ಟೀಂ ಇಂಡಿಯಾದ (Team India) ಸ್ಟಾರ್ ಆಟಗಾರರಲ್ಲಿ ಒಬ್ಬರಾಗಿರುವ ರಿಷಬ್ ಪಂತ್ (Rishabh Pant) ಭಾರತ ಮಾತ್ರವಲ್ಲದೆ ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಕಳೆದ ವರ್ಷ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರು ಸುಮಾರು ಒಂದು ವರ್ಷದಿಂದ ಕ್ರಿಕೆಟ್‌ನಿಂದ ದೂರವಿದ್ದಾರೆ. ಆದರೀಗ ರಿಷಬ್ ಪಂತ್ ರೀ ಎಂಟ್ರಿ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದ್ದು, ಅವರು ಶೀಘ್ರದಲ್ಲೇ ತಂಡಕ್ಕೆ ಸೇರಿಕೊಳ್ಳಲಿದ್ದಾರೆ. ವಿಶ್ವಕಪ್ (ICC World Cup 2023) ನಂತರ, ಟೀಂ ಇಂಡಿಯಾ ನಿರಂತರವಾಗಿ ದ್ವಿಪಕ್ಷಿಣ ಸರಣಿಗಳನ್ನು ಆಡಲಿದೆ. ಇದರ ನಂತರ, ಮಾರ್ಚ್ ಅಂತ್ಯದಲ್ಲಿ ಐಪಿಎಲ್ (IPL) ಕೂಡ ಪ್ರಾರಂಭವಾಗುವ ಸಾಧ್ಯತೆಯಿದ್ದು, ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ರಿಷಬ್ ಪಂತ್ ಬ್ಯಾಟ್ ಹಿಡಿದು ಅಬ್ಬರಿಸಲಿದ್ದಾರೆ.
ಪಂತ್ ಅವರ ಫಿಟ್ನೆಸ್ ಬಗ್ಗೆ ಸೌರವ್ ಗಂಗೂಲಿ ಬಿಗ್ ಅಪ್ಡೇಟ್ ನೀಡಿದ್ದು, ಮುಂದಿನ ಆವೃತ್ತಿಯ ಐಪಿಎಲ್‌ನಲ್ಲಿ ಪಂತ್ ಆಡಲಿದ್ದಾರೆ ಎಂದು ಗಂಗೂಲಿ ಹೇಳಿದ್ದಾರೆ. ಅಷ್ಟೇ ಅಲ್ಲ, ಪಂತ್ ನಾಯಕನಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳಲಿದ್ದಾರೆ ಎಂದು ಗಂಗೂಲಿ ಸ್ಪಷ್ಟಪಡಿಸಿದ್ದಾರೆ. ಆದರೆ ಪಂತ್ ಆರೋಗ್ಯವಾಗಿದ್ದರೂ ತಂಡದ ಶಿಬಿರದಲ್ಲಿ ಅಭ್ಯಾಸ ನಡೆಸಿಲ್ಲ. ಪಂತ್ ಅವರು ನವೆಂಬರ್ 11 ರವರೆಗೆ ಕೋಲ್ಕತ್ತಾದಲ್ಲಿ ಇರುತ್ತಾರೆ. ಪಂತ್ ತಂಡದ ನಾಯಕರಾಗಿದ್ದು, ತಂಡದ ಮ್ಯಾನೇಜ್‌ಮೆಂಟ್ ಅವರೊಂದಿಗೆ ಚರ್ಚಿಸಲಿದೆ. ಮುಂಬರುವ ಹರಾಜಿನ ಬಗ್ಗೆ ಚರ್ಚೆಯಾಗಿದೆ ಎಂದು ಗಂಗೂಲಿ ಹೇಳಿದರು.
Great news for team India:
Rishabh Pant has started practicing. pic.twitter.com/w81sz12LZ3
— SACHINN SUBHASH PANDIT (@SACHINSP231090) November 9, 2023
Rishabh Pant: ಟೀಂ ಇಂಡಿಯಾಕ್ಕೆ ಆಘಾತ; ಏಷ್ಯಾಕಪ್ ಜೊತೆಗೆ ವಿಶ್ವಕಪ್ನಿಂದಲೂ ರಿಷಬ್ ಪಂತ್ ಔಟ್..!
ಕೆಲವು ದಿನಗಳ ಹಿಂದೆ, ಪಂತ್ ಭಾರತದ ದೇಶೀಯ ಏಕದಿನ ಪಂದ್ಯಾವಳಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿದ್ದವು ಆದರೆ ಪಂತ್ ಈ ಟೂರ್ನಿಯಲ್ಲಿ ಕಣಕ್ಕಿಳಿದಿರಲಿಲ್ಲ. ಆದರೆ ಮುಂದಿನ ವರ್ಷ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಸರಣಿಗಾಗಿ ಪಂತ್ ಟೀಂ ಇಂಡಿಯಾಗೆ ಮರಳಲಿದ್ದಾರೆ ಎಂದು ಈ ವರದಿಗಳು ತಿಳಿಸಿವೆ.
ಭಾರತ ತಂಡದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಕಳೆದ ವರ್ಷ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ಈrishab pant, ಕಾರಣದಿಂದ ಅವರು ಟೀಂ ಇಂಡಿಯಾದಿಂದ ದೂರ ಉಳಿದಿದ್ದಾರೆ. ಇದರಿಂದಾಗಿ ಅವರು 2023 ರ ಐಪಿಎಲ್ ಜೊತೆಗೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿಯೂ ಆಡಲಿಲ್ಲ. ಹಾಗೆಯೇ ಏಕದಿನ ವಿಶ್ವಕಪ್ನಿಂದಲೂ ಪಂತ್ ದೂರ ಉಳಿಯಬೇಕಾಯಿತು. ಆದರೆ ಇದೀಗ ಪಂತ್ ಚೇತರಿಸಿಕೊಂಡ ನಂತರ ಮತ್ತೆ ತಂಡಕ್ಎ ಮರಳಲು ಸಜ್ಜಾಗಿದ್ದಾರೆ.
ಕಳೆದ ವರ್ಷ ಡಿಸೆಂಬರ್ 30 ರಂದು ಪಂತ್ ದೆಹಲಿಯಿಂದ ಮನೆಗೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿತ್ತು. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿ ಪಂತ್ ಗಾಯಗೊಂಡಿದ್ದರು. ಪಂತ್ ಅವರು ಅಪಘಾತದಲ್ಲಿ ಅಸ್ಥಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ