ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವಣ ಏಕದಿನ ಸರಣಿಗೆ ಚಾಲನೆ ಸಿಕ್ಕಿದೆ. ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆದಿವೆ. ಕುಲ್ದೀಪ್ ಸೇನ್ ಚೊಚ್ಚಲ ಬಾರಿಗೆ ಅವಕಾಶ ಪಡೆದು ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಅಕ್ಷರ್ ಪಟೇಲ್ ಸ್ಥಾನ ಪಡೆದುಕೊಂಡಿಲ್ಲ. ರಿಷಭ್ ಪಂತ್ (Rishabh Pant) ಕೂಡ ಪ್ಲೇಯಿಂಗ್ ಇಲೆವೆನ್ನಿಂದ ಔಟಾಗಿದ್ದು ಕೆಎಲ್ ರಾಹುಲ್ (KL Rahul) ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಇದರ ನಡುವೆ ಅಚ್ಚರಿ ಎಂಬಂತೆ ರಿಷಭ್ ಪಂತ್ ಈ ಪಂದ್ಯದಿಂದ ಮಾತ್ರವಲ್ಲದೆ ಏಕದಿನ ಸರಣಿಯಿಂದಲೇ ಹೊರಬಿದ್ದಿದ್ದಾರೆ.
ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ತನ್ನ ಟ್ವಿಟರ್ ಖಾತೆಯಲ್ಲಿ ಹೇಳಿಕೆ ನೀಡಿದ್ದು, ”ಬಿಸಿಸಿಐ ವೈದ್ಯಕೀಯ ತಂಡದೊಂದಿಗೆ ಸಮಾಲೋಚನೆ ನಡೆಸಿ ರಿಷಬ್ ಪಂತ್ ಅವರನ್ನು ಏಕದಿನ ತಂಡದಿಂದ ಬಿಡುಗಡೆ ಮಾಡಲಾಗಿದೆ. ಅವರು ಟೆಸ್ಟ್ ಸರಣಿ ಆರಂಭ ಆಗುವ ಹೊತ್ತಿಗೆ ತಂಡ ಸೇರಿಕೊಳ್ಳಲಿದ್ದಾರೆ,” ಎಂದು ಬರೆದುಕೊಂಡಿದೆ. ಹಾಗೆಯೆ ರಿಷಭ್ ಪಂತ್ ಜಾಗಕ್ಕೆ ಯಾವುದೇ ಬದಲಿ ಆಟಗಾರ ಇಲ್ಲ ಎಂಬುದನ್ನೂ ಸ್ಪಷ್ಟಪಡಿಸಿದೆ. ಪಂತ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ಷರ್ ಪಟೇಲ್ ಕೂಡ ಮೊದಲ ಏಕದಿನದಲ್ಲಿ ಕಣಕ್ಕಿಳಿಯುತ್ತಿಲ್ಲ ಎಂದು ಬಿಸಿಸಿಐ ಹೇಳಿದೆ.
? UPDATE
In consultation with the BCCI Medical Team, Rishabh Pant has been released from the ODI squad. He will join the team ahead of the Test series. No replacement has been sought
Axar Patel was not available for selection for the first ODI.#TeamIndia | #BANvIND
— BCCI (@BCCI) December 4, 2022
ಭಾರತದ ಪ್ಲೇಯಿಂಗ್ ಇಲೆವೆನ್ ಬಗ್ಗೆ ನೋಡುವುದಾದರೆ, ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಓಪನರ್ಗಳಾಗಿ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ನಂತರದ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದು, ವಿಕೆಟ್ ಕೀಪರ್ ಜವಾಬ್ದಾರಿ ಕೆಎಲ್ ರಾಹುಲ್ ವಹಿಸಿಕೊಂಡಿದ್ದಾರೆ. ಆಲ್ರೌಂಡರ್ ಹಾಗೂ ಸ್ಪಿನ್ನರ್ಗಳಾಗಿ ಇಬ್ಬರಿದ್ದು ವಾಷಿಂಗ್ಟನ್ ಸುಂದರ್ ಮತ್ತು ಶಹ್ಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ. ವೇಗಿಗಳ ಸಾಲಿನಲ್ಲಿ ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಸೇನ್ ಪ್ಲೇಯಿಂಗ್ XI ನಲ್ಲಿ ಕಾಣಿಸಿಕೊಂಡಿದ್ದಾರೆ.
Mohammed Shami: ಬಾಂಗ್ಲಾ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತಕ್ಕೆ ಬಿಗ್ ಶಾಕ್: ಮೊಹಮ್ಮದ್ ಶಮಿ ಔಟ್
ಬಾಂಗ್ಲಾದೇಶ ತಂಡದ ಪ್ಲೇಯಿಂಗ್ ಇಲೆವೆನ್ ಕೂಡ ಬಲಿಷ್ಠವಾಗಿದೆ. ನಾಯಕ ಲಿಟ್ಟನ್ ದಾಸ್, ಅನಾಮುಲ್ ಹಕ್ ಬಿಜೋಯ್, ನಜ್ಮುಲ್ ಹುಸೈನ್, ಶಕಿಬ್ ಅಲ್ ಹಸನ್, ವಿಕೆಟ್ ಕೀಪರ್ ಆಗಿ ಮುಷ್ಫೀಕುರ್ ರಹೀಮ್, ಮೊಹಮ್ಮದುಲ್ಲ, ಅಫೀಫ್ ಹುಸೇನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಮುಸ್ತಫಿಜುರ್ ರೆಹಮಾನ್ ಮತ್ತು ಎಬಾಡೋತ್ ಹುಸೇನ್ ಮೊದಲ ಏಕದಿನದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಶಮಿ ಕೂಡ ಹೊರಕ್ಕೆ:
ಇತ್ತೀಚೆಗಷ್ಟೆ ಮುಕ್ತಾಯಗೊಂಡ ಐಸಿಸಿ ಟಿ20 ವಿಶ್ವಕಪ್‌ನಿಂದ ಭಾರತ ತಂಡ ಸೆಮಿಫೈನಲ್‌ನಲ್ಲಿ ನಿರ್ಗಮಿಸಿ ಆಸ್ಟ್ರೇಲಿಯಾದಿಂದ ಹಿಂದಿರುಗಿದ ನಂತರ ಶಮಿ ತರಬೇತಿ ಅವಧಿಯಲ್ಲಿ ಗಾಯಗೊಂಡಿದ್ದಾರೆ. ಹೀಗಾಗಿ ಇವರು ಬಾಂಗ್ಲಾ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಕೇವಲ ಏಕದಿನದಿಂದ ಮಾತ್ರವಲ್ಲದೆ ಡಿಸೆಂಬರ್ 14 ರಿಂದ ಚಿತ್ತಗಾಂಗ್‌ನಲ್ಲಿ ಪ್ರಾರಂಭವಾಗುವ ಎರಡು-ಟೆಸ್ಟ್ ಸರಣಿಗೂ ಶಮಿ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. “ಆಸ್ಟ್ರೇಲಿಯದಿಂದ ತವರಿಗೆ ಮರಳಿ ತರಬೇತಿಯನ್ನು ಪುನರಾರಂಭಿಸಿದ ನಂತರ ಮೊಹಮ್ಮದ್ ಶಮಿ ಕೈಗೆ ಗಾಯ ಮಾಡಿಕೊಂಡಿದ್ದಾರೆ. ಅವರನ್ನು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ವರದಿ ಮಾಡಲು ಹೇಳಿದ್ದೇವೆ,” ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಹೆಚ್ಚಿನ ಕ್ರೀಡಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:36 am, Sun, 4 December 22