ಉದ್ಯೋಗಿಗಳಿಗೆ ವಂಚನೆ ಆರೋಪ: ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ

Robin Uthappa: ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಭಾರತದ ಪರ ಒಟ್ಟು 59 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಏಕದಿನ ಕ್ರಿಕೆಟ್​ನಲ್ಲಿ 934 ರನ್ ಕಲೆಹಾಕಿದರೆ, ಟಿ20 ಕ್ರಿಕೆಟ್​ನಲ್ಲಿ 249 ರನ್ ಸಿಡಿಸಿದ್ದಾರೆ. ಇದರ ನಡುವೆ 7 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ನಿವೃತ್ತರಾಗಿರುವ ರಾಬಿನ್ ಕೆಲ ಲೀಗ್​​ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಉದ್ಯೋಗಿಗಳಿಗೆ ವಂಚನೆ ಆರೋಪ: ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ
Robin Uthappa
Follow us
ಝಾಹಿರ್ ಯೂಸುಫ್
|

Updated on:Dec 22, 2024 | 10:46 AM

ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ತಮ್ಮ ವಿರುದ್ಧ ಕೇಳಿ ಬಂದಿರುವ ವಂಚನೆ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬಿನ್ ಉತ್ತಪ್ಪ ವಿರುದ್ಧ ಬಂಧನದ ವಾರೆಂಟ್ ಜಾರಿ ಮಾಡಲಾಗಿತ್ತು. ಇದೀಗ ಈ ವಿಚಾರವಾಗಿ ಮಾಧ್ಯಮ ಪ್ರಕಟನೆಯ ಮೂಲಕ ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದು, ಆರೋಪ ಹೊತ್ತ ಕಂಪನಿಗೆ ಕೆಲ ವರ್ಷಗಳ ಹಿಂದೆಯೇ ನಾನು ರಾಜೀನಾಮೆ ನೀಡಿದ್ದೇನೆ. ಈ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ತಿಳಿಸಿದ್ದಾರೆ.

2018-19 ರರ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್, ಬೆರ್ರೀಸ್ ಫ್ಯಾಶನ್ ಹೌಸ್ ಕಂಪನಿಗಳಿಗೆ ಸಾಲದ ರೂಪದಲ್ಲಿ ಹಣ ಹೂಡಿಕೆ ಮಾಡಿದ್ದೆ. ಇದೇ ಕಾರಣಕ್ಕೆ ಆ ಕಂಪನಿಗಳು ನನ್ನನ್ನು ನಿರ್ದೇಶಕನಾಗಿ ನೇಮಕಗೊಳಿಸಿದ್ದವು. ಆದಾಗ್ಯೂ ಸಹ ನಾನು ಆ ಕಂಪನಿಗಳಲ್ಲಿ ಯಾವುದೇ ಸಕ್ರಿಯ ಕಾರ್ಯನಿರ್ವಾಹಕ ಪಾತ್ರವನ್ನು ಹೊಂದಿರಲಿಲ್ಲ ಎಂದು ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.

ವೃತ್ತಿಪರ ಕ್ರಿಕೆಟಿಗನಾಗಿ, ನಿರೂಪಕನಾಗಿ, ವೀಕ್ಷಕ ವಿವರಣೆಗಾರನಾಗಿ ನನಗೆ ಆ ಕಂಪನಿಗಳ ಕಾರ್ಯಾಚರಣೆಗಳಲ್ಲಿ ಭಾಗವಹಿಸಲು ಸಮಯವಿರಲಿಲ್ಲ. ಅಲ್ಲದೆ ಆ ಕಂಪನಿಗಳ ದೈನಂದಿನ ವ್ಯವಹಾರಗಳಲ್ಲಿ ನಾನು ಭಾಗಿಯಾಗಿರಲಿಲ್ಲ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸ್ಪಷ್ಟನೆ ನೀಡಿದ್ದಾರೆ.

ವಾಸ್ತವವಾಗಿ ನಾನು ಇದುವರೆಗೂ ಹಣ ಹೂಡಿಕೆ ಮಾಡಿರುವ ಇತರೆ ಕಂಪನಿಗಳಲ್ಲಿಯೂ ಕಾರ್ಯನಿರ್ವಾಹಕ ಪಾತ್ರವನ್ನು ವಹಿಸಿರುವುದಿಲ್ಲ. ಈಗ ಆರೋಪ ಎದುರಿಸುತ್ತಿರುವ ಕಂಪನಿಗಳು ನಾನು ಸಾಲದ ರೂಪದಲ್ಲಿ ನೀಡಿದ ಹಣವನ್ನು ಮರುಪಾವತಿಸಲು ವಿಫಲವಾಗಿವೆ ಎಂದು ಇದೇ ವೇಳೆ ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ ನಾನು ಹಲವು ವರ್ಷಗಳ ಹಿಂದೆಯೇ ನನ್ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆ ಕಂಪನಿಗಳ ವಿರುದ್ಧ ಪ್ರಸ್ತುತ ಕಾನೂನು ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಆರೋಪ ಎದುರಿಸುತ್ತಿರುವ ಕಂಪನಿಗಳಲ್ಲಿ ಉದ್ಯೋಗಿಗಳಿಗೆ ಬಾಕಿಯಿರುವ ಪಿಎಫ್ ಹಣ ಪಾವತಿಸುವಂತೆ ಒತ್ತಾಯಿಸಿ ಅಧಿಕಾರಿಗಳು ನೀಡಿರುವ ನೋಟಿಸ್‌ಗಳಿಗೆ ನನ್ನ ಕಾನೂನು ಸಲಹಾ ತಂಡವು ಪ್ರತಿಕ್ರಿಯಿಸಿದೆ ಎಂದು ಉತ್ತಪ್ಪ ತಿಳಿಸಿದ್ದಾರೆ.

ಆ ಕಂಪನಿಗಳಲ್ಲಿ ನನ್ನ ಪಾತ್ರವಿಲ್ಲ ಎಂದು ದೃಢೀಕರಿಸುವ ದಾಖಲೆಗಳನ್ನು ಸಹ ಒದಗಿಸಿದ್ದೇನೆ. ಅದರ ಹೊರತಾಗಿಯೂ ಪಿಎಫ್ ಅಧಿಕಾರಿಗಳು ತಮ್ಮ ಪ್ರಕ್ರಿಯೆಗಳನ್ನು ಮುಂದುವರೆಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಷಯವನ್ನು ಬಗೆಹರಿಸಲು ನನ್ನ ಕಾನೂನು ಸಲಹೆಗಾರರು ಕ್ರಮ ಕೈಗೊಳ್ಳಲಿದ್ದೇನೆ ಎಂದು ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.

ಏನಿದು ಪ್ರಕರಣ?

ರಾಬಿನ್ ಉತ್ತಪ್ಪ ಒಡೆತನದ ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯು ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿದ್ದರೂ, ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ ಅವರು, ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಇದೇ ತಿಂಗಳು ನಾಲ್ಕರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ಆಘಾತ: ರೋಹಿತ್ ಶರ್ಮಾ ಗಾಯಾಳು

ಈ ಹಿನ್ನಲೆಯಲ್ಲಿ ರಾಬಿನ್ ಉತ್ತಪ್ಪ ಅವರಿಗೆ ನೋಟಿಸ್ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಪ್ರಸ್ತುತ ಆ ವಿಳಾಸದಲ್ಲಿ ಅವರು ವಾಸವಿಲ್ಲ. ಹೀಗಾಗಿ ಇದೀಗ ಉತ್ತಪ್ಪ ಅವರಿಗೆ ವಾರೆಂಟ್ ಜಾರಿಗೊಳಿಸಲಾಗಿದೆ. ಈ ಬಂಧನದ ವಾರೆಂಟ್ ಬೆನ್ನಲ್ಲೇ ರಾಬಿನ್ ಉತ್ತಪ್ಪ ಇಡೀ ಪ್ರಕರಣದ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.

Published On - 7:28 am, Sun, 22 December 24

ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್