AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ರಿಷಭ್ ಪಂತ್​ಗೆ ಪಂದ್ಯಶ್ರೇಷ್ಠ ಕೊಟ್ಟಿದ್ದಕ್ಕೆ ಶಾಕ್ ಆದ ರೋಹಿತ್ ಶರ್ಮಾ: ಆಡಿದ ಮಾತು ಮೈಕ್​ನಲ್ಲಿ ಸೆರೆ

Rohit Sharma on Rishabh Pant Man of the Match: ಭಾರತ- ವೆಸ್ಟ್ ಇಂಡೀಸ್ ದ್ವಿತೀಯ ಟಿ20 ಪಂದ್ಯದಲ್ಲಿ ರಿಷಭ್ ಪಂತ್ ಸ್ಫೋಟಕ ಆಟವಾಡಿ ತಂಡದ ರನ್ ಗತಿಯನ್ನು ಏರಿಸಿದರು. ಇದೇ ಕಾರಣಕ್ಕೆ ಇವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಒಲಿದುಬಂತು. ಆದರೆ, ಈ ಸಂದರ್ಭ ವೇಳೆ ನಾಯಕ ರೋಹಿತ್ ಶರ್ಮಾ ಶಾಕ್ ಆದರು. ಯಾಕೆ ನೋಡಿ.

Rishabh Pant: ರಿಷಭ್ ಪಂತ್​ಗೆ ಪಂದ್ಯಶ್ರೇಷ್ಠ ಕೊಟ್ಟಿದ್ದಕ್ಕೆ ಶಾಕ್ ಆದ ರೋಹಿತ್ ಶರ್ಮಾ: ಆಡಿದ ಮಾತು ಮೈಕ್​ನಲ್ಲಿ ಸೆರೆ
Rishabh Pant MOTM and Rohit Sharma
TV9 Web
| Edited By: |

Updated on: Feb 19, 2022 | 11:54 AM

Share

ಪರಿಪೂರ್ಣ ನಾಯಕನಾಗಿ ಬಳಿಕ ಒಂದೇ ಒಂದು ಸೋಲನ್ನು ಕಾಣದೆ ಗೆಲುವಿನ ಓಟ ಮುಂದುವರೆಸಿರುವ ರೋಹಿತ್ ಶರ್ಮಾ (Rohit Sharma) ಕ್ಯಾಪ್ಟನ್ ಆಗಿ ದಾಖಲೆ ಬರೆದಿದ್ದಾರೆ. ಕಳೆದ ನವೆಂಬರ್​ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ವೈಟ್​ವಾಷ್, ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ವೈಟ್​​ವಾಷ್, ಇದೀಗ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದ್ದು, ಉಳಿದಿರುವ ಒಂದು ಪಂದ್ಯ ಗೆದ್ದರೆ ಇಲ್ಲೂ ಕ್ಲೀನ್​ಸ್ವೀಪ್ ಸಾಧನೆ ಮಾಡಲಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ 8 ರನ್​ಗಳ ರೋಚಕ ಗೆಲುವು ಕಂಡಿತು. ಆರಂಭಿಕ ಬ್ಯಾಟ್ಸ್​ಮನ್​ಗಳು ವೈಫಲ್ಯ ಅನುಭವಿಸಿದರೂ ವಿರಾಟ್ ಕೊಹ್ಲಿ (Virat Kohli) ಹಾಗೂ ರಿಷಭ್ ಪಂತ್ (Rishabh Pant) ಬೊಂಬಾಟ್ ಆಟವಾಡಿ ತಂಡಕ್ಕೆ ಆಸರೆಯಾದರು.

ಪ್ರಮುಖವಾಗಿ ರಿಷಭ್ ಪಂತ್ ಸ್ಫೋಟಕ ಆಟವಾಡಿ ತಂಡದ ರನ್ ಗತಿಯನ್ನು ಏರಿಸಿದರು. ಕೇವಲ 28 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಸಿಡಿಸಿ ಅಜೇಯ 52 ರನ್ ಚಚ್ಚಿದರು. ಇದೇ ಕಾರಣಕ್ಕೆ ಇವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಒಲಿದುಬಂತು. ಆದರೆ, ಪ್ರಶಸ್ತಿ ಸಮಾರಂಭ ವೇಳೆ ಅಚ್ಚರಿಯ ಘಟನೆಯೊಂದು ನಡೆಯಿತು. ಹರ್ಷ ಬೋಗ್ಲೆ ಅವರು ಪಂತ್​ ಹೆಸರನ್ನು ಪಂದ್ಯಶ್ರೇಷ್ಠ ಎಂದು ಘೋಷಣೆ ಮಾಡುವ ವೇಳೆ ನಾಯಕ ರೋಹಿತ್ ಶರ್ಮಾ ಶಾಕ್ ಆದರು.

ಹೌದು, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯದ ಬಗ್ಗೆ ಮಾತನಾಡಿದ ಬಳಿಕ ಹರ್ಷ ಬೋಗ್ಲೆ ಪಂದ್ಯಶ್ರೇಷ್ಠ ರಿಷಭ್ ಪಂತ್​ಗೆ ಎಂದು ಘೋಷಣೆ ಮಾಡುವುದರಲ್ಲಿದ್ದರು. ಈ ಸಂದರ್ಭ ರೋಹಿತ್ ಶಾಕ್​ನಲ್ಲಿ “ಏನು ರಿಷಭ್ ಪಂತ್ ಹಾ ಪಂದ್ಯಶ್ರೇಷ್ಠ?” ಎಂದು ಅಚ್ಚರಿಯಿಂದ ತಮಾಷೆಯಾಗಿ ಕೇಳಿದ್ದಾರೆ. ರೋಹಿತ್ ಆಡಿರುವ ಮಾತು ಮೈಕ್​ನಲ್ಲಿ ಸೆರೆಯಾಗಿದೆ. ಇದಕ್ಕೆ ಹರ್ಷ ಬೋಗ್ಲೇ, “ಕಮಾನ್ ರೋಹಿತ್, ಅವರು ಚೆನ್ನಾಗಿ ಬ್ಯಾಟಿಂಗ್ ಮಾಡಿದ್ದಾರೆ,” ಎಂದು ಹೇಳಿದರು. ಬಳಿಕ ಪಂತ್ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದರು. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

3ನೇ ಟಿ20ಗೆ ಪಂತ್ ಅಲಭ್ಯ:

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ರಿಷಭ್ ಪಂತ್ ಅಲಭ್ಯರಾಗಿದ್ದಾರೆ. ಸತತವಾಗಿ ಕ್ರಿಕೆಟ್ ಆಡುತ್ತಿರುವ ಕಾರಣ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪಂತ್ ಅವರಿಗೆ ಬಯೋ ಬಬಲ್​ನಿಂದ ವಿಶ್ರಾಂತಿ ನೀಡಿದೆ. ಹೀಗಾಗಿ ಇವರು ವಿಂಡೀಸ್ ಜೊತೆಗೆ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೂ ಅಲಭ್ಯರಾಗಿದ್ದಾರೆ. ಲಂಕಾ ವಿರುದ್ಧದ ಟೆಸ್ಟ್ ಪಂದ್ಯದ ಸಂದರ್ಭ ಮತ್ತೆ ತಂಡ ಸೇರಿಕೊಳ್ಳಲಿದ್ದಾರೆ. ಇನ್ನು ಕಳೆದ ಡಿಸೆಂಬರ್‌ನಿಂದ ಬಿಡುವಿಲ್ಲದೆ ಕ್ರಿಕೆಟ್‌ ಆಡುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿಗೂ ವಿಶ್ರಾಂತಿ ಕೊಡಲು ಬಿಸಿಸಿಐ ನಿರ್ಧರಿಸಿದೆ. ಇವರು ಕೂಡ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟಿ20 ಮತ್ತು ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ. ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಹಾಗಾರಾಗಲಿದ್ದು, ಇದು ಇವರ 100ನೇ ಟೆಸ್ಟ್ ಪಂದ್ಯ ಆಗಲಿದೆ.

Venkatesh Iyer: ವೆಂಕಟೇಶ್ ಅಯ್ಯರ್ ಸ್ಫೋಟಕ ಹೊಡೆತಕ್ಕೆ ತಬ್ಬಿಬ್ಬಾದ ಭಾರತದ ಡಗೌಟ್: ಇಲ್ಲಿದೆ ರೋಚಕ ವಿಡಿಯೋ

Rohit Sharma: ಪಂದ್ಯ ಮುಗಿದ ಬಳಿಕ ಕೊಹ್ಲಿ ಆಟದ ಬಗ್ಗೆ ನಾಯಕ ರೋಹಿತ್ ಶರ್ಮಾ ಹೇಳಿದ್ದೇನು ನೋಡಿ

Follow Us
TV9 Web
TV9 Web

TV9 Kannada

Read More
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'