DC vs LSG: ನಾನು ಆರ್​ಸಿಬಿ ವಿರುದ್ಧ ಆಡಿದ್ದರೆ..: ಲಕ್ನೋ ವಿರುದ್ಧ ಗೆದ್ದ ಬಳಿಕ ರಿಷಭ್ ಪಂತ್ ಶಾಕಿಂಗ್ ಸ್ಟೇಟ್ಮೆಂಟ್

Rishabh Pant post match presentation: ನಿಯಮ ಉಲ್ಲಂಘನೆಯ ಕಾರಣದಿಂದ ರಿಷಭ್ ಪಂತ್ ಕಳೆದ ಆರ್​ಸಿಬಿ ವಿರುದ್ಧದ ಪಂದ್ಯದಿಂದ ಹೊರಗಿದ್ದರು. ಈ ಬಗ್ಗೆ ಲಕ್ನೋ ವಿರುದ್ಧದ ಪಂದ್ಯ ಮುಗಿದ ಬಳಿಕ ಮಾತನಾಡಿರುವ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಂತ್ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಏನು ಹೇಳಿದ್ರು?, ಇಲ್ಲಿದೆ ಮಾಹಿತಿ.

DC vs LSG: ನಾನು ಆರ್​ಸಿಬಿ ವಿರುದ್ಧ ಆಡಿದ್ದರೆ..: ಲಕ್ನೋ ವಿರುದ್ಧ ಗೆದ್ದ ಬಳಿಕ ರಿಷಭ್ ಪಂತ್ ಶಾಕಿಂಗ್ ಸ್ಟೇಟ್ಮೆಂಟ್
RCB and Rishabh Pant Post Match
Follow us
Vinay Bhat
|

Updated on: May 15, 2024 | 7:25 AM

ಐಪಿಎಲ್ 2024 ರಲ್ಲಿ ಮಂಗಳವಾರ ಡೆಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೇಂಟ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC vs LSG) ಭರ್ಜರಿ ಜಯ ಸಾಧಿಸಿದೆ. ಅಭಿಷೇಕ್ ಪೊರೆಲ್ (58) ಮತ್ತು ಟ್ರಿಸ್ಟಾನ್ ಸ್ಟಬ್ಸ್ (ಔಟಾಗದೆ 57) ಅರ್ಧಶತಕಗಳ ನೆರವಿನಿಂದ ಎಲ್‌ಎಸ್‌ಜಿಯನ್ನು 19 ರನ್‌ಗಳಿಂದ ಸೋಲಿಸಿತು. ಈ ಜಯದ ಮೂಲಕ ಪಂತ್ ಪಡೆಯ ಪ್ಲೇಆಫ್ ತಲುಪುವ ಮಸುಕಾದ ಭರವಸೆಗಳು ಹಾಗೇ ಉಳಿದಿವೆ. ಸದ್ಯ ಡೆಲ್ಲಿ 14 ಪಂದ್ಯಗಳಲ್ಲಿ ಏಳು ಗೆಲುವು ಕಂಡಿದೆ. ನಿಯಮ ಉಲ್ಲಂಘನೆಯ ಕಾರಣದಿಂದ ರಿಷಭ್ ಪಂತ್ ಕಳೆದ ಆರ್​ಸಿಬಿ ವಿರುದ್ಧದ ಪಂದ್ಯದಿಂದ ಹೊರಗಿದ್ದರು. ಈ ಬಗ್ಗೆ ಮಾತನಾಡಿರುವ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಲಕ್ನೋ ವಿರುದ್ಧ ಗೆಲುವು ಸಾಧಿಸಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ರಿಷಭ್ ಪಂತ್, ಕಳೆದ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ನನಗೆ ಆಡಲು ಸಾಧ್ಯವಾಗಿದ್ದರೆ ನಾವು ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತಿತ್ತು ಎಂದು ಹೇಳಿದ್ದಾರೆ. ನಾನು ಆಡಿದ್ದರೆ ನಾವು ಖಂಡಿತವಾಗಿಯೂ ಪಂದ್ಯವನ್ನು ಗೆಲ್ಲುತ್ತಿದ್ದೆವು ಎಂದು ನಾನು ಹೇಳುತ್ತಿಲ್ಲ. ಆದರೆ, ಕೊನೆಯ ಪಂದ್ಯದಲ್ಲಿ ನನಗೆ ಆಡಲು ಅವಕಾಶವಿದ್ದರೆ ನಮಗೆ ಪ್ಲೇ ಆಫ್​ಗೆ ಅರ್ಹತೆ ಪಡೆಯುವ ಉತ್ತಮ ಅವಕಾಶವಿತ್ತು ಎಂದು ಪಂತ್ ಹೇಳಿದ್ದಾರೆ.

ಆಫ್ರಿಕಾ ವಿರುದ್ಧ ಟಿ20, ಏಕದಿನ, ಟೆಸ್ಟ್ ಸರಣಿ ಆಡಲಿದೆ ಟೀಂ ಇಂಡಿಯಾ; ವೇಳಾಪಟ್ಟಿ ಪ್ರಕಟ

ಲಕ್ನೋ ವಿರುದ್ಧದ ಪಂದ್ಯದ ಕುರಿತು ಮಾತನಾಡಿದ ಪಂತ್, ”ನಿಕೋಲಸ್ ಪೂರನ್ ನಮಗೆ ತುಂಬಾ ತೊಂದರೆ ಕೊಟ್ಟರು. ನಾವು ಕೆಲವು ಯೋಜನೆಗಳನ್ನು ಹೊಂದಿದ್ದೇವೆ. ಉತ್ತಮ ಸವಾಲು ನೀಡಿದ್ದೆವು. ನಮ್ಮ ಬೌಲಿಂಗ್ ಕೂಡ ಚೆನ್ನಾಗಿ ಸಾಗುತ್ತಿತ್ತು. ಈ ಋತುವಿನಲ್ಲಿ ನಾವು ಬಹಳಷ್ಟು ನಿರೀಕ್ಷೆಗಳೊಂದಿಗೆ ಕಣಕ್ಕಿಳಿದೆವು. ಆದರೆ, ಕೆಲವು ಆಟಗಾರರು ಗಾಯಗೊಂಡಿದ್ದಾರೆ. ಕೊನೆಯ ಪಂದ್ಯದಲ್ಲಿ ಸೋತ ನಂತರವೂ ನಾವು ಪ್ಲೇ ಆಫ್ ರೇಸ್‌ನಲ್ಲಿಯೇ ಇದ್ದೇವೆ. ಈ ಜಯದ ಮೂಲಕ ಕಮ್​ಬ್ಯಾಕ್ ಮಾಡಿರುವುದು ಉತ್ತಮವಾಗಿದೆ. ಭಾರತದೆಲ್ಲೆಡೆಯಿಂದ ಬಂದ ಬೆಂಬಲ ನೋಡಿ ಖುಷಿಯಾಯಿತು. ನನಗೆ ಒಂದೂವರೆ ವರ್ಷದ ನಂತರ ಹಿಂತಿರುಗಲು ಬಹಳ ಸಮಯ ಕಾಯಬೇಕಾಯಿತು. ನಾನು ಸದಾ ಮೈದಾನದಲ್ಲಿ ಇರಲು ಬಯಸುತ್ತೇನೆ,” ಎಂಬುದು ರಿಷಭ್ ಪಂತ್ ಮಾತು.

ಲಕ್ನೋ ವಿರುದ್ಧದ ಜಯದ ಮೂಲಕ ಡೆಲ್ಲಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ ಮತ್ತು -0.377 ರ ನಿವ್ವಳ ರನ್ ರೇಟ್ ಹೊಂದಿದೆ. ಅಂಕಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (0.528) ಮತ್ತು ಸನ್ ರೈಸರ್ಸ್ ಹೈದರಾಬಾದ್ (0.406) ಉತ್ತಮ ಸ್ಥಿತಿಯಲ್ಲಿವೆ. ಇದು 13 ಪಂದ್ಯಗಳಲ್ಲಿ ಎಲ್‌ಎಸ್‌ಜಿಗೆ ಏಳನೇ ಸೋಲು. ಈ ತಂಡ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಎಲ್‌ಎಸ್‌ಜಿ ತನ್ನ ಕೊನೆಯ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಬೇಕಿದೆ.

8 ಗಂಟೆ ನಿಗದಿ; 2ನೇ ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನವಿಲ್ಲ..! ಕಾರಣವೇನು?

ಡೆಲ್ಲಿ ಈ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗೆ 208 ರನ್ ಗಳಿಸಿದ ನಂತರ, ಎಲ್‌ಎಸ್‌ಜಿಯ ಒಂಬತ್ತು ವಿಕೆಟ್‌ಗೆ 189 ರನ್‌ ಗಳಿಸಿತಷ್ಟೆ. ಡೆಲ್ಲಿ ಪರ ಇಶಾಂತ್ ಶರ್ಮಾ ಮೂರು ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್, ಖಲೀಲ್ ಅಹ್ಮದ್, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಮುಖೇಶ್ ಕುಮಾರ್ ತಲಾ ಒಂದು ವಿಕೆಟ್ ಪಡೆದರು. ಎಲ್‌ಎಸ್‌ಜಿ ಪರ ನಿಕೋಲಸ್ ಪೂರನ್ 27 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 61 ರನ್ ಗಳಿಸಿದರು. ಅರ್ಷದ್ ಖಾನ್ 33 ಎಸೆತಗಳಲ್ಲಿ ಅಜೇಯ 58 ರನ್ ಗಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್