ಡಿವೈಡರ್ ಮುರಿದು, ಎದುರು ರಸ್ತೆಯಲ್ಲಿ ಪಲ್ಟಿಯಾದ ಕಾರು; ಪಂತ್ ಕಾರು ಅಪಘಾತದ ಸಿಸಿಟಿವಿ ದ್ಯಶ್ಯ ನೋಡಿ

Rishabh Pant Accident: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಗಮನಿಸಿದರೆ, ಪಂತ್ ಅತಿ ವೇಗದಲ್ಲಿ ಕಾರನ್ನು ಚಲಾಯಿಸುತ್ತಿರುವುದನ್ನು ಕಾಣಬಹುದಾಗಿದೆ.

ಡಿವೈಡರ್ ಮುರಿದು, ಎದುರು ರಸ್ತೆಯಲ್ಲಿ ಪಲ್ಟಿಯಾದ ಕಾರು; ಪಂತ್ ಕಾರು ಅಪಘಾತದ ಸಿಸಿಟಿವಿ ದ್ಯಶ್ಯ ನೋಡಿ
ರಿಷಬ್ ಪಂತ್
Follow us
TV9 Web
| Updated By: ಪೃಥ್ವಿಶಂಕರ

Updated on:Dec 30, 2022 | 11:57 AM

ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ (Rishabh Pant) ಶುಕ್ರವಾರ ಬೆಳಗ್ಗೆ ಕಾರು ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಿಂದ ರೂರ್ಕಿಗೆ ಹೋಗುತ್ತಿದ್ದಾಗ ಪಂತ್ ಅವರ ಕಾರು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​ಗೆ ಡಿಕ್ಕಿ ಹೊಡೆದು ಎದುರು ರಸ್ತೆಯಲ್ಲಿ ಪಲ್ಟಿಯಾಗಿದೆ. ಸದ್ಯ ಅವರು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಂತ್ ಅವರ ತಲೆ ಮತ್ತು ಕಾಲುಗಳಿಗೆ ಗಾಯಗಳಾಗಿವೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಮಧ್ಯೆ ಪಂತ್ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಗಮನಿಸಿದರೆ, ಪಂತ್ ಅತಿ ವೇಗದಲ್ಲಿ ಕಾರನ್ನು ಚಲಾಯಿಸುತ್ತಿರುವುದನ್ನು ಕಾಣಬಹುದಾಗಿದೆ. ಬಳಿಕ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಮೇಲೆ ಹತ್ತಿದ್ದನ್ನು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದು. ಇದಾದ ಬಳಿಕ ಡಿವೈಡರ್ ಮೇಲೆ ಬಹಳ ದೂರ ಹೋದ ಕಾರು ಬಳಿಕ ಎದುರು ರಸ್ತೆಯಲ್ಲಿ ಪಲ್ಟಿಯಾಗಿದೆ.

ವೈದ್ಯರ ಹೇಳಿಕೆಯಲ್ಲಿ ಏನಿದೆ?

ಇಎಸ್‌ಪಿಎನ್‌ಕ್ರಿಕ್‌ಇನ್ಫೋ ವೆಬ್‌ಸೈಟ್ ಪ್ರಕಾರ, ಪಂತ್‌ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಿದ ಡಾ. ಸುಶೀಲ್ ನಗರ್ ಅವರ ಹೇಳಿಕೆಯ ಪ್ರಕಾರ, ಪಂತ್‌ಗೆ ತಲೆ ಮತ್ತು ಮೊಣಕಾಲು ಗಾಯಗಳಾಗಿವೆ. ಮೊದಲ ಎಕ್ಸ್-ರೇ ಪ್ರಕಾರ ಯಾವುದೇ ಮೂಳೆ ಮುರಿದಿಲ್ಲ. ಅಲ್ಲದೆ ಕಾರಿಗೆ ಬೆಂಕಿ ಹೊತ್ತಿಕೊಂಡರೂ ಸಹ ಪಂತ್​ಗೆ ಎಲ್ಲಿಯೂ ಸುಟ್ಟ ಗಾಯಗಳಾಗಿಲ್ಲ. ಹಣೆಯ ಮೇಲೆ, ಎಡಗಣ್ಣಿನ ಮೇಲೆ, ಮೊಣಕಾಲು ಮತ್ತು ಹಿಂಭಾಗದಲ್ಲಿ ಗಾಯಗಳಾಗಿವೆ ಎಂದು ವರದಿಯಾಗಿದೆ.

Car Accident: ಕಾರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಐವರು ಖ್ಯಾತ ಕ್ರಿಕೆಟಿಗರಿವರು

ದುಬೈಗೆ ಹಾರಿದ್ದ ಪಂತ್

ಕಳೆದ ವಾರ ಬಾಂಗ್ಲಾದೇಶ ವಿರುದ್ಧದ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಪಂತ್ ಕೊನೆಯದಾಗಿ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಪ್ರಮುಖ 93 ರನ್ ಭಾರಿಸಿದ್ದ ಪಂತ್, ಟೀಂ ಇಂಡಿಯಾ ಸರಣಿಯನ್ನು 2-0 ರಿಂದ ಗೆದ್ದುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿ ಮುಗಿದ ಬಳಿಕ ದುಬೈಗೆ ಹಾರಿದ್ದ ಪಂತ್, ಅಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಜೊತೆಗೂಡಿ ಸಮಯ ಕಳೆದಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:52 am, Fri, 30 December 22

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ