ಪಂತ್‌ಗೆ ಪದೇ ಪದೇ ಅವಕಾಶ ನೀಡುತ್ತಿರುವುದ್ಯಾಕೆ..? ಈ ಐದು ಕಾರಣಗಳೇ ಸ್ಯಾಮ್ಸನ್​ಗೆ ಮುಳುವಾಗಿವೆ..!

Team India: ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಸಂಜು ಸ್ಯಾಮ್ಸನ್ ಏಕದಿನ ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ ಇದರ ಹೊರತಾಗಿಯೂ ಅವರು ತಂಡದಿಂದ ಹೊರಗುಳಿಯಬೇಕಾಗಿದೆ.

ಪಂತ್‌ಗೆ ಪದೇ ಪದೇ ಅವಕಾಶ ನೀಡುತ್ತಿರುವುದ್ಯಾಕೆ..? ಈ ಐದು ಕಾರಣಗಳೇ ಸ್ಯಾಮ್ಸನ್​ಗೆ ಮುಳುವಾಗಿವೆ..!
sanju samson, rishabh pant
Follow us
TV9 Web
| Updated By: ಪೃಥ್ವಿಶಂಕರ

Updated on:Nov 30, 2022 | 9:09 AM

ಟೀಂ ಇಂಡಿಯಾ (Indian cricket team) ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದೆ. ಈ ಸರಣಿಯಲ್ಲಿ 1-0ಯಿಂದ ಹಿನ್ನಡೆ ಅನುಭವಿಸಿರುವ ಧವನ್ ಪಡೆಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅದ್ಭುತ ಪ್ರದರ್ಶನ ನೀಡಿದ ಹೊರತಾಗಿಯೂ ಸಂಜು ಸ್ಯಾಮ್ಸನ್​ರನ್ನು ( Sanju Samson) ತಂಡದಿಂದ ಕೈಬಿಡುತ್ತಿರುವುದು ಅಭಿಮಾನಿಗಳ ಕೋಪ ನೆತ್ತಿಗೇರುವಂತೆ ಮಾಡಿದೆ. ಈ ಸರಣಿಗೂ ಮೊದಲು ನಡೆದ ಟಿ20 ಸರಣಿಯಲ್ಲೂ ಸ್ಯಾಮ್ಸನ್​ಗೆ ಅವಕಾಶ ಸಿಗಲಿಲ್ಲ. ಇದು ಸಾಲದೆಂಬಂತೆ 2022 ರ ಟಿ20 ವಿಶ್ವಕಪ್‌ನಲ್ಲಿಯೂ ಅವರಿಗೆ ಅವಕಾಶ ಸಿಗಲಿಲ್ಲ. ಹಾಗೇ ನೋಡಿದರೆ ರಿಷಬ್ ಪಂತ್​ಗೆ (Rishabh Pant) ನೀಡಿದಷ್ಟು ಅವಕಾಶಗಳನ್ನು ಸಂಜುಗೆ ನೀಡಲಾಗಿಲ್ಲ. ಮೊದಮೊದಲು ಸಂಜುರನ್ನು ತಂಡಕ್ಕೆ ಆಯ್ಕೆ ಮಾಡುವುದಿಲ್ಲ. ಬಳಿಕ ತಂಡಕ್ಕೆ ಆಯ್ಕೆ ಮಾಡಿದರು ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ನೀಡುವುದಿಲ್ಲ. ಅಲ್ಲದೆ ತಂಡದ ನಾಯಕ ಹಾಗೂ ಕೋಚ್​ ಕೂಡ ಸಂಜು ಸ್ಯಾಮ್ಸನ್ ಬದಲಿಗೆ ರಿಷಬ್ ಪಂತ್​ಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಸಂಜು ಸ್ಯಾಮ್ಸನ್ ಏಕದಿನ ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ ಇದರ ಹೊರತಾಗಿಯೂ ಅವರು ತಂಡದಿಂದ ಹೊರಗುಳಿಯಬೇಕಾಗಿದೆ. ಈ ಕಡೆ ಪದೇ ಪದೇ ವಿಫಲರಾಗುತ್ತಿದ್ದರು ಪಂತ್​ಗೆ ಸಾಕಷ್ಟು ಅವಕಾಶ ನೀಡಲಾಗುತ್ತಿದೆ. ಇದಕ್ಕೆ ಕಾರಣ ಹುಡುಕಿ ಹೊರಟಾಗ ಸಿಕ್ಕ 5 ಪ್ರಮುಖ ಅಂಶಗಳ ವಿವರಣೆ ಇಲ್ಲಿದೆ.

ಟೆಸ್ಟ್​ನಲ್ಲಿ ಮಿಂಚಿದಕ್ಕೆ ಸೀಮಿತ ಓವರ್​ಗಳಲ್ಲಿ ಅವಕಾಶ?

ರಿಷಬ್ ಪಂತ್​ಗೆ ಸಂಜು ಸ್ಯಾಮ್ಸನ್​ಗಿಂತ ಹೆಚ್ಚು ಅವಕಾಶ ಸಿಗಲು ಪ್ರಮುಖ ಕಾರಣವೆಂದರೆ ಟೆಸ್ಟ್‌ನಲ್ಲಿ ರಿಷಬ್ ಪಂತ್ ಅವರ ಅದ್ಭುತ ಪ್ರದರ್ಶನ. ಈ ಎಡಗೈ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ 31 ಟೆಸ್ಟ್‌ಗಳಲ್ಲಿ 5 ಶತಕಗಳ ಆಧಾರದ ಮೇಲೆ 2123 ರನ್ ಗಳಿಸಿದ್ದಾರೆ. ಇಷ್ಟು ಕಡಿಮೆ ಸಮಯದಲ್ಲಿ ಪಂತ್ ಆಸ್ಟ್ರೇಲಿಯಾ-ಇಂಗ್ಲೆಂಡ್​ ನೆಲದಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಅಲ್ಲದೆ ಹಲವು ಬಾರಿ ಏಕಾಂಗಿಯಾಗಿ ನಿಂತು ಪಂದ್ಯ ಗೆಲ್ಲಿಸಿಕೊಟ್ಟಿದ್ದಾರೆ. ಆದ್ದರಿಂದ ಟೆಸ್ಟ್ ಕ್ರಿಕೆಟ್​ನಲ್ಲಿ ಪಂತ್ ಆಡಿರುವ ಅದ್ಭುತ ಇನ್ನಿಂಗ್ಸ್‌ಗಳನ್ನು ಮರೆಯಲು ಸಾಧ್ಯವಿಲ್ಲ. ಹೀಗಾಗಿ ಟೆಸ್ಟ್‌ನಲ್ಲಿ ಪಂತ್ ಅವರ ಅತ್ಯುತ್ತಮ ಪ್ರದರ್ಶನವು ಅವರಿಗೆ ಏಕದಿನ ಮತ್ತು ಟಿ20 ಸ್ವರೂಪದಲ್ಲಿ ಹೆಚ್ಚು ಅವಕಾಶ ಸಿಗಲು ಕಾರಣವಾಗಿದೆ.

ಇದನ್ನೂ ಓದಿ: IND vs NZ: ಸಂಜು ಸ್ಯಾಮ್ಸನ್‌ಗಿಲ್ಲ ಸ್ಥಾನ! ಕಿವೀಸ್ ತಂಡದಲ್ಲಿ ಒಂದು ಬದಲಾವಣೆ; ಹೀಗಿವೆ ಉಭಯ ತಂಡಗಳು

ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿರುವುದೇ ಪ್ಲಸ್​ ಪಾಯಿಂಟ್

ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಹೆಚ್ಚಿನ ಬ್ಯಾಟ್ಸ್‌ಮನ್‌ಗಳು ಬಲಗೈ ಬ್ಯಾಟ್ಸ್​ಮನ್​ಗಳಾಗಿದ್ದಾರೆ. ಆದರೆ ರಿಷಬ್ ಪಂತ್ ಎಡಗೈ ಬ್ಯಾಟ್ಸ್​ಮನ್ ಆಗಿದ್ದಾರೆ. ಹೀಗಾಗಿ ತಂಡದ ಸಂಯೋಜನೆಯನ್ನು ಸರಿದೂಗಿಸುವ ಸಲುವಾಗಿ ಪಂತ್​ಗೆ ಹೆಚ್ಚಿನ ಅವಕಾಶಗಳು ಸಿಗುತ್ತಿವೆ. ಅಲ್ಲದೆ ಎಡ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳು ಕ್ರೀಸ್‌ನಲ್ಲಿದ್ದಾಗ ಎದುರಾಳಿ ಬೌಲರ್‌ಗಳು ಬೌಲಿಂಗ್‌ನಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ಎಂಬುದು ತಂಡದ ಆಡಳಿತ ಮಂಡಳಿಯ ಚಿಂತನೆಯೂ ಆಗಿದೆ. ಹೀಗಾಗಿ ತಂಡದಲ್ಲಿ ಬಲಗೈ ಬ್ಯಾಟ್ಸ್​ಮನ್​ಗಳೆ ಹೆಚ್ಚಿರುವುದರಿಂದ ಆಯ್ಕೆ ಮಂಡಳಿಯ ಒಲವು ಸಂಜು ಸ್ಯಾಮ್ಸನ್​ಗಿಂತ ಹೆಚ್ಚಾಗಿ ಪಂತ್ ಮೇಲೆ ಇದೆ.

ಸ್ಫೋಟಕ ಬ್ಯಾಟ್ಸ್‌ಮನ್

2017 ರಲ್ಲಿ ಟೀಂ ಇಂಡಿಯಾಕ್ಕೆ ಪಾದಾರ್ಪಣೆ ಮಾಡಿದ ಪಂತ್ ಆರಂಭದಿಂದಲೇ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಹೆಸರುವಾಸಿಯಾದರು. ಆಸ್ಟ್ರೇಲಿಯಾ ಪ್ರವಾಸದಲ್ಲೂ ಪಂತ್ ಇದನ್ನು ಸಾಬೀತುಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಗಬ್ಬಾ ಟೆಸ್ಟ್ ಪಂದ್ಯದಲ್ಲಿ 89 ರನ್‌ಗಳ ಇನ್ನಿಂಗ್ಸ್ ಆಡಿದ ಪಂತ್, ಏಕಾಂಗಿಯಾಗಿ ಟೀಮ್ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದ್ದರು. ಈ ಇನ್ನಿಂಗ್ಸ್ ಬಳಿಕ ಟೀಂ ಇಂಡಿಯಾ ಅಭಿಮಾನಿಗಳ ಮನದಲ್ಲಿ ಪಂತ್ ಖಾಯಂ ಸ್ಥಾನ ಪಡೆದರು. ಇದರ ಜೊತೆಗೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಏಕದಿನ ಸರಣಿಯಲ್ಲೂ ಅದ್ಭುತ ಶತಕ ಬಾರಿಸಿದ್ದರು. ಹಾಗೆಯೇ ಆರಂಭದಲ್ಲಿ ಸಿಕ್ಕ ಎಲ್ಲಾ ಅವಕಾಶಗಳನ್ನು ಪಂತ್‌ ಎರಡೂ ಕೈಗಳಿಂದ ಬಾಚಿಕೊಂಡರು. ಟೀಂ ಇಂಡಿಯಾ ಸಂಕಷ್ಟದ ಪರಿಸ್ಥಿತಿಯಲ್ಲಿ ಸಿಲುಕಿದಾಗಲೆಲ್ಲ ಪಂತ್ ಏಕಾಂಗಿ ಹೋರಾಟ ನಡೆಸಿ ತಂಡಕ್ಕೆ ನೆರವಾಗುತ್ತಿದ್ದರು. ಮತ್ತೊಂದೆಡೆ, 2015 ರಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ ಸಂಜು ಸ್ಯಾಮ್ಸನ್, ತಮ್ಮ ಕಳಪೆ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವಲ್ಲಿ ವಿಫಲರಾದರು.

ಪಂತ್ ತಂಡದ ಎಕ್ಸ್​ ಫ್ಯಾಕ್ಟರ್

ಯಾವುದೇ ಸಂದರ್ಭಗಳು ಇದ್ದಿರಬಹುದು, ರಿಷಬ್ ಪಂತ್ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ನೊಂದಿಗೆ ರಾಜಿ ಮಾಡಿಕೊಳ್ಳಲಿಲ್ಲ. ಕ್ರೀಸ್​ಗೆ ಬಂದ ತಕ್ಷಣ ಸ್ಫೋಟಕ ಬ್ಯಾಟಿಂಗ್​ ಮಾಡುವುದಕ್ಕೆ ಪಂತ್ ಫೇಮಸ್ ಆಗಿದ್ದಾರೆ. ಹೀಗಾಗಿ ಪಂತ್​ ಅವರನ್ನು ಯಾವಾಗಲೂ ಟೀಮ್ ಇಂಡಿಯಾದ ಎಕ್ಸ್ ಫ್ಯಾಕ್ಟರ್ ಎಂದು ಪರಿಗಣಿಸಲಾಗಿದೆ. ಆಗಾಗ್ಗೆ ಎದುರಾಳಿ ತಂಡಗಳು ಅವರಿಗಾಗಿ ವಿಶೇಷ ಯೋಜನೆಗಳನ್ನು ಮಾಡುತ್ತವೆ. ಏಕೆಂದರೆ ಪಂತ್ ಕ್ರೀಸ್‌ನಲ್ಲಿ ಉಳಿದರೆ ಎದುರಾಳಿ ತಂಡಕ್ಕೆ ಸೋಲು ಖಚಿತ

ವಿಕೆಟ್ ಕೀಪಿಂಗ್ ಕೌಶಲ್ಯ ಉತ್ತಮವಾಗಿದೆ

ರಿಷಬ್ ಪಂತ್ ವಿಶ್ವದ ಅತ್ಯುತ್ತಮ ವಿಕೆಟ್ ಕೀಪರ್ ಅಲ್ಲ ಆದರೆ ಅವರು ಈ ಕಲೆಯಲ್ಲಿ ಅದ್ಭುತವಾಗಿ ಸುಧಾರಿಸಿದ್ದಾರೆ. ಆಗಾಗ್ಗೆ, ವೃದ್ಧಿಮಾನ್ ಸಹಾ ಬದಲಿಗೆ ಪಂತ್‌ಗೆ ಅವಕಾಶ ನೀಡಿದಾಗ, ಈ ಎಡಗೈ ಬ್ಯಾಟ್ಸ್‌ಮನ್‌ನ ವಿಕೆಟ್ ಕೀಪಿಂಗ್ ಬಗ್ಗೆ ಪ್ರಶ್ನೆಗಳು ಉದ್ಭವಿಸಿದವು. ಆದರೆ ಇದರ ನಂತರ, ಪಂತ್ ವಿಕೆಟ್ ಕೀಪಿಂಗ್‌ನಲ್ಲಿ ಸಾಕಷ್ಟು ಶ್ರಮಿಸಿದರು. ಅಲ್ಲದೆ ಸಂಜು ಸ್ಯಾಮ್ಸನ್‌ಗೆ ಹೋಲಿಸಿದರೆ ಪಂತ್ ಉತ್ತಮ ವಿಕೆಟ್‌ಕೀಪರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:04 am, Wed, 30 November 22

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ