AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಶಾನ್ ಕಿಶನ್ ಅಲ್ಲ..; ಪಂತ್ ಬದಲಿಯಾಗಿ ಬಂದ ತಮಿಳುನಾಡು ವಿಕೆಟ್ ಕೀಪರ್

Rishabh Pant injury: ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ಗಾಯಗೊಂಡಿದ್ದಾರೆ. ಬಲ ಕಾಲಿಗೆ ಗಂಭೀರ ಗಾಯವಾಗಿರುವುದರಿಂದ ಅವರು ಉಳಿದ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆ ಇದೆ. ಅವರ ಬದಲಿಯಾಗಿ ತಮಿಳುನಾಡಿನ ನಾರಾಯಣ್ ಜಗದೀಸನ್ ಅವರನ್ನು ಆಯ್ಕೆ ಮಾಡಲಾಗಿದೆ. ಜಗದೀಸನ್ ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ

IND vs ENG: ಇಶಾನ್ ಕಿಶನ್ ಅಲ್ಲ..; ಪಂತ್ ಬದಲಿಯಾಗಿ ಬಂದ ತಮಿಳುನಾಡು ವಿಕೆಟ್ ಕೀಪರ್
N Jagadeesan
ಪೃಥ್ವಿಶಂಕರ
|

Updated on:Jul 24, 2025 | 8:50 PM

Share

ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಕ್ಕೆ (Team India) ಒಂದೆಡೆ ಸರಣಿ ಸೋಲಿನ ಆತಂಕ ಎದುರಾಗಿದ್ದರೆ, ಇನ್ನೊಂದೆಡೆ ಆಟಗಾರರ ಇಂಜುರಿ ಸರಣಿ ಕೂಡ ದೊಡ್ಡ ತಲೆನೋವು ತಂದಿದೆ. ಅದರಲ್ಲೂ ಇಡೀ ಸರಣಿಯಲ್ಲಿ ಅಮೋಘ ಫಾರ್ಮ್​ನಲ್ಲಿರುವ ರಿಷಭ್ ಪಂತ್ (Rishabh Pant) ಗಾಯಗೊಂಡಿರುವುದು ಬ್ಯಾಟಿಂಗ್ ವಿಭಾಗದ ಬೆನ್ನೇಲುಬು ಮುರಿದಿದೆ. ರಿಷಭ್ ಪಂತ್ ಅವರ ಬಲ ಕಾಲಿಗೆ ಗಾಯವಾಗಿದ್ದು ಮೂಳೆ ಮುರಿದಿದೆ ಎಂದು ವರದಿಯಾಗಿದೆ. ಹೀಗಾಗಿ ಪಂತ್ ಕೊನೆಯ ಟೆಸ್ಟ್ ಪಂದ್ಯ ಆಡುವುದು ಅನುಮಾನವಾಗಿದೆ. ಆದ್ದರಿಂದ ಕೊನೆಯ ಟೆಸ್ಟ್ ಪಂದ್ಯಕ್ಕೆ ರಿಷಭ್ ಪಂತ್ ಬದಲಿಯಾಗಿ ತಮಿಳುನಾಡಿನ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ನಾರಾಯಣ್ ಜಗದೀಸನ್ (Narayan Jagadeesan) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇಶಾನ್ ಬದಲಿಗೆ ಜಗದೀಸನ್​ಗೆ ಅವಕಾಶ

ವರದಿಗಳ ಪ್ರಕಾರ, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಪಂತ್ ಅವರ ಬದಲಿಯಾಗಿ 29 ವರ್ಷದ ಜಗದೀಸನ್ ಅವರನ್ನು ಆಯ್ಕೆ ಮಾಡಿದೆ. ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳುತ್ತಿರುವ ಜಗದೀಸನ್​ ಬಹಳ ಅದೃಷ್ಟಶಾಲಿ ಎಂತಲೇ ಹೇಳಬಹುದು. ಏಕೆಂದರೆ ಆಯ್ಕೆ ಸಮಿತಿಯು ಈ ಮೊದಲು ಪಂತ್ ಬದಲಿಯಾಗಿ ಇಶಾನ್ ಕಿಶಾನ್ ಅವರನ್ನು ಆಯ್ಕೆ ಮಾಡಲು ಪರಿಗಣಿಸುತ್ತಿತ್ತು. ಆದರೆ ಪ್ರಸ್ತುತ ಇಶಾನ್ ಕೂಡ ಗಾಯಗೊಂಡಿದ್ದು ಅವರು ತಂಡದ ಭಾಗವಾಗಲು ಸಾಧ್ಯವಿಲ್ಲ ಎಂದು ತಿಳಿದುಬಂದಿದೆ. ಅಂತಹ ಪರಿಸ್ಥಿತಿಯಲ್ಲಿ, ಆಯ್ಕೆ ಸಮಿತಿಯು ಹೊಸ ಆಯ್ಕೆಯನ್ನು ಪರಿಗಣಿಸಿ ನಂತರ ಜಗದೀಸನ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಿದೆ.

ಕಳೆದ ಹಲವಾರು ವರ್ಷಗಳಿಂದ ಜಗದೀಸನ್ ದೇಶೀಯ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದು ಮೂರು ಸ್ವರೂಪಗಳಲ್ಲಿ ತಮಿಳುನಾಡನ್ನು ಪ್ರತಿನಿಧಿಸಿದ್ದಾರೆ. ಕಳೆದ 2-3 ಸೀಸನ್‌ನಲ್ಲಿ ಪ್ರತಿಯೊಂದು ಸ್ವರೂಪದಲ್ಲೂ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಜಗದೀಸನ್ ಅವರ ಪ್ರಥಮ ದರ್ಜೆ ದಾಖಲೆಯ ಬಗ್ಗೆ ಹೇಳುವುದಾದರೆ, ಈ ಬ್ಯಾಟ್ಸ್‌ಮನ್ ತಮಿಳುನಾಡು ಪರ 52 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 47.50 ರ ಸರಾಸರಿಯೊಂದಿಗೆ 3373 ರನ್ ಗಳಿಸಿದ್ದಾರೆ. ಇದರಲ್ಲಿ 10 ಶತಕಗಳು ಮತ್ತು 14 ಅರ್ಧಶತಕಗಳು ಸೇರಿವೆ. ವಿಶೇಷವೆಂದರೆ ಜಗದೀಸನ್ ತ್ರಿಶತಕವನ್ನೂ ಬಾರಿಸಿದ್ದಾರೆ.

IND vs ENG: ನೋವಿನಲ್ಲೂ ಅರ್ಧಶತಕ ಬಾರಿಸಿ ಹಲವು ದಾಖಲೆ ನಿರ್ಮಿಸಿದ ರಿಷಭ್ ಪಂತ್

ಜಗದೀಸನ್ ಹೆಸರಿನಲ್ಲಿ ವಿಶ್ವ ದಾಖಲೆ

ಜಗದೀಸನ್ ಕಳೆದ ಕೆಲವು ವರ್ಷಗಳಲ್ಲಿ ತಮ್ಮ ಸ್ಫೋಟಕ ಮತ್ತು ಸ್ಥಿರವಾದ ಬ್ಯಾಟಿಂಗ್ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅದ್ಭುತ ಛಾಪು ಮೂಡಿಸಿದ್ದಾರೆ. 2022 ರಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಪಂದ್ಯದಲ್ಲಿ ಜಗದಿಸನ್ ಕೇವಲ 141 ಎಸೆತಗಳಲ್ಲಿ 277 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಅಲ್ಲದೆ ಕೇವಲ 114 ಎಸೆತಗಳಲ್ಲಿ ದ್ವಿಶತಕ ಬಾರಿಸಿದ್ದರು. ಈ ರೀತಿಯಾಗಿ, ಜಗದೀಸನ್ ಲಿಸ್ಟ್-ಎ ಕ್ರಿಕೆಟ್ (ಏಕದಿನ) ಇತಿಹಾಸದಲ್ಲಿ ಕಡಿಮೆ ಎಸೆತಗಳಲ್ಲಿ ಅತಿದೊಡ್ಡ ಇನ್ನಿಂಗ್ಸ್‌ ಆಡಿದ ವಿಶ್ವ ದಾಖಲೆಯನ್ನು ಸಹ ಮಾಡಿದ್ದಾರೆ. ಇದಲ್ಲದೆ, ಇದರೊಂದಿಗೆ ಅವರು ಸತತ 5 ಲಿಸ್ಟ್-ಎ ಪಂದ್ಯಗಳಲ್ಲಿ ಶತಕ ಬಾರಿಸಿದ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 pm, Thu, 24 July 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ