AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಹೆಸರಿಸಿದ ರಾಬಿನ್ ಉತ್ತಪ್ಪ

ICC ODI World Cup 2027: ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು 2027ರ ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ನಡೆಯಲಿದೆ. ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಗೆ ಭಾರತ ತಂಡ ಹೇಗಿರಬೇಕೆಂದು ತಿಳಿಸಿದ್ದಾರೆ ರಾಬಿನ್ ಉತ್ತಪ್ಪ.

ಏಕದಿನ ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಹೆಸರಿಸಿದ ರಾಬಿನ್ ಉತ್ತಪ್ಪ
Team India - Robin UthappaImage Credit source: x.com
ಝಾಹಿರ್ ಯೂಸುಫ್
|

Updated on: Aug 20, 2026 | 10:17 AM

Share

ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್‌ಗೆ ಭಾರತ ತಂಡ ಹೇಗಿರಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ತಿಳಿಸಿದ್ದಾರೆ. ಈ ತಂಡದಲ್ಲಿ ಅನುಭವಿ ಆಟಗಾರರೊಂದಿಗೆ ಯುವ ಆಟಗಾರರನ್ನೂ ಆಯ್ಕೆ ಮಾಡಿರುವುದು ವಿಶೇಷವಾಗಿದೆ.

ರೋಹಿತ್-ವಿರಾಟ್ ಜೋಡಿಯೇ ತಂಡದ ಜೀವಾಳ!

ವಯಸ್ಸಿನ ಲೆಕ್ಕಾಚಾರ ಬದಿಗಿಟ್ಟು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರಂತಹ ಹಿರಿಯ ದಿಗ್ಗಜರೇ 2027ರ ವಿಶ್ವಕಪ್‌ನಲ್ಲೂ ಭಾರತದ ಶಕ್ತಿಯಾಗಲಿದ್ದಾರೆ ಎಂದು ಉತ್ತಪ್ಪ ನಂಬಿದ್ದಾರೆ. ಇವರೊಂದಿಗೆ ಶುಭ್‌ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಮಧ್ಯಮ ಕ್ರಮಾಂಕದ ಜವಾಬ್ದಾರಿ ಹೊರಲಿದ್ದಾರೆ.

ರಾಹುಲ್-ಸಂಜು ವಿಕೆಟ್ ಕೀಪಿಂಗ್ ಜವಾಬ್ದಾರಿ:

ವಿಕೆಟ್ ಕೀಪರ್ ಸ್ಥಾನಕ್ಕಾಗಿ ಕನ್ನಡಿಗ ಕೆ.ಎಲ್. ರಾಹುಲ್ ಮತ್ತು ಕೇರಳದ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್ ಇಬ್ಬರಿಗೂ ಉತ್ತಪ್ಪ ಮಣೆ ಹಾಕಿದ್ದಾರೆ. ರಾಹುಲ್ ಮಧ್ಯಮ ಕ್ರಮಾಂಕಕ್ಕೆ ಸ್ಥಿರತೆ ನೀಡಿದರೆ, ಸಂಜು ಸ್ಯಾಮ್ಸನ್ ಯಾವುದೇ ಕ್ರಮಾಂಕದಲ್ಲೂ ಕಣಕ್ಕಿಳಿದು ಪಂದ್ಯದ ಚಿತ್ರಣ ಬದಲಿಸಬಲ್ಲ ಎಕ್ಸ್-ಫ್ಯಾಕ್ಟರ್ ಆಗಿ ಗುರುತಿಸಿಕೊಂಡಿದ್ದಾರೆ.

ತಂಡದಲ್ಲಿದ್ದಾರೆ ಸ್ಟಾರ್ ಆಲ್‌ರೌಂಡರ್‌ಗಳು:

ಉತ್ತಪ್ಪ ಆಯ್ಕೆ ಮಾಡಿರುವ ತಂಡದಲ್ಲಿ ಜಡ್ಡು-ಅಕ್ಷರ್ ಜೋಡಿ ಮತ್ತೆ ಒಂದಾಗಿದೆ. ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಇಬ್ಬರೂ ಎಡಗೈ ಸ್ಪಿನ್ ಜೊತೆಗೆ ಬ್ಯಾಟಿಂಗ್ ಆಳವನ್ನು ಹೆಚ್ಚಿಸಲಿದ್ದಾರೆ. ಇವರೊಂದಿಗೆ ಹಾರ್ದಿಕ್ ಪಾಂಡ್ಯ ಪ್ರಮುಖ ವೇಗದ ಆಲ್‌ರೌಂಡರ್ ಆಗಿ ತಂಡದ ಸಮತೋಲನ ಕಾಯ್ದುಕೊಳ್ಳಲಿದ್ದಾರೆ ಎಂದು ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.

ವೈಭವ್ ಸೂರ್ಯವಂಶಿ ಅಚ್ಚರಿಯ ಆಯ್ಕೆ!

ಈ ತಂಡದ ಅತ್ಯಂತ ದೊಡ್ಡ ಹೈಲೈಟ್ ಎಂದರೆ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಆಯ್ಕೆ. ದೇಶಿ ಕ್ರಿಕೆಟ್‌ನಲ್ಲಿ ಸಣ್ಣ ವಯಸ್ಸಿಗೆ ಭಾರಿ ಸದ್ದು ಮಾಡಿರುವ ಈ ಎಡಗೈ ಬ್ಯಾಟರ್‌ನನ್ನು ತಂಡದಲ್ಲಿಟ್ಟುಕೊಳ್ಳುವ ಮೂಲಕ ಉತ್ತಪ್ಪ ಭವಿಷ್ಯದ ತಾರೆಗೆ ಮಣೆ ಹಾಕಿದ್ದಾರೆ.

ಬುಮ್ರಾ ನೇತೃತ್ವದ ಘಾತಕ ಬೌಲಿಂಗ್ ವಿಭಾಗ:

ವೇಗದ ಬೌಲಿಂಗ್ ಜವಾಬ್ದಾರಿಯನ್ನು ಜಸ್​ಪ್ರೀತ್ ಬುಮ್ರಾ ಮುನ್ನಡೆಸಲಿದ್ದು, ಅವರಿಗೆ ಮೊಹಮ್ಮದ್ ಸಿರಾಜ್ ಮತ್ತು ಎಡಗೈ ವೇಗಿ ಅರ್ಷದೀಪ್ ಸಿಂಗ್ ಸಾಥ್ ನೀಡಲಿದ್ದಾರೆ. ಹಾಗೆಯೇ ಹಿರಿಯ ಸ್ವಿಂಗ್ ಮಾಂತ್ರಿಕ ಭುವನೇಶ್ವರ ಕುಮಾರ್ ಅವರಿಗೆ ಉತ್ತಪ್ಪ ತಂಡದಲ್ಲಿ ಸ್ಥಾನ ನೀಡಿದ್ದಾರೆ. ಇನ್ನು ಪ್ರಮುಖ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ: ಇಬ್ಬರಿಗೂ 5 ವಿಕೆಟ್​: ಚೆಂಡು ಕತ್ತರಿಸಿ ಹಂಚಿಕೊಂಡ ಬೌಲರ್​ಗಳು!

ರಾಬಿನ್ ಉತ್ತಪ್ಪ ಅವರ ಭಾರತ ಏಕದಿನ ವಿಶ್ವಕಪ್ ತಂಡ: ರೋಹಿತ್ ಶರ್ಮಾ, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ವೈಭವ್ ಸೂರ್ಯವಂಶಿ, ಕೆ.ಎಲ್. ರಾಹುಲ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಭುವನೇಶ್ವರ ಕುಮಾರ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ