RR vs DC, IPL 2024: ತಾಳ್ಮೆ ಕಳೆದುಕೊಂಡ ಪಂತ್: ಔಟಾದ ಕೋಪದಲ್ಲಿ ರಿಷಭ್ ಏನು ಮಾಡಿದ್ರು ನೋಡಿ

Rishabh Pant Angry: ಐಪಿಎಲ್ 2024ರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್ 14ನೇ ಓವರ್‌ನ ಮೊದಲ ಎಸೆತದಲ್ಲಿ ಯುಜ್ವೇಂದ್ರ ಚಾಹಲ್ ಎಸೆತದಲ್ಲಿ ಔಟಾದರು. ಪ್ರಮುಖ ಹಂತದಲ್ಲಿ ಔಟಾಗಿ, ಪಂದ್ಯವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗದಿದ್ದಕ್ಕೆ ಪಂತ್ ಕೋಪಗೊಂಡಂತೆ ಕಂಡುಬಂತು. ಅವರು ಈ ಸಂದರ್ಭ ಏನು ಮಾಡಿದ್ರು ನೋಡಿ.

RR vs DC, IPL 2024: ತಾಳ್ಮೆ ಕಳೆದುಕೊಂಡ ಪಂತ್: ಔಟಾದ ಕೋಪದಲ್ಲಿ ರಿಷಭ್ ಏನು ಮಾಡಿದ್ರು ನೋಡಿ
Rishabh Pant Out
Follow us
Vinay Bhat
|

Updated on: Mar 29, 2024 | 7:42 AM

ಐಪಿಎಲ್ 2024 ರಲ್ಲಿ ಗುರುವಾರ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ ರಾಯಲ್ಸ್ (RR vs DC) ನಡುವೆ ಪಂದ್ಯ ಆಯೋಜಿಸಲಾಗಿತ್ತು. ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ, ರಾಜಸ್ಥಾನ್ 12 ರನ್‌ಗಳಿಂದ ಗೆದ್ದುಕೊಂಡಿದೆ. ಆತಿಥೇಯರ ಪರ ಆಲ್ರೌಂಡರ್ ರಿಯಾನ್ ಪರಾಗ್ 45 ಎಸೆತಗಳಲ್ಲಿ 84 ರನ್ ಸಿಡಿಸಿ ಅದ್ಭುತ ಪ್ರದರ್ಶನ ತೋರಿದರು. ಇವರ ಖಾತೆಯಿಂದ ಏಳು ಬೌಂಡರಿ ಮತ್ತು ಆರು ಸಿಕ್ಸರ್‌ಗಳು ಬಂದವು. ಆರ್​ಆರ್​ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 185 ರನ್ ಗಳಿಸಿತು. ಆದರೆ, ಈ ಟಾರ್ಗೆಟ್ ಅನ್ನು ಬೆನ್ನಟ್ಟಲು ರಿಷಭ್ ಪಂತ್ ಪಡೆಗೆ ಸಾಧ್ಯವಾಗಲಿಲ್ಲ.

ಡೆಲ್ಲಿ ಆರಂಭದಿಂದ ಉತ್ತಮ ಪ್ರದರ್ಶನ ನೀಡಿ ಆಟದಲ್ಲಿತ್ತು, ಆದರೆ ಅಂತಿಮ ಓವರ್‌ನಲ್ಲಿ 17 ರನ್ ಗಳಿಸಲು ವಿಫಲರಾದರು. ಡೆಲ್ಲಿ ಪರ, ಡೇವಿಡ್ ವಾರ್ನರ್ 34 ಎಸೆತಗಳಲ್ಲಿ 49 ರನ್ ಗಳಿಸಿ ಗರಿಷ್ಠ ಸ್ಕೋರ್ ಎನಿಸಿಕೊಂಡರೆ, ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಟ್ರಿಸ್ಟಾನ್ ಸ್ಟಬ್ಸ್ 23 ಎಸೆತಗಳಲ್ಲಿ 44 ರನ್ ಗಳಿಸಿ ಅಜೇಯರಾಗಿ ಉಳಿದರು. ತಂಡದ ನಾಯಕ ಹಾಗೂ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 26 ಎಸೆತಗಳಲ್ಲಿ 28 ರನ್ ಕೊಡುಗೆ ನೀಡಿದರು.

ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಕೊನೆಗೂ ಕಣಕ್ಕಿಳಿಯಲು ಸಜ್ಜಾದ ಈ ಸ್ಟಾರ್ ಆಟಗಾರ?

ಡೆಲ್ಲಿ ಕ್ಯಾಪಿಟಲ್ಸ್ ಪರ 100ನೇ ಐಪಿಎಲ್ ಪಂದ್ಯವನ್ನಾಡಿದ ರಿಷಭ್, 14ನೇ ಓವರ್‌ನ ಮೊದಲ ಎಸೆತದಲ್ಲಿ ಯುಜ್ವೇಂದ್ರ ಚಾಹಲ್ ಎಸೆತದಲ್ಲಿ ಔಟಾದರು. 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಪಂತ್ ಅವರು ಸಂಜು ಸ್ಯಾಮ್ಸನ್​ಗೆ ಕ್ಯಾಚಿತ್ತು ನಿರ್ಗಮಿಸಿದರು. ಪ್ರಮುಖ ಹಂತದಲ್ಲಿ ಔಟಾಗಿ, ಪಂದ್ಯವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗದಿದ್ದಕ್ಕೆ ಪಂತ್ ಕೋಪಗೊಂಡಂತೆ ಕಂಡುಬಂತು. ಪೆವಿಲಿಯನ್‌ಗೆ ಹಿಂತಿರುಗುವಾಗ ಪಂತ್ ಗೋಡೆಗೆ ಬ್ಯಾಟ್​ನಿಂದ ಬಡಿದಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ.

ಔಟಾದಾಗ ರಿಷಭ್ ಪಂತ್ ಬ್ಯಾಟ್‌ನಿಂದ ಗೋಡೆಗೆ ಹೊಡೆಯುತ್ತಿರುವ ವಿಡಿಯೋ:

2016 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗಾಗಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಪಂತ್ ಮತ್ತು 2021 ರಲ್ಲಿ ತಂಡದ ನಾಯಕರಾಗಿ ನೇಮಕಗೊಂಡರು, ಗುರುವಾರ ದೆಹಲಿ ಕ್ಯಾಪಿಟಲ್ಸ್‌ಗಾಗಿ 100 ಐಪಿಎಲ್ ಪಂದ್ಯಗಳನ್ನು ಆಡಿದ ಮೊದಲ ಆಟಗಾರ ಎಂಬ ಇತಿಹಾಸವನ್ನು ಸೃಷ್ಟಿಸಿದರು. ಅವರು ಒಟ್ಟಾರೆಯಾಗಿ, ವಿಶ್ವದ ಶ್ರೀಮಂತ ಫ್ರಾಂಚೈಸ್ ಕ್ರಿಕೆಟ್ ಲೀಗ್‌ನಲ್ಲಿ ಒಂದು ತಂಡಕ್ಕಾಗಿ 100 ಅಥವಾ ಹೆಚ್ಚಿನ ಪಂದ್ಯಗಳನ್ನು ಆಡಿದ 21 ನೇ ಆಟಗಾರರಾಗಿದ್ದಾರೆ.

ಲೀಗ್ ಮಧ್ಯದಲ್ಲಿ ರಾಜಸ್ಥಾನಕ್ಕೆ ಬಂದ ಮಹಾರಾಜ

ಇದುವರೆಗೆ ಆಡಿದ 161 ಐಪಿಎಲ್ ಪಂದ್ಯಗಳಲ್ಲಿ 173 ವಿಕೆಟ್ ಪಡೆದಿರುವ ಭಾರತದ ಹಿರಿಯ ಸ್ಪಿನ್ನರ್ ಅಮಿತ್ ಮಿಶ್ರಾ, ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗಾಗಿ 99 ಪಂದ್ಯಗಳನ್ನು ಆಡುವ ಮೂಲಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಐಪಿಎಲ್‌ನಲ್ಲಿ ಡೆಲ್ಲಿಗಾಗಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರನಲ್ಲದೆ, ದೆಹಲಿ ಪರ ಅತಿ ಹೆಚ್ಚು ರನ್, ಅತಿ ಹೆಚ್ಚು ಸಿಕ್ಸರ್‌ಗಳು ಮತ್ತು ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ಗಳಿಸಿದ ದಾಖಲೆಯನ್ನು ಪಂತ್ ಹೊಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್