Rishabh Pant: ರಿಷಬ್ ಪಂತ್​ಗೆ ಮತ್ತೊಂದು ಶಸ್ತ್ರಚಿಕಿತ್ಸೆ; ಏಷ್ಯಾಕಪ್- ವಿಶ್ವಕಪ್​ನಿಂದ ಬಹುತೇಕ ಔಟ್!

Rishabh Pant Health Update: ಪಂತ್​ಗೆ ಇನ್ನೂ ಒಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಿದ್ದು, ಈ ಶಸ್ತ್ರಚಿಕಿತ್ಸೆ ಮಾಡಲು ಕನಿಷ್ಠ 6 ವಾರ ಕಾಯಬೇಕು.

Rishabh Pant: ರಿಷಬ್ ಪಂತ್​ಗೆ ಮತ್ತೊಂದು ಶಸ್ತ್ರಚಿಕಿತ್ಸೆ; ಏಷ್ಯಾಕಪ್- ವಿಶ್ವಕಪ್​ನಿಂದ ಬಹುತೇಕ ಔಟ್!
ರಿಷಬ್ ಪಂತ್
Follow us
TV9 Web
| Updated By: ಪೃಥ್ವಿಶಂಕರ

Updated on: Jan 15, 2023 | 11:37 AM

ಟೀಂ ಇಂಡಿಯಾ (Team India) ಈ ವರ್ಷ ತನ್ನದೇ ನೆಲದಲ್ಲಿ ವಿಶ್ವಕಪ್ (World Cup 2023) ಆಡಬೇಕಿದೆ. ಹಾಗಾಗಿ ಈ ಬಾರಿಯ ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಯಾರಿಗೆ ಅವಕಾಶ ಸಿಗುತ್ತದೆ, ಯಾರಿಗೆ ಅವಕಾಶ ಸಿಗುವುದಿಲ್ಲ ಎಂಬ ಚರ್ಚೆ ಈಗಾಗಲೇ ನಡೆಯುತ್ತಿದೆ. ಇದರೊಂದಿಗೆ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ (Rishabh Pant) ಟೂರ್ನಿಗೆ ಸಂಪೂರ್ಣ ಫಿಟ್ ಆಗುತ್ತಾರೆಯೇ ಎಂಬುದು ದೊಡ್ಡ ಆತಂಕ ಮತ್ತು ಪ್ರಶ್ನೆಯಾಗಿದೆ. ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರಿಷಬ್ ಪಂತ್ ಸದ್ಯ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಅಪಘಾತದಲ್ಲಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದ ಪಂತ್ ಕೆಲವು ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಪಂತ್ ಇನ್ನೊಂದು ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಕಳೆದ ವರ್ಷ, ಅಂದರೆ 30 ಡಿಸೆಂಬರ್ 2022 ರಂದು, ದೆಹಲಿಯಿಂದ ರೂರ್ಕಿಗೆ ಹೋಗುತ್ತಿದ್ದಾಗ, ರಿಷಬ್ ಪಂತ್ ಅವರ ಕಾರು ಭೀಕರ ಅಪಘಾತಕ್ಕೆ ಒಳಗಾಗಿತ್ತು. ಈ ಅಪಘಾತದಲ್ಲಿ ಪಂತ್ ತೀವ್ರವಾಗಿ ಗಾಯಗೊಂಡಿದ್ದರು. ಈ ಅಪಘಾತದಲ್ಲಿ ಅವರ ಜೀವಕ್ಕೆ ಅಪಾಯವಾಗದಿದ್ದರೂ, ಮೊಣಕಾಲು ಮತ್ತು ಕಾಲಿನ ಉಳಿದ ಭಾಗಗಳಿಗೆ ಸಾಕಷ್ಟು ಗಾಯಗಳಾಗಿದ್ದವು. ಇದರಿಂದಾಗಿ ಪಂತ್ ಮತ್ತೆ ಮೈದಾನಕ್ಕೆ ಮರಳಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ, ಮುಂಬೈನ ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಯಲ್ಲಿ ಪಂತ್ ಅವರ ಮೊಣಕಾಲಿನ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿತ್ತು.

IPL 2023: ಐಪಿಎಲ್​ನಿಂದ ರಿಷಬ್ ಪಂತ್ ಔಟ್! ಬಿಗ್ ಅಪ್​ಡೇಟ್ ನೀಡಿದ ಸೌರವ್ ಗಂಗೂಲಿ

6 ವಾರಗಳಲ್ಲಿ ಮತ್ತೆ ಶಸ್ತ್ರಚಿಕಿತ್ಸೆ

ಈಗ ಸಿಕ್ಕಿರುವ ಲೇಟೆಸ್ಟ್ ಅಪ್ಡೇಟ್ ಏನೆಂದರೆ ಪಂತ್ ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಇಎಸ್‌ಪಿಎನ್ ಕ್ರಿಕ್‌ಇನ್‌ಫೋ ವರದಿಯ ಪ್ರಕಾರ, ಪಂತ್​ಗೆ ಇನ್ನೂ ಒಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಿದ್ದು, ಈ ಶಸ್ತ್ರಚಿಕಿತ್ಸೆ ಮಾಡಲು ಕನಿಷ್ಠ 6 ವಾರ ಕಾಯಬೇಕು. ಅಲ್ಲದೆ ವರದಿಯ ಪ್ರಕಾರ, ಪಂತ್ ಅವರ ಸ್ಥಿತಿಯ ಕುರಿತು ಬಿಸಿಸಿಐ ಸ್ವೀಕರಿಸಿದ ಇತ್ತೀಚಿನ ಮಾಹಿತಿಯ ಪ್ರಕಾರ, ಪಂತ್ ಕನಿಷ್ಠ 6 ತಿಂಗಳ ಕಾಲ ಮೈದಾನದಿಂದ ಹೊರಗುಳಿಯುತ್ತಾರೆ ಎಂದು ಹೇಳಲಾಗಿದೆ.

ಐಪಿಎಲ್​, ವಿಶ್ವಕಪ್​ನಿಂದ ಔಟ್

ಪಂತ್ ಅವರ ಅತ್ಯಂತ ಗಂಭೀರವಾದ ಗಾಯವೆಂದರೆ ಅವರ ‘ಲಿಗಮೆಂಟ್ ಟಿಯರ್’. ಹೀಗಾಗಿ ಪಂತ್ ಮೈದಾನಕ್ಕೆ ಮರಳುವ ಸ್ಥಿತಿಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ, ಆದರೆ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಮೂಲಗಳ ಪ್ರಕಾರ, ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್‌ಗಳ ಸರಣಿಯಲ್ಲಿ ಪಂತ್ ಕಣಕ್ಕಿಳಿಯುವುದು ಅಸಾಧ್ಯವಾಗಿದೆ.

ಪಂತ್‌ಗೆ ಐಪಿಎಲ್‌ನಲ್ಲಿ ಆಡುವುದು ಕೂಡ ಕಷ್ಟವಾಗುತ್ತಿದೆ. ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ನಾಯಕರಾಗಿರುವ ಪಂತ್ ಒಂದು ವೇಳೆ ಈ ಆವೃತ್ತಿಯನ್ನು ಆಡದೇ ಇದ್ದರೆ ಫ್ರಾಂಚೈಸಿಗೆ ಆತಂಕ ಎದುರಾಗಲಿದೆ. ಫ್ರಾಂಚೈಸ್ ಅವರ ಬದಲಿ ಆಟಗಾರನ ಜೊತೆಗೆ ನಾಯಕ ಮತ್ತು ವಿಕೆಟ್ ಕೀಪರ್ ಅನ್ನು ಕೂಡ ಹುಡುಕಬೇಕಾಗಿದೆ. ಪಂತ್ ಈ ಐಪಿಎಲ್​ನಿಂದ ಔಟಾದರೆ ಡೇವಿಡ್ ವಾರ್ನರ್ ತಂಡದ ನಾಯಕರಾಗುವ ಸಾಧ್ಯತೆಗಳಿವೆ. ಏಕೆಂದರೆ ವಾರ್ನರ್​ಗೆ ಈ ಹಿಂದೆ ಐಪಿಎಲ್‌ನಲ್ಲಿ ನಾಯಕತ್ವ ವಹಿಸಿದ ಅನುಭವವೂ ಇದೆ.

ಐಪಿಎಲ್ ಜೊತೆಗೆ ಪಂತ್ ಈ ವರ್ಷ ಯಾವುದೇ ಪ್ರಮುಖ ಟೂರ್ನಿಯಲ್ಲಿ ಆಡುವುದು ಅನುಮಾನವಾಗಿದೆ. ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಷ್ಯಾಕಪ್ ಮತ್ತು ನಂತರ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಆಡುವುದು ಕೂಡ ಡೌಟ್ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ