Rishabh Pant: ಟೀಮ್ ಇಂಡಿಯಾ ಜೊತೆ ಕಾಣಿಸಿಕೊಂಡ ರಿಷಭ್ ಪಂತ್
Rishabh Pant: ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಫಿಟ್ನೆಸ್ ಮರಳಿ ಪಡೆಯುವ ಹಾದಿಯಲ್ಲಿದ್ದಾರೆ. ಐಪಿಎಲ್ ಆರಂಭದ ವೇಳೆ ಅವರು ಸಂಪೂರ್ಣ ಫಿಟ್ ಆಗಿರಲಿದ್ದು, ಈ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಲಿದ್ದಾರೆ.
ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಟೀಮ್ ಇಂಡಿಯಾ (Team India) ಜೊತೆ ಕಾಣಿಸಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ಮೈದಾನದಿಂದ ಹೊರಗುಳಿದಿರುವ ಪಂತ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ತಂಡದೊಂದಿಗೆ ಅಭ್ಯಾಸ ನಡೆಸಿದರು. ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಮಂಗಳವಾರ ಟೀಮ್ ಇಂಡಿಯಾ ಅಭ್ಯಾಸ ನಡೆಸಿತು.
ಈ ವೇಳೆ ಮೈದಾನಕ್ಕೆ ಆಗಮಿಸಿದ ಪಂತ್ ಸಹ ಆಟಗಾರರೊಂದಿಗೆ ಕುಶಲೋಪರಿ ನಡೆಸಿದರು. ಅಷ್ಟೇ ಅಲ್ಲದೆ ಕೆಲ ಕಾಲ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ. ಇದೀಗ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಂಡಿರುವ ರಿಷಭ್ ಪಂತ್ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ರಿಷಭ್ ಪಂತ್ ಕಂಬ್ಯಾಕ್ ಯಾವಾಗ?
ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಫಿಟ್ನೆಸ್ ಮರಳಿ ಪಡೆಯುವ ಹಾದಿಯಲ್ಲಿದ್ದಾರೆ. ಐಪಿಎಲ್ ಆರಂಭದ ವೇಳೆ ಅವರು ಸಂಪೂರ್ಣ ಫಿಟ್ ಆಗಿರಲಿದ್ದು, ಈ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಲಿದ್ದಾರೆ. ಅದರಂತೆ ಈ ಬಾರಿಯ ಐಪಿಎಲ್ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.
ಇದನ್ನೂ ಓದಿ: Rohit Sharma: ಭಾರತ ತಂಡ ಗೆದ್ದರೆ ರೋಹಿತ್ ಶರ್ಮಾ ಹೆಸರಿಗೆ ಹೊಸ ದಾಖಲೆ
ಭಾರತ ಮತ್ತು ಅಫ್ಘಾನ್ ಪಂದ್ಯ:
ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರನೇ ಟಿ20 ಪಂದ್ಯ ಇಂದು (ಜ.17) ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ. ಇದಕ್ಕೂ ಮುನ್ನ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಇಂದೋರ್ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ 6 ವಿಕೆಟ್ಗಳ ಗೆಲುವು ದಾಖಲಿಸಿತು. ಇದೀಗ ಸರಣಿಯ ಕೊನೆಯ ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದೆ.