಲೆಂಡ್ ವಿರುದ್ದ ಲಾರ್ಡ್ಸ್​ ಮೈದಾನದಲ್ಲಿ 88 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ದ ಕೇವಲ 89 ಎಸೆತಗಳಲ್ಲಿ ಸೆಂಚುರಿ ಸಿಡಿಸುವ ಮೂಲಕ ರಿಷಭ್ ಪಂತ್ ವಿದೇಶಿ ಪಿಚ್​ನಲ್ಲಿ ಅತೀ ವೇಗದ ಟೆಸ್ಟ್​ ಶತಕ ಸಿಡಿಸಿದ ಭಾರತೀಯರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ
Image
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Image
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗದ ಶತಕ ಬಾರಿಸಿದ ದಾಖಲೆ ಕಪಿಲ್ ದೇವ್ ಹೆಸರಿನಲ್ಲಿದೆ. 1987 ರಲ್ಲಿ ಕಪಿಲ್ ದೇವ್ ಶ್ರೀಲಂಕಾ ವಿರುದ್ದ ಕೇವಲ 74 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರು. ಹಾಗೆಯೇ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಇದ್ದಾರೆ. ಅಜರ್ 1997 ರಲ್ಲಿ ಸೌತ್ ಆಫ್ರಿಕಾ ವಿರುದ್ದ ಕೇವಲ 74 ಎಸೆತಗಳಲ್ಲಿ ಶತಕ ಬಾರಿಸಿ ಮಿಂಚಿದ್ದರು. ಇನ್ನು ಮೂರನೇ ಸ್ಥಾನದಲ್ಲಿ ವೀರೇಂದ್ರ ಸೆಹ್ವಾಗ್ ಇದ್ದು, ವೀರು 2006 ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಕೇವಲ 78 ಎಸೆತಗಳಲ್ಲಿ ಸೆಂಚುರಿ ಬಾರಿಸಿದ್ದರು.

ಅಷ್ಟೇ ಅಲ್ಲದೆ ರಿಷಭ್ ಪಂತ್, ಟೆಸ್ಟ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ವಿದೇಶಿ ಪಿಚ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ವಿಜಯ್ ಮಂಜ್ರೇಕರ್, ಅಜಯ್ ರಾತ್ರ, ವೃದ್ದಿಮಾನ್ ಸಾಹ ಇದ್ದು, ಇವರು ಕೇವಲ ತಲಾ ಮೂರು ಶತಕ ಬಾರಿಸಿದ್ದರು. ಇದೀಗ ಪಂತ್ ಇಂಗ್ಲೆಂಡ್ ವಿರುದ್ದ 2 ಶತಕ, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ದ ತಲಾ 1 ಶತಕ ಬಾರಿಸುವ ಮೂಲಕ ವಿದೇಶಿ ಪಿಚ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಭಾರತೀಯ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಇದಲ್ಲದೆ ಒಂದೇ ವರ್ಷದೊಳಗೆ ಭಾರತ ಪರ 2 ಶತಕ ಬಾರಿಸಿದ ವಿಕೆಟ್ ಕೀಪರ್​ಗಳ ಪಟ್ಟಿಯಲ್ಲೂ ಪಂತ್ ಸ್ಥಾನ ಪಡೆದಿದ್ದಾರೆ. ಇದಕ್ಕೂ ಮುನ್ನ 1964 ರಲ್ಲಿ ವಿಕೆಟ್ ಕೀಪರ್ ಬುಧಿ ಕುಂದರನ್ ಒಂದೇ ಕ್ಯಾಲೆಂಡರ್ ವರ್ಷದಲ್ಲಿ 2 ಶತಕ ಬಾರಿಸಿ ದಾಖಲೆ ಬರೆದಿದ್ದರು. ಆ ಬಳಿಕ 2009 ರಲ್ಲಿ ಮಹೇಂದ್ರ ಸಿಂಗ್ ಧೋನಿ ಒಂದೇ ವರ್ಷದಲ್ಲಿ 2 ಶತಕ ಬಾರಿಸುವ ಮೂಲಕ ಈ ದಾಖಲೆಯನ್ನು ಸರಿಗಟ್ಟಿದ್ದರು. ಇದಾರ ನಂತರ 2017 ರಲ್ಲಿ ವೃದ್ದಿಮಾನ್ ಸಾಹ ಕೂಡ 2 ಶತಕ ಬಾರಿಸಿ ಮಿಂಚಿದ್ದರು. ಇದೀಗ ರಿಷಭ್ ಪಂತ್ ಕೂಡ ಒಂದೇ ವರ್ಷದಲ್ಲಿ 2 ಶತಕ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಭಾರತ 4ನೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

ಇದಾಗ್ಯೂ ಒಂದೇ ವರ್ಷದೊಳಗೆ ವಿದೇಶಿ ಪಿಚ್​ನಲ್ಲಿ ಎರಡು ಶತಕ ಬಾರಿಸಿದ ಟೀಮ್ ಇಂಡಿಯಾದ ಏಕೈಕ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಎಂಬ ದಾಖಲೆ ರಿಷಭ್ ಪಂತ್ ಪಾಲಾಗಿದೆ. ಪಂತ್ ಜನವರಿ 13, 2022 ರಂದು ಜೋಹಾನ್ಸ್​ಬರ್ಗ್​ನಲ್ಲಿ ಅಜೇಯ 100 ರನ್ ಬಾರಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ದ 111 ಎಸೆತಗಳಲ್ಲಿ 146 ರನ್​ ಬಾರಿಸುವ ಮೂಲಕ ಈ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಒಟ್ಟಿನಲ್ಲಿ ಒಂದು ಸೆಂಚುರಿ ಅಬ್ಬರದೊಂದಿಗೆ ರಿಷಭ್ ಪಂತ್ ಇದೀಗ ಹಲವು ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ