IND vs ENG 2nd Test: ರೋಹಿತ್-ಗಿಲ್ ಔಟ್, ಜೈಸ್ವಾಲ್ ಅರ್ಧಶತಕ: ಭೋಜನ ವಿರಾಮದ ವೇಳೆಗೆ ಭಾರತ 103-2

India vs England Second Test: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಸಾಧಾರಣ ಆರಂಭ ಪಡೆದುಕೊಂಡಿದೆ. ಯಶಸ್ವಿ ಜೈಸ್ವಾಲ್ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿ ನಿಂತಿದ್ದಾರೆ. ಆದರೆ, ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ವಿಕೆಟ್ ಕಳೆದುಕೊಂಡಿದೆ.

IND vs ENG 2nd Test: ರೋಹಿತ್-ಗಿಲ್ ಔಟ್, ಜೈಸ್ವಾಲ್ ಅರ್ಧಶತಕ: ಭೋಜನ ವಿರಾಮದ ವೇಳೆಗೆ ಭಾರತ 103-2
Jaiswal and Rohit Sharma
Follow us
Vinay Bhat
|

Updated on: Feb 02, 2024 | 11:38 AM

ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ (India vs England) ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಪುನಃ ಕಳಪೆ ಆರಂಭ ಪಡೆದುಕೊಂಡಿದೆ. ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಯಶಸ್ವಿ ಜೈಸ್ವಾಲ್ ಹಾಗೂ ಶ್ರೇಯಸ್ ಅಯ್ಯರ್ ಎಚ್ಚರಿಕೆಯಿಂದ ಬ್ಯಾಟ್ ಬೀಸುತ್ತಿದ್ದಾರೆ. ಭೋಜನ ವಿರಾಮದ ವೇಳೆಗೆ ಭಾರತ 31 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 103 ರನ್ ಕಲೆಹಾಕಿದೆ. ಮೊದಲ ಸೆಷನ್ ಇಂಗ್ಲೆಂಡ್ ತಂಡದ ಪಾಲಾಗಿದೆ ಎನ್ನಬಹುದು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಓಪನರ್​ಗಳಾಗಿ ಕಣಕ್ಕಿಳಿದ ಜೈಸ್ವಾಲ್ ಹಾಗೂ ರೋಹಿತ್ ಮೊದಲ ವಿಕೆಟ್​ಗೆ 40 ರನ್​ಗಳ ಜೊತೆಯಾಟ ಆಡಿದರು. ಚೆನ್ನಾಗಿಯೆ ಆಡುತ್ತಿದ್ದ ಹಿಟ್​ಮ್ಯಾನ್ 14 ರನ್ ಗಳಿಸಿದ್ದಾಗ ಶೋಯೆಜ್ ಬಶಿರ್ ಬೌಲಿಂಗ್​ನಲ್ಲಿ ಒಲ್ಲಿ ಪೋಪ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಬಳಿಕ ಶುಭ್​ಮನ್ ಗಿಲ್ ಜೊತೆಯಾದ ಜೈಸ್ವಾಲ್ ಎಚ್ಚರಿಕೆಯಿಂದ ಬ್ಯಾಟ್ ಬೀಸಿದರು.

ಬಲಿಷ್ಠ ಭಾರತಕ್ಕೆ ನೇಪಾಳ ಎದುರಾಳಿ; ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ?

ಇದನ್ನೂ ಓದಿ
Image
ಟೆಸ್ಟ್ ಕ್ರಿಕೆಟಿಗೆ ಕಾಲಿಟ್ಟ RCB ಹುಡುಗ: ಪಟಿದಾರ್ ಏನು ಮಾತನಾಡಿದ್ರು?
Image
2ನೇ ಟೆಸ್ಟ್​ನಲ್ಲಿ ಟಾಸ್ ಗೆದ್ದ ಭಾರತ: ಪಟಿದಾರ್ ಪದಾರ್ಪಣೆ, ಮೂರು ಬದಲಾವಣೆ
Image
2ನೇ ಟೆಸ್ಟ್ ಆರಂಭಕ್ಕೂ ಮುನ್ನ ಶಾಕ್: ಸ್ಟಾರ್ ಬೌಲರ್ ಸರಣಿಯಿಂದಲೇ ಔಟ್
Image
ಇಂದಿನಿಂದ ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್ ಆರಂಭ: ರೋಚಕತೆ ಸೃಷ್ಟಿಸಿದ ಪಿಚ್

ಆದರೆ, ಆಡಲೇ ಬೇಕಾದ ಪಂದ್ಯದಲ್ಲಿ ಗಿಲ್ ಮತ್ತೊಮ್ಮೆ ವೈಫಲ್ಯ ಅನುಭವಿಸಿದರು. ಎರಡನೇ ಟೆಸ್ಟ್​ನಲ್ಲಿ ಸ್ಥಾನ ಪಡೆದ ಜೇಮ್ಸ್ ಅ್ಯಂಡರ್ಸನ್ 34 ರನ್ ಗಳಿಸಿದ್ದ ಗಿಲ್​ಗೆ ಪೆವಿಲಿಯನ್ ಹಾದಿ ತೋರಿಸಿದರು. ಗಿಲ್-ಜೈಸ್ವಾಲ್ 49 ರನ್​ಗಳ ಕಾಣಿಕೆ ನೀಡಿದರು. ಬಳಿಕ ಜೈಸ್ವಾಲ್ ಟೆಸ್ಟ್ ಕ್ರಿಕೆಟ್​ನಲ್ಲಿ ಮೂರನೇ ಅರ್ಧಶತಕ ಸಿಡಿಸಿದರು. ಸದ್ಯ ಜೈಸ್ವಾಲ್ 92 ಎಸೆತಗಳಲ್ಲಿ 51 ಹಾಗೂ ಶ್ರೇಯಸ್ ಅಯ್ಯರ್ 7 ಎಸೆತಗಳಲ್ಲಿ 4 ರನ್ ಗಳಿಸಿದ್ದಾರೆ.

ಎರಡನೇ ಟೆಸ್ಟ್ ಪಂದ್ಯಕ್ಕೆ ಉಭಯ ತಂಡಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಜಾಗಕ್ಕೆ ಹೊಸ ಆಟಗಾರರ ಎಂಟ್ರಿ ಆಗಿದೆ. ಮೊಹಮ್ಮದ್ ಸಿರಾಜ್​ಗೆ ವಿಶ್ರಾಂತಿ ನೀಡಲಾಗಿದೆ. ಇದೇ ಮೊದಲ ಬಾರಿಗೆ ರಜತ್ ಪಟಿದಾರ್ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಈ ಮೂಲಕ ಟೀಮ್ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ್ದಾರೆ.

ಹಾಗೆಯೆ ಮೂರನೇ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸ್ಪಿನ್ ವಿಭಾಗವನ್ನು ಆರ್. ಅಶ್ವಿನ್ ಮುನ್ನಡೆಸಲಿದ್ದಾರೆ. ವೇಗಿಗಳಾಗಿ ಜಸ್​ಪ್ರಿತ್ ಬುಮ್ರಾ ಮತ್ತು ಮುಖೇಶ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಇತ್ತ ಇಂಗ್ಲೆಂಡ್ ತಂಡ ಎರಡು ಬದಲಾವಣೆ ಮಾಡಿಕೊಂಡಿದೆ. ಯುವ ಸ್ಪಿನ್ನರ್ ಶೊಯೆಬ್ ಬಶೀರ್ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಸ್ಪಿನ್ನರ್ ಜ್ಯಾಕ್ ಲೀಚ್ ಗಾಯಗೊಂಡಿರುವ ಕಾರಣ ಇವರ ಜಾಗದಲ್ಲಿ ಶೊಯೆಬ್​ಗೆ ಸ್ಥಾನ ನೀಡಲಾಗಿದೆ.

ಉಭಯ ತಂಡಗಳು:

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಟಿದಾರ್, ಕೆಎಸ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮುಖೇಶ್ ಕುಮಾರ್.

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಶೊಯೆಬ್ ಬಶೀರ್, ಜೇಮ್ಸ್ ಅ್ಯಂಡರ್ಸನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ