AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಪ್ರತಿಯೊಂದಕ್ಕೂ ಕೃತಜ್ಞನಾಗಿರುವೆ…ನಡೆದಾಡುವ ವಿಡಿಯೋ ಹಂಚಿಕೊಂಡ ರಿಷಭ್ ಪಂತ್

Rishabh Pant: ಸದ್ಯ ಚಿಕಿತ್ಸೆಯಲ್ಲಿರುವ ರಿಷಭ್ ಪಂತ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲು ಕನಿಷ್ಠ 5-6 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Rishabh Pant: ಪ್ರತಿಯೊಂದಕ್ಕೂ ಕೃತಜ್ಞನಾಗಿರುವೆ...ನಡೆದಾಡುವ ವಿಡಿಯೋ ಹಂಚಿಕೊಂಡ ರಿಷಭ್ ಪಂತ್
Rishabh Pant
TV9 Web
| Edited By: |

Updated on:Mar 15, 2023 | 9:39 PM

Share

ಟೀಮ್ ಇಂಡಿಯಾದ  ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ (Rishabh Pant) ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪವಾಡಸದೃಶವಾಗಿ ಪಾರಾಗಿದ್ದರು. ದೆಹಲಿಯಿಂದ ರೂರ್ಕಿಯಲ್ಲಿರುವ ತನ್ನ ಮನೆಗೆ ಪ್ರಯಾಣಿಸುತ್ತಿದ್ದಾಗ ಹರಿದ್ವಾರ ಜಿಲ್ಲೆಯ ಮಂಗಳೌರ್ ಮತ್ತು ನರ್ಸನ್ ನಡುವಿನ ಡಿವೈಡರ್‌ಗೆ ಪಂತ್ ಅವರ ಕಾರು ಡಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಇದಾದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿರುವ ಪಂತ್ ಇದೀಗ ಮನೆಯಲ್ಲಿಯೇ ಚಿಕಿತ್ಸೆ ಮುಂದುವರೆಸಿದ್ದಾರೆ.

ಈ ಭೀಕರ ಅಪಘಾತದ ಬಳಿಕ ರಿಷಭ್ ಪಂತ್ ಎಲ್ಲೂ ತಮ್ಮ ಕೆಟ್ಟ ಅನುಭವವನ್ನು ಹಂಚಿಕೊಂಡಿರಲಿಲ್ಲ. ಅದರಲ್ಲೂ ಪ್ರಸ್ತುತ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿರಲಿಲ್ಲ. ಇದೀಗ ಶುಶ್ರೂಷೆಯ ವಿಡಿಯೋವೊಂದನ್ನು  ಸೋಷಿಯಲ್ ಮೀಡಿಯಾದಲ್ಲಿ ಖುದ್ದು ಪಂತ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಈ ವಿಡಿಯೋದಲ್ಲಿ ರಿಷಭ್ ಪಂತ್ ಈಜುಕೊಳದಲ್ಲಿ ನಡೆಯುತ್ತಿರುವುದನ್ನು ಕಾಣಬಹುದು. ಅಪಘಾತದಿಂದಾಗಿ ಅವರ ಕಾಲಿಗೆ ಗಂಭೀರವಾದ ಗಾಯವಾಗಿದ್ದು, ಇದೀಗ ಪಾದಗಳಿಗೆ ಶಕ್ತಿ ತುಂಬುವ ಸಲುವಾಗಿ ಶುಶ್ರೂಷೆ ನೀಡಲಾಗುತ್ತಿದೆ. ಅದರ ಭಾಗವಾಗಿ ನೀರಿನಲ್ಲಿ ನಡೆಯುತ್ತಿರುವ ವಿಡಿಯೋವನ್ನು ಪಂತ್ ಹಂಚಿಕೊಂಡಿದ್ದಾರೆ.

ಇನ್ನು ಈ ವಿಡಿಯೋಗೆ ಸಣ್ಣಪುಟ್ಟ ವಿಷಯಗಳಿಗೂ, ದೊಡ್ಡ ವಿಷಯಗಳಿಗೂ…ಎಲ್ಲದಕ್ಕೂ ನಾನು ಕೃತಜ್ಞನಾಗಿರುವೆ ಎಂದು ಕ್ಯಾಪ್ಶನ್ ನೀಡಿದ್ದಾರೆ. ಒಟ್ಟಿನಲ್ಲಿ ನಡೆಯಲು ಯತ್ನಿಸುತ್ತಿರುವ ವಿಡಿಯೋ ಹಂಚಿಕೊಳ್ಳುವ ಮೂಲಕ ರಿಷಭ್ ಪಂತ್ ಶೀಘ್ರದಲ್ಲೇ ಗುಣಮುಖನಾಗಲಿದ್ದೇನೆ ಎಂಬ ಸಂದೇಶ ರವಾನಿಸಿದ್ದಾರೆ. ಇನ್ನು ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಟ್ವಿಟರ್​ ಹ್ಯಾಂಡಲ್​, ಮತ್ತಷ್ಟು ಬಲಿಷ್ಠವಾಗಲಿ ಎಂದು ಹಾರೈಸಿದ್ದಾರೆ.

ಸದ್ಯ ಚಿಕಿತ್ಸೆಯಲ್ಲಿರುವ ರಿಷಭ್ ಪಂತ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲು ಕನಿಷ್ಠ 5-6 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಇದರಿಂದ ಮುಂಬರುವ ಐಪಿಎಲ್​, ವಿಶ್ವ ಟೆಸ್ಟ್ ಚಾಂಪಿಯನ್ಸ್​ ಹಾಗೂ ಏಕದಿನ ವಿಶ್ವಕಪ್ ಸೇರಿದಂತೆ ಪ್ರಮುಖ ಟೂರ್ನಿಗಳಲ್ಲಿ ಯುವ ಸ್ಪೋಟಕ ದಾಂಡಿಗ ಕಾಣಿಸಿಕೊಳ್ಳುವುದಿಲ್ಲ.

Published On - 7:52 pm, Wed, 15 March 23

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?