Rishabh Pant Health: ಚೇತರಿಸಿಕೊಳ್ಳುತ್ತಿರುವ ಪಂತ್: ಲಂಡನ್ನಿಂದ ಬಂದ ರಿಷಭ್ ಸಹೋದರಿ
Rishabh Pant Car Accident: ಮೊದಲ ದಿನಕ್ಕೆ ಹೋಲಿಸಿದರೆ ಪಂತ್ ಅವರು ಸ್ವಲ್ಪ ಚೇತರಿಸಿಕೊಂಡಿದ್ದಾರೆ. ವೈದ್ಯರು ಪ್ಲಾಸ್ಟಿಕ್ ಸರ್ಜರಿ ಮಾಡಿದ್ದು ಅವರ ಆರೊಗ್ಯ ಸ್ಥಿತಿ ಸುಧಾರಣೆಯಾಗುತ್ತಿದೆ. ಲಂಡನ್ನಿಂದ ಪಂತ್ ಅವರ ಸಹೋದರಿ ಸಾಕ್ಷಿ ಆಗಮಿಸಿದ್ದು ತಾಯಿ ಜೊತೆ ಆಸ್ಪತ್ರೆಯಲ್ಲೇ ಇದ್ದಾರೆ.
ಟೀಮ್ ಇಂಡಿಯಾ (Team India) ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಶುಕ್ರವಾರ ಮುಂಜಾನೆ ತಮ್ಮ ಮರ್ಸಿಡಿಸ್ ಕಾರಿನಲ್ಲಿ ದೆಹಲಿಯಿಂದ ರೂರ್ಕಿಗೆ ಹೋಗುತ್ತಿದ್ದ ಸಂದರ್ಭ ಭೀಕರ ಕಾರು ಅಪಘಾತ (Accident) ಸಂಭವಿಸಿ ಡೆಹ್ರಾಡೂನ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಪಂತ್ ಅಪಾಯದಿಂದ ಪಾರಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಆದರೂ ಅವರು ಕೆಲವು ಪರೀಕ್ಷೆಗಳಿಗೆ ಒಳಗಾಗಬೇಕಿದೆ. ತಲೆ, ಬೆನ್ನು ಮತ್ತು ಪಾದಗಳಿಗೆ ಗಂಭೀರ ಗಾಯಗಳಾದ ಪರಿಣಾಮ ಗುಣಮುಖರಾಗಲು ಕೆಲವು ತಿಂಗಳುಗಳ ಕಾಲ ಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಲಂಡನ್ನಿಂದ ಪಂತ್ ಅವರ ಸಹೋದರಿ ಸಾಕ್ಷಿ ಆಗಮಿಸಿದ್ದು ತಾಯಿ ಜೊತೆ ಆಸ್ಪತ್ರೆಯಲ್ಲೇ ಇದ್ದಾರೆ.
ಮೊದಲ ದಿನಕ್ಕೆ ಹೋಲಿಸಿದರೆ ಪಂತ್ ಅವರು ಸ್ವಲ್ಪ ಚೇತರಿಸಿಕೊಂಡಿದ್ದಾರೆ. ವೈದ್ಯರು ಪ್ಲಾಸ್ಟಿಕ್ ಸರ್ಜರಿ ಮಾಡಿದ್ದು ಅವರ ಆರೊಗ್ಯ ಸ್ಥಿತಿ ಸುಧಾರಣೆಯಾಗುತ್ತಿದೆ. ನಿನ್ನೆಯ ಪರಿಸ್ಥಿತಿಗೆ ಹೋಲಿಕೆ ಮಾಡಿದರೆ, ಶೇ. 10ರಷ್ಟು ಸುಧಾರಣೆ ಕಂಡಿದೆಯಂತೆ. ಪಂತ್ ಕಣ್ಣು ತೆರೆದು ನೋಡುತ್ತಿದ್ದಾರೆ. ಸ್ವಲ್ಪ ಮಾತನಾಡಲು ಸಹ ಯತ್ನಿಸುತ್ತಿದ್ದಾರೆ. ಬೆನ್ನುನೋವಿನಿಂದ ಅವರು ಸ್ವಲ್ಪ ತೊಂದರೆ ಅನುಭವಿಸುತ್ತಿದ್ದಾರೆ. ಬಿಸಿಸಿಐ ವೈದ್ಯರ ತಂಡವು ಕೂಡ ಮ್ಯಾಕ್ಸ್ ಆಸ್ಪತ್ರೆಯ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ಪಂತ್ ಅವರಿಗೆ ಆಂತರಿಕ ಗಾಯಗಳಾಗಿವೆ. ಅಂತಹ ಪರಿಸ್ಥಿತಿಯಲ್ಲಿ ಚೇತರಿಸಿಕೊಳ್ಳಲು ಅವರು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದಂತೆ.
ಪಂತ್ ಅವರನ್ನು ಭೇಟಿಯಾದ ನಂತರ ಹೇಳಿಕೆ ನೀಡಿರುವ ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ, ”ಪಂತ್ ಅವರ ಆರೋಗ್ಯ ಸ್ಥಿರವಾಗಿದೆ. ಅಲ್ಲದೆ ಪಂತ್ ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಬಿಸಿಸಿಐ ವೈದ್ಯರು ಇಲ್ಲಿನ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ಜೈ ಷಾ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ಸದ್ಯಕ್ಕೆ ಪಂತ್ಗೆ ಇಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ. ಹೀಗಾಗಿ ಏರ್ ಲಿಫ್ಟ್ ಮಾಡುವ ಅಗತ್ಯವಿಲ್ಲ,” ಎಂದು ಹೇಳಿದ್ದಾರೆ.
Year Ender 2022: 2022ರಲ್ಲಿ ತಂಡದ ನಾಯಕತ್ವದಿಂದ ಕೆಳಗಿಳಿದ 6 ಕ್ರಿಕೆಟಿಗರಿವರು
ಕನಿಷ್ಠ 8 ತಿಂಗಳು ಪಂತ್ ಕ್ರಿಕೆಟ್ನಿಂದ ದೂರ?:
ರಿಷಭ್ ಪಂತ್ ಬಲಗಾಲಿನ ಮಂಡಿಯ ಲಿಗಮೆಂಟ್ (ಅಸ್ಥಿರಜ್ಜು) ಹರಿದಿರುವುದು ಪರೀಕ್ಷೆಯಲ್ಲಿ ಗೊತ್ತಾಗಿದೆ. ಈ ಅಪಘಾತಕ್ಕೂ ಮುನ್ನ ಪಂತ್ ಮೊಣಕಾಲು ಬಲಪಡಿಸಲು ಜನವರಿ 6 ರಂದು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಹಾಜರಾಗಲು ಬಿಸಿಸಿಐ ಸೂಚಿಸಿತ್ತು. ಅಲ್ಲಿ ಕಂಡೀಷನಿಂಗ್ ಮತ್ತು ಅಭ್ಯಾಸ ಮಾಡಲು ಸೂಚನೆ ನೀಡಲಾಗಿತ್ತು. ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಮುನ್ನ ಅವರು ಫಿಟ್ ಆಗಬೇಕೆಂದು ಬಿಸಿಸಿಐ ಬಯಸಿತ್ತು. ಆದರೀಗ ಮೊಣಕಾಲಿನ ನೋವು ಅಪಘಾತದಿಂದ ಹೆಚ್ಚಾಗಿದೆ. ಪಂತ್ ಗಾಯದ ಪ್ರಮಾಣ ಅಧಿಕವಾಗಿರುವ ಕಾರಣ ಕ್ರಿಕೆಟ್ನಿಂದ ಕನಿಷ್ಠ ಎಂಟು ತಿಂಗಳುಗಳ ಕಾಲ ದೂರವಿರಬೇಕಾಗಬಹುದು ಎನ್ನಲಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಸೇರಿದಂತೆ ಐಪಿಎಲ್ 2023 ರಿಂದ ಬಹುತೇಕ ಹೊರಗುಳಿಯಲಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ