
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯದಿಂದ ರಿಷಭ್ ಪಂತ್ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಬ್ಯಾಟಿಂಗ್ ವೇಳೆ ಪಂತ್ ಅವರ ಬಲಗಾಲಿಗೆ ಗಂಭೀರ ಗಾಯವಾಗಿತ್ತು. ಈ ಗಾಯದ ಕಾರಣ ಪಂತ್ ಮ್ಯಾಂಚೆಸ್ಟರ್ನಲ್ಲಿ ವಿಕೆಟ್ ಕೀಪಿಂಗ್ ಮಾಡುವುದಿಲ್ಲ. ಇದರ ಹೊರತಾಗಿ ಅಗತ್ಯತೆವಿದ್ದರೆ ಮಾತ್ರ ಅವರು ಬ್ಯಾಟಿಂಗ್ಗೆ ಆಗಮಿಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರಿಷಭ್ ಪಂತ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ್ದರು. ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ್ದ ಪಂತ್ 68ನೇ ಓವರ್ನಲ್ಲಿ ರಿವರ್ಸ್ ಸ್ವೀಪ್ ಶಾಟ್ ಬಾರಿಸಲು ಯತ್ನಿಸಿದ್ದರು. ಈ ಪ್ರಯತ್ನದ ನಡುವೆ ಚೆಂಡು ನೇರವಾಗಿ ಕಾಲಿಗೆ ಬಡಿದಿದೆ. ಇದರಿಂದ ಅಸ್ವಸ್ಥರಾದ ಅವರು ನೋವಿನಿಂದ ಕುಸಿದು ಕೂತಿದ್ದರು. ಅಲ್ಲದೆ ಬ್ಯಾಟಿಂಗ್ ನಿಲ್ಲಿಸಿ ಪೆವಿಲಿಯನ್ಗೆ ಮರಳಿದ್ದರು.
Fingers crossed for our X-factor 🤞
Speedy recovery, Rishabh!#SonySportsNetwork #GroundTumharaJeetHamari #ENGvIND #NayaIndia #DhaakadIndia #TeamIndia #ExtraaaInnings pic.twitter.com/ZHfyMvMfNx
— Sony Sports Network (@SonySportsNetwk) July 23, 2025
ಇದಾದ ಬಳಿಕ ಅ್ಯಂಬುಲೆನ್ಸ್ ಮೂಲಕ ರಿಷಭ್ ಪಂತ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗಲಾಗಿತ್ತು. ಇದೀಗ ಅವರ ವೈದ್ಯಕೀಯ ವರದಿಗಳು ಬಂದಿದ್ದು, ತೀವ್ರ ಗಾಯದ ಕಾರಣ ಅವರಿಗೆ 6 ವಾರಗಳ ಕಾಲ ವಿಶ್ರಾಂತಿ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಿಂದ ಪಂತ್ ಹೊರಗುಳಿಯುವುದು ಸಹ ಖಚಿತವಾಗಿದೆ. ಇತ್ತ ರಿಷಭ್ ಹೊರಗುಳಿದರೆ ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗುವುದರಲ್ಲಿ ಅನುಮಾನವೇ ಇಲ್ಲ.
ಏಕೆಂದರೆ ಈ ಬಾರಿಯ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡೂ ಇನಿಂಗ್ಸ್ಗಳಲ್ಲೂ ರಿಷಭ್ ಶತಕ ಸಿಡಿಸಿದ್ದರು. ಇನ್ನು ದ್ವಿತೀಯ ಪಂದ್ಯದಲ್ಲಿ ಒಟ್ಟು 90 ರನ್ ಕಲೆಹಾಕಿದ್ದರು. ಮೂರನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 83 ರನ್ಗಳಿಸಿದ್ದರು. ಇದೀಗ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 37 ರನ್ ಬಾರಿಸಿದ್ದಾರೆ. ಈ ಮೂಲಕ ಒಟ್ಟು 462 ರನ್ ಕಲೆಹಾಕಿದ್ದಾರೆ. ಹೀಗಾಗಿಯೇ ಪಂತ್ ಹೊರಗುಳಿಯುತ್ತಿರುವುದು ಟೀಮ್ ಇಂಡಿಯಾ ಪಾಲಿಗೆ ದೊಡ್ಡ ಹಿನ್ನಡೆಯಾಗಲಿದೆ.
ಪಂತ್ ಅಲಭ್ಯತೆಯ ನಡುವೆ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಧ್ರುವ್ ಜುರೇಲ್ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ. ಏಕೆಂದರೆ ಲಾರ್ಡ್ಸ್ ಟೆಸ್ಟ್ ಪಂದ್ಯದ ವೇಳೆ ರಿಷಭ್ ಪಂತ್ ಅವರ ಬೆರಳಿಗೆ ಗಾಯವಾಗಿತ್ತು. ಈ ವೇಳೆ ಬದಲಿ ವಿಕೆಟ್ ಕೀಪರ್ ಆಗಿ ಧ್ರುವ್ ಜುರೇಲ್ ಕಾಣಿಸಿಕೊಂಡಿದ್ದರು. ಹೀಗಾಗಿ ಮ್ಯಾಂಚೆಸ್ಟರ್ ಟೆಸ್ಟ್ನಲ್ಲೂ ಜುರೇಲ್ ಅವರಿಗೆ ಕೀಪಿಂಗ್ ಜವಾಬ್ದಾರಿ ನೀಡುವುದು ಖಚಿತ.
Published On - 1:33 pm, Thu, 24 July 25