AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಎಂಎಸ್ ಧೋನಿ ದಾಖಲೆ ಹಿಂದಿಕ್ಕಿ ನಂ. 1 ವಿಕೆಟ್ ಕೀಪರ್ ಆದ ರಿಷಭ್ ಪಂತ್

India vs England 1st Test: 65 ರನ್ಗಳ ಇನ್ನಿಂಗ್ಸ್‌ನಲ್ಲಿ, ರಿಷಭ್ ಪಂತ್ ತಮ್ಮ ಹೆಸರಿನಲ್ಲಿ ಕೆಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಭಾರತೀಯ ವಿಕೆಟ್‌ಕೀಪರ್ ಆಗಿ ಸೆನಾ ದೇಶಗಳಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಗಳಿಸುವ ವಿಷಯದಲ್ಲಿ ಪಂತ್ ಅವರು ಎಂಎಸ್ ಧೋನಿಯನ್ನು ಹಿಂದಿಕ್ಕಿದ್ದಾರೆ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾವನ್ನು ಸೆನಾ ದೇಶಗಳಾಗಿವೆ.

Rishabh Pant: ಎಂಎಸ್ ಧೋನಿ ದಾಖಲೆ ಹಿಂದಿಕ್ಕಿ ನಂ. 1 ವಿಕೆಟ್ ಕೀಪರ್ ಆದ ರಿಷಭ್ ಪಂತ್
Rishabh Pant Ind Vs Eng
Vinay Bhat
|

Updated on: Jun 21, 2025 | 9:29 AM

Share

ಬೆಂಗಳೂರು (ಜೂ. 21): ಇಂಗ್ಲೆಂಡ್ ಮತ್ತು ಭಾರತ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಹೆಡಿಂಗ್ಲಿಯಲ್ಲಿ ನಡೆಯುತ್ತಿದೆ. ಈ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಆರಂಭವನ್ನು ಪಡೆದುಕೊಂಡಿದೆ. ಮೊದಲ ದಿನದಾಟದ ಅಂತ್ಯದ ವೇಳೆಗೆ ಭಾರತ 3 ವಿಕೆಟ್ ನಷ್ಟಕ್ಕೆ 359 ರನ್ ಗಳಿಸಿದೆ. ಪಂದ್ಯದ ಮೊದಲ ದಿನದಂದು ಭಾರತೀಯ ಬ್ಯಾಟ್ಸ್‌ಮನ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಟೀಮ್ ಇಂಡಿಯಾ ಪರವಾಗಿ ಇಬ್ಬರು ಬ್ಯಾಟ್ಸ್‌ಮನ್‌ಗಳು ಶತಕಗಳನ್ನು ಗಳಿಸಿದರೆ, ರಿಷಭ್ ಪಂತ್ 65 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.

65 ರನ್​ಗಳ ಇನ್ನಿಂಗ್ಸ್‌ನಲ್ಲಿ, ರಿಷಭ್ ಪಂತ್ ತಮ್ಮ ಹೆಸರಿನಲ್ಲಿ ಕೆಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಭಾರತೀಯ ವಿಕೆಟ್‌ಕೀಪರ್ ಆಗಿ ಸೆನಾ ದೇಶಗಳಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಗಳಿಸುವ ವಿಷಯದಲ್ಲಿ ಪಂತ್ ಅವರು ಎಂಎಸ್ ಧೋನಿಯನ್ನು ಹಿಂದಿಕ್ಕಿದ್ದಾರೆ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾವನ್ನು ಸೆನಾ ದೇಶಗಳಾಗಿವೆ.

ಸೆನಾ ದೇಶಗಳಲ್ಲಿ ಟೆಸ್ಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಭಾರತೀಯ ವಿಕೆಟ್ ಕೀಪರ್‌ಗಳು

ಇದನ್ನೂ ಓದಿ
Image
ಎರಡನೇ ದಿನದಾಟಕ್ಕೆ 5 ಮಾಸ್ಟರ್ ಪ್ಲ್ಯಾನ್ ರೂಪಿಸಿದ ಶುಭ್​ಮನ್ ಗಿಲ್
Image
ಯಂಗ್ ಇಂಡಿಯಾದ ಆಟಕ್ಕೆ ಹೈರಾಣಾದ ಆಂಗ್ಲರು
Image
ಕೊಹ್ಲಿ ಸ್ಥಾನದಲ್ಲಿ ಕಣಕ್ಕಿಳಿದು ಭರ್ಜರಿ ಶತಕ ಸಿಡಿಸಿದ ಗಿಲ್
Image
ಚೊಚ್ಚಲ ಪಂದ್ಯದಲ್ಲಿ ಅನಗತ್ಯ ದಾಖಲೆ ಬರೆದ ಸಾಯಿ ಸುದರ್ಶನ್

ಇದಕ್ಕೂ ಮೊದಲು, ಭಾರತೀಯ ವಿಕೆಟ್ ಕೀಪರ್ ಆಗಿ ಸೇನಾ ದೇಶಗಳಲ್ಲಿ ಟೆಸ್ಟ್ ಸ್ವರೂಪದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಎಂಎಸ್ ಧೋನಿ ಹೊಂದಿದ್ದರು. ಅಲ್ಲಿ ಅವರು 1731 ರನ್ ಗಳಿಸಿದ್ದರು. ಪಂತ್ ಈಗ ಅವರನ್ನು ಹಿಂದಿಕ್ಕಿದ್ದಾರೆ. ರಿಷಭ್ ಪ್ರಸ್ತುತ 1746 ರನ್ ಗಳಿಸಿದ್ದಾರೆ. ಈ ಸಂದರ್ಭದಲ್ಲಿ, ಫಾರೂಕ್ ಎಂಜಿನಿಯರ್ (1099) ಮೂರನೇ ಸ್ಥಾನದಲ್ಲಿದ್ದಾರೆ. ಸೈಯದ್ ಕಿರ್ಮಾನಿ (785) ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಕಿರಣ್ ಮೋರ್ (627) ಐದನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಇನ್ನಿಂಗ್ಸ್‌ಗಳಲ್ಲಿ 3000 ರನ್ ಗಳಿಸಿದ ಅತ್ಯಂತ ವೇಗದ ಬ್ಯಾಟ್ಸ್‌ಮನ್

ಈ ಇನ್ನಿಂಗ್ಸ್‌ನಲ್ಲಿ, ಪಂತ್ ಎಂಎಸ್ ಧೋನಿ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ 3000 ರನ್ ಗಳಿಸಿದ ಎರಡನೇ ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ. 27 ವರ್ಷದ ಪಂತ್, ಕುಮಾರ್ ಸಂಗಕ್ಕಾರ ಅವರನ್ನು ಹಿಂದಿಕ್ಕಿ 3000 ರನ್ ಗಳಿಸಿದ ಏಷ್ಯಾದ ಅತ್ಯಂತ ವೇಗದ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ಆಡಮ್ ಗಿಲ್‌ಕ್ರಿಸ್ಟ್ ನಂತರ ಈ ಸಾಧನೆ ಮಾಡಿದ ಎರಡನೇ ವೇಗದ ಆಟಗಾರ ರಿಷಭ್ ಪಂತ್ ಆಗಿದ್ದಾರೆ.

IND vs ENG 1st Test: ಎರಡನೇ ದಿನದಾಟಕ್ಕೆ 5 ಮಾಸ್ಟರ್ ಪ್ಲ್ಯಾನ್ ರೂಪಿಸಿದ ಶುಭ್​ಮನ್ ಗಿಲ್

ಆಡಮ್ ಗಿಲ್‌ಕ್ರಿಸ್ಟ್: 63 ಇನ್ನಿಂಗ್ಸ್‌ಗಳು

ರಿಷಭ್ ಪಂತ್: 76 ಇನ್ನಿಂಗ್ಸ್

ಕುಮಾರ್ ಸಂಗಕ್ಕಾರ: 78 ಇನ್ನಿಂಗ್ಸ್

ಆಂಡಿ ಫ್ಲವರ್: 78 ಇನ್ನಿಂಗ್ಸ್

ಮೊದಲ ಟೆಸ್ಟ್​​ನಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅವರ ನಿರ್ಧಾರ ತಪ್ಪೆಂದು ಸಾಬೀತಾಯಿತು. ಯಾಕೆಂದರೆ ಭಾರತೀಯ ಬ್ಯಾಟ್ಸ್‌ಮನ್‌ಗಳು ಇಂಗ್ಲೆಂಡ್ ಬೌಲರ್​ಗಳ ಬೆಂಡೆತ್ತಿದರು. ಮೊದಲ ದಿನದ ಆಟದ ಅಂತ್ಯದ ವೇಳೆಗೆ ಭಾರತ 3 ವಿಕೆಟ್‌ಗಳಿಗೆ 359 ರನ್ ಗಳಿಸಿತು. ಓಪನರ್ ಯಶಸ್ವಿ ಜೈಸ್ವಾಲ್ ಅಮೋಘ ಶತಕ (101) ಗಳಿಸಿದರು. ಅದೇ ಸಮಯದಲ್ಲಿ, ನಾಯಕ ಶುಭ್​ಮನ್ ಗಿಲ್ ಕೂಡ ಶತಕ ಗಳಿಸಿದರು ಮತ್ತು ಅವರು 127 ರನ್ ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ ಸದ್ಯ 500 ರನ್​ಗಳ ಗುರಿಯತ್ತ ಚಿತ್ತ ನೆಟ್ಟಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್