AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ನಮಗೆ ಇನ್ನೂ ಚಾನ್ಸ್ ಇದೆ… ಸೋತ ಬಳಿಕ ರಿಷಭ್ ಪಂತ್ ಅಚ್ಚರಿಯ ಹೇಳಿಕೆ

IPL 2025 PBKS vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 54ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 236 ರನ್ ಕಲೆಹಾಕಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 199 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಶ್ರೇಯಸ್ ಅಯ್ಯರ್ ಪಡೆ 37 ರನ್​ಗಳ ಜಯ ಸಾಧಿಸಿದೆ.

IPL 2025: ನಮಗೆ ಇನ್ನೂ ಚಾನ್ಸ್ ಇದೆ... ಸೋತ ಬಳಿಕ ರಿಷಭ್ ಪಂತ್ ಅಚ್ಚರಿಯ ಹೇಳಿಕೆ
Rishabh Pant
ಝಾಹಿರ್ ಯೂಸುಫ್
|

Updated on: May 05, 2025 | 8:30 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಸೋಲನುಭವಿಸಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ (PBKS) ತಂಡವು 20 ಓವರ್​ಗಳಲ್ಲಿ 236 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 199 ರನ್​ ಬಾರಿಸಿ 37 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಸೋಲಿನ ಬಳಿಕ ಮಾತನಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್, ಪ್ಲೇಆಫ್​ಗೇರಲು ನಮಗೆ ಇನ್ನೂ ಉತ್ತಮ ಅವಕಾಶವಿದೆ ಎಂದಿದ್ದಾರೆ. ಏಕೆಂದರೆ ಮುಂದಿನ ಮೂರು ಪಂದ್ಯಗಳು ನಿರ್ಣಾಯಕ ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿ ಪ್ಲೇಆಫ್​ಗೇರುವ ವಿಶ್ವಾಸವಿದೆ ಎಂದು ಪಂತ್ ಹೇಳಿದ್ದಾರೆ.

ಇನ್ನು ಈ ಸೋಲನ್ನು ವಿಮರ್ಶಿಸಿದ ಪಂತ್, ನಾವು ಹೆಚ್ಚು ರನ್ ಬಿಟ್ಟು ಕೊಟ್ಟಿದ್ದು ದುಬಾರಿಯಾಯಿತು. ಅದರಲ್ಲೂ ಕೆಲ ನಿರ್ಣಾಯಕ ಕ್ಯಾಚ್​ಗಳನ್ನು ಕೈ ಬಿಟ್ಟೆವು. ಇವೆಲ್ಲವೂ ನೋವುಂಟು ಮಾಡುತ್ತದೆ. ಆದರೆ ಏನೂ ಮಾಡಕ್ಕಾಗಲ್ಲ. ಅವೆಲ್ಲವೂ ಪಂದ್ಯದ ಒಂದು ಭಾಗ.

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಇದಾಗ್ಯೂ ನಮ್ಮ ಬೌಲರ್​ಗಳುಆರಂಭದಲ್ಲಿಯೇ ಲೆಂಗ್ತ್ ಅನ್ನು ಸರಿಯಾಗಿ ಆಯ್ಕೆ ಮಾಡಲಿಲ್ಲ. ಇದರಿಂದ ಆರಂಭದಲ್ಲೇ ಹೆಚ್ಚಿನ ರನ್​ಗಳ ಸೋರಿಕೆಯಾಯಿತು. ಆದರೆ ಮುಂದಿನ ಮೂರು ಪಂದ್ಯಗಳ ಮೂಲಕ ನಾವು ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ರಿಷಭ್ ಪಂತ್ ಹೇಳಿದ್ದಾರೆ.

ಕೊನೆಯ ಮೂರು ಲೀಗ್​ ಮ್ಯಾಚ್​ಗಳನ್ನು ನಾವು ನಾವು ಗೆದ್ದರೆ, ಖಂಡಿತವಾಗಿಯೂ ಪ್ಲೇಆಫ್​ಗೇರಬಹುದು. ನಮ್ಮ ಅಗ್ರ ಕ್ರಮಾಂಕದ ಬ್ಯಾಟರ್​ಗಳಿಂದ ಉತ್ತಮ ಪ್ರದರ್ಶನವನ್ನು ಮೂಡಿಬಂದರೆ ನ ಅದು ಅರ್ಥಪೂರ್ಣವಾಗಿರುತ್ತದೆ. ಹೀಗಾಗಿ ಮುಂದಿನ ಮೂರು ಮ್ಯಾಚ್​ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವು ದಾಖಲಿಸಿ ಪ್ಲೇಆಫ್​ಗೆ ಪ್ರವೇಶಿಸುವ ವಿಶ್ವಾಸವಿದೆ ಎಂದು ರಿಷಭ್ ಪಂತ್ ಹೇಳಿದ್ದಾರೆ.

ಸದ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡವು 11 ಪಂದ್ಯಗಳನ್ನಾಡಿದ್ದು. ಈ ವೇಳೆ 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, 6 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಇದೀಗ ಎಲ್​​ಎಸ್​ಜಿ ಪಡೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದೆ. ಅಂದರೆ ಇನ್ನುಳಿದ 3 ಮ್ಯಾಚ್​ಗಳಲ್ಲಿ ಎಲ್​ಎಸ್​ಜಿ ತಂಡ ಗೆದ್ದರೂ 16 ಅಂಕಗಳನ್ನು ಮಾತ್ರ ಪಡೆಯಲಿದೆ. ಈ ಅಂಕಗಳೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡುವ ನಿರೀಕ್ಷೆಯಲ್ಲಿದ್ದಾರೆ ರಿಷಭ್ ಪಂತ್.

ಇದನ್ನೂ ಓದಿ: PSL ಗೆ ಕೈಕೊಟ್ಟು IPL ಗೆ ಎಂಟ್ರಿ ಕೊಟ್ಟ ಸ್ಫೋಟಕ ದಾಂಡಿಗ

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಗಳನ್ನಾಡಬೇಕಿದೆ. ಈ ಮ್ಯಾಚ್​ಗಳಲ್ಲಿ ಜಯ ಸಾಧಿಸುವ ಮೂಲಕ ಎಲ್​ಎಸ್​ಜಿ ತಂಡ ಪ್ಲೇಆಫ್​​ಗೆ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್