
ಬೆಂಗಳೂರು (ಜೂ. 28): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಭಾರತದ ಉಪನಾಯಕ ರಿಷಭ್ ಪಂತ್‌ಗೆ (Rishabh Pant) ವಿಶೇಷವಾಗಿತ್ತು. ಎಡಗೈ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಪಂತ್ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕಗಳನ್ನು ಗಳಿಸಿದರು. ಈ ಮೂಲಕ ರಿಷಭ್ ಪಂತ್ ಉತ್ತಮ ಫಾರ್ಮ್‌ನಲ್ಲಿದ್ದಾರೆ ಮತ್ತು ತಮ್ಮ ಬ್ಯಾಟ್‌ನಿಂದ ಸಾಕಷ್ಟು ರನ್ ಗಳಿಸುತ್ತಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಐದು ವಿಕೆಟ್‌ಗಳಿಂದ ಸೋಲನ್ನು ಎದುರಿಸಬೇಕಾಗಿ ಬಂದರೂ, ಪಂತ್ ಎರಡೂ ಇನ್ನಿಂಗ್ಸ್‌ಗಳಲ್ಲಿ ಸಿಡಿಸಿದ ಶತಕ ಎಲ್ಲರನ್ನೂ ಮೆಚ್ಚಿಸಿತು.
ಇಂಗ್ಲೆಂಡ್ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ರಿಷಭ್ ಪಂತ್ 134 ರನ್ ಗಳಿಸಿದರೆ ಎರಡನೇ ಇನ್ನಿಂಗ್ಸ್‌ನಲ್ಲಿ 118 ರನ್ ಗಳಿಸಿದರು. ಪಂತ್ ಕ್ರೀಸ್‌ನಲ್ಲಿ ಇರುವವರೆಗೂ ಭಾರತ ತಂಡ ಪಂದ್ಯದಲ್ಲಿ ದೊಡ್ಡ ಮೊತ್ತ ಕಲೆಹಾಕಲಿದೆ ಎಂಬ ನಂಬಿಕೆಯಿತ್ತು. ಈಗ ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ, ಭಾರತ ತಂಡವು ಪಂತ್ ಅವರಿಂದ ಮತ್ತೊಂದು ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸುತ್ತದೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಪಂತ್ ಶತಕ ಗಳಿಸಿದರೆ, ಇಂಗ್ಲೆಂಡ್ ನೆಲದಲ್ಲಿ ಸತತ ಮೂರು ಟೆಸ್ಟ್ ಶತಕಗಳನ್ನು ಗಳಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ.
ರಾಹುಲ್ ದ್ರಾವಿಡ್ 23 ವರ್ಷಗಳ ಹಿಂದಿನ ದಾಖಲೆ ಸಮ
ಭಾರತ ಪರ, ರಾಹುಲ್ ದ್ರಾವಿಡ್ 2002 ರಲ್ಲಿ ಇಂಗ್ಲೆಂಡ್ ನೆಲದಲ್ಲಿ ಸತತ ಮೂರು ಟೆಸ್ಟ್ ಶತಕಗಳನ್ನು ಗಳಿಸಿದರು. ಇಲ್ಲಿಯವರೆಗೆ ಹಾಗೆ ಮಾಡಿದ ಏಕೈಕ ಭಾರತೀಯ ಬ್ಯಾಟ್ಸ್‌ಮನ್ ಅವರು. ದ್ರಾವಿಡ್ ನಾಟಿಂಗ್‌ಹ್ಯಾಮ್ (115 ರನ್), ಲೀಡ್ಸ್ (148 ರನ್) ಮತ್ತು ದಿ ಓವಲ್ (217 ರನ್) ನಲ್ಲಿ ಟೆಸ್ಟ್ ಶತಕಗಳನ್ನು ಗಳಿಸಿದರು. ಈಗ ರಿಷಭ್ ಪಂತ್ ಸತತ ಮೂರು ಟೆಸ್ಟ್ ಶತಕಗಳನ್ನು ಗಳಿಸುವ ಮೂಲಕ 23 ವರ್ಷಗಳ ಹಳೆಯ ದಾಖಲೆಯನ್ನು ಪುನರಾವರ್ತಿಸುವ ಅವಕಾಶವನ್ನು ಹೊಂದಿದ್ದಾರೆ.
ENG vs IND 2nd Test: ಬ್ಯಾಟಿಂಗ್ ಅಭ್ಯಾಸ ಮಾಡುತ್ತಿರುವ ಸಿರಾಜ್: ಎರಡನೇ ಟೆಸ್ಟ್‌ಗೆ ಟೀಮ್ ಇಂಡಿಯಾ ತಯಾರಿ
ಭಾರತ ತಂಡಕ್ಕಾಗಿ 8 ಟೆಸ್ಟ್ ಶತಕಗಳನ್ನು ಗಳಿಸಿದ್ದಾರೆ
ರಿಷಭ್ ಪಂತ್ 2018 ರಲ್ಲಿ ಭಾರತ ತಂಡಕ್ಕೆ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಅಂದಿನಿಂದ, ಅವರು ಭಾರತೀಯ ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಮುಖ ಕೊಂಡಿಯಾಗಿದ್ದಾರೆ. ಅವರು ಇಲ್ಲಿಯವರೆಗೆ 44 ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 3200 ರನ್ ಗಳಿಸಿದ್ದಾರೆ, ಇದರಲ್ಲಿ 8 ಶತಕಗಳು ಮತ್ತು 15 ಅರ್ಧಶತಕಗಳು ಸೇರಿವೆ.
ಬೌಲರ್‌ಗಳು ಕಳಪೆ ಪ್ರದರ್ಶನ ನೀಡಿದರು
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಿದರು. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್‌ಗಳು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 364 ರನ್‌ಗಳನ್ನು ಗಳಿಸಿತು. ಆದರೆ ಜಸ್ಪ್ರೀತ್ ಬುಮ್ರಾ ಹೊರತುಪಡಿಸಿ, ಉಳಿದ ಬೌಲರ್‌ಗಳು ಪರಿಣಾಮಕಾರಿ ಆಗಲಿಲ್ಲ.
ಎರಡನೇ ಟೆಸ್ಟ್ ಯಾವಾಗ?:
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯವು ಜುಲೈ 2 ರಿಂದ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ. ಸದ್ಯ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಸೋತ ಕಾರಣ ಭಾರತ ಮತ್ತೆ ಪುಟಿದೇಳಬೇಕಿದೆ. ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೆ ಆಂಗ್ಲರ ಬಾಜ್‌ಬಾಲ್ ತಂತ್ರವನ್ನು ಎದುರಿಸಲು ಒಂದು ವಾರಕ್ಕೂ ಹೆಚ್ಚು ವಿರಾಮ ಇದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ