ಟೀಮ್ ಇಂಡಿಯಾದಿಂದ ರಿಯಾನ್ ಪರಾಗ್​ರನ್ನು ಕೈಬಿಡಲು ಇದುವೇ ಕಾರಣ

India T20 Squad: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರ ಈ ತಂಡದಲ್ಲಿ ಯುವ ಆಲ್​ರೌಂಡರ್ ರಿಯಾನ್ ಪರಾಗ್​ಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ. ಅಂದರೆ ಕಳೆದ ವರ್ಷ ಟೀಮ್ ಇಂಡಿಯಾ ಪರ 9 ಪಂದ್ಯಗಳನ್ನಾಡಿದ್ದ ಪರಾಗ್ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ.

ಟೀಮ್ ಇಂಡಿಯಾದಿಂದ ರಿಯಾನ್ ಪರಾಗ್​ರನ್ನು ಕೈಬಿಡಲು ಇದುವೇ ಕಾರಣ
Riyan Parag
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 12, 2025 | 12:12 PM

ವಯಸ್ಸು 23, ಜುಲೈ 6 ರಂದು ಭಾರತ ಟಿ20 ತಂಡಕ್ಕೆ ಪಾದಾರ್ಪಣೆ. ಆಗಸ್ಟ್ 7 ರಂದು ಟೀಮ್ ಇಂಡಿಯಾ ಏಕದಿನ ತಂಡದಲ್ಲೂ ಸ್ಥಾನದಲ್ಲ್ಲೂ ಸ್ಥಾನ. ಹೀಗೆ ಬಂದ ವೇಗದಲ್ಲೇ ಭಾರತದ ಪರ ಸೀಮಿತ ಓವರ್​ಗಳ ಪಂದ್ಯಗಳನ್ನಾಡಿದ ಆಟಗಾರನ ಹೆಸರು ರಿಯಾನ್ ಪರಾಗ್. ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಬ್ಯಾಟಿಂಗ್, ಫೀಲ್ಡಿಂಗ್ ಮೂಲಕ ಗಮನ ಸೆಳೆದಿದ್ದ ಯುವ ಆಟಗಾರ ಟೀಮ್ ಇಂಡಿಯಾದಲ್ಲಿ ಆಲ್​ರೌಂಡರ್ ಆಗಿ ಕಾಣಿಸಿಕೊಂಡಿದ್ದರು. ಆದರೆ ಹೀಗೆ ಬಂದ ವೇಗದಲ್ಲೇ ರಿಯಾನ್ ಪರಾಗ್ ಟೀಮ್ ಇಂಡಿಯಾದಿಂದ ಕಾಣ್ಮರೆಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ರಿಯಾನ್ ಪರಾಗ್​ಗೆ ಸ್ಥಾನ ನೀಡಲಾಗಿಲ್ಲ. ಇದಕ್ಕೂ ಮುನ್ನ ಪರಾಗ್ 2024 ರಲ್ಲಿ 9 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಆದರೀಗ ತಂಡದಿಂದ ಕೈ ಬಿಡಲೇನು ಕಾರಣ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ರಿಯಾನ್ ಹೊರಬೀಳಲು ಇದುವೇ ಕಾರಣ:

ಟೀಮ್ ಇಂಡಿಯಾದ ಬ್ಯಾಟಿಂಗ್ ಆಲ್​ರೌಂಡರ್ ರಿಯಾನ್ ಪರಾಗ್ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸದಿರಲು ಮುಖ್ಯ ಕಾರಣ ಗಾಯದ ಸಮಸ್ಯೆ. ದೇಶೀಯ ಅಂಗಳದಲ್ಲಿ ಅಸ್ಸಾಂ ಪರ ಕಣಕ್ಕಿಳಿಯುವ ಪರಾಗ್ ಭುಜದ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ.

ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಇಲ್ಲದಿದ್ದರೆ ಟೀಮ್ ಇಂಡಿಯಾ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ರಿಯಾನ್ ಪರಾಗ್ ಹೆಸರು ಕೂಡ ಕಾಣಿಸಿಕೊಳ್ಳುತ್ತಿತ್ತು.

ಅಂದಹಾಗೆ ರಿಯಾನ್ ಪರಾಗ್ 9 ಟಿ20 ಪಂದ್ಯಗಳಲ್ಲಿ 6 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 151ರ ಸ್ಟ್ರೈಕ್ ರೇಟ್​ನಲ್ಲಿ 106 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು 5 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 4 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ವಾಷಿಂಗ್ಟನ್ ಸುಂದರ್ ಮಿಂಚಿದರೆ, ರಿಯಾನ್ ಪರಾಗ್ ಅವರ ಟೀಮ್ ಇಂಡಿಯಾ ಬಾಗಿಲು ಬಂದ್ ಆಗುವುದರಲ್ಲಿ ಡೌಟೇ ಇಲ್ಲ. ಏಕೆಂದರೆ ಅತ್ತ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಜೊತೆ ಯುವ ಆಲ್​ರೌಂಡರ್​ಗಳ ದಂಡೇ ಇದ್ದು, ಹೀಗಾಗಿ ಗಾಯದ ಚೇತರಿಸಿಕೊಂಡ ಬಳಿಕ ಮತ್ತೆ ಕಂಬ್ಯಾಕ್ ಮಾಡಲು ರಿಯಾನ್ ಪರಾಗ್ ಮತ್ತಷ್ಟು ದಿನಗಳವರೆಗೆ ಕಾಯಬೇಕಾಗಿ ಬರಬಹುದು.

ಇದನ್ನೂ ಓದಿ: IPL 2025: RCB ತಂಡ ನಾಯಕ ಯಾರು? ಸ್ಪಷ್ಟನೆ ನೀಡಿದ ಕೋಚ್ ಆ್ಯಂಡಿ ಫ್ಲವರ್

ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ಟಿ20 ತಂಡ:

ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪಾನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್).

Published On - 11:55 am, Sun, 12 January 25

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ