AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2027ರ ಏಕದಿನ ವಿಶ್ವಕಪ್‌ ಆಡುವ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ

ವೆಸ್ಟ್ ಇಂಡೀಸ್ ವಿರುದ್ಧ ಶತಕ ಸಿಡಿಸಿದ ರೋಹಿತ್ ಶರ್ಮಾ, 2027 ಏಕದಿನ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಟೀಕಾಕಾರರಿಗೆ ಬ್ಯಾಟ್‌ನಿಂದಲೇ ಉತ್ತರ ನೀಡಿದ ಹಿಟ್‌ಮ್ಯಾನ್, 2027ರಲ್ಲಿ ವಿಶ್ವಕಪ್ ಗೆಲ್ಲುವುದು ತಮ್ಮ ಮುಂದಿನ ಮುಖ್ಯ ಗುರಿ ಎಂದಿದ್ದಾರೆ. ಪ್ರಸ್ತುತದಲ್ಲಿ ಬದುಕುತ್ತಾ, ಪ್ರತಿ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುವುದು ಮತ್ತು ಫಿಟ್ನೆಸ್ ಕಾಯ್ದುಕೊಳ್ಳುವುದು ತಮ್ಮ ತಂತ್ರ ಎಂದು ರೋಹಿತ್ ತಿಳಿಸಿದ್ದಾರೆ.

2027ರ ಏಕದಿನ ವಿಶ್ವಕಪ್‌ ಆಡುವ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on: Oct 01, 2026 | 6:10 PM

Share

ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ದಾಖಲೆಯ ಜಯದತ್ತ ಮುನ್ನಡೆಸಿದರು. ಈ ಶತಕದೊಂದಿಗೆ ರೋಹಿತ್ ತನ್ನನ್ನು ಟೀಕಿಸುತ್ತಿದ್ದವರಿಗೆ ಬ್ಯಾಟ್​ನಿಂದಲೇ ಉತ್ತರ ನೀಡಿದರು. ವಾಸ್ತವವಾಗಿ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ರೋಹಿತ್​ರನ್ನು ಆಡಿಸಬೇಕೆ ಅಥವಾ ಬೇಡವೇ ಎಂಬ ಚರ್ಚೆ ಭಾರತೀಯ ಕ್ರಿಕೆಟ್ ವಲಯದಲ್ಲಿ ನಡೆಯುತ್ತಿದೆ. ಹೀಗಿರುವಾಗ 2027 ರಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ರೋಹಿತ್ ಶರ್ಮಾ ಇದೇ ಮೊದಲ ಬಾರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಟೆಸ್ಟ್ ಮತ್ತು ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಏಕದಿನ ಸ್ವರೂಪದಲ್ಲಿ ಮಾತ್ರ ಆಡುತ್ತಿದ್ದಾರೆ. ಭಾರತವನ್ನು 2024 ರ ಟಿ20 ವಿಶ್ವಕಪ್ ಮತ್ತು 2025 ರ ಚಾಂಪಿಯನ್ಸ್ ಟ್ರೋಫಿಯ ವಿಜೇತರನ್ನಾಗಿ ಮಾಡಿದ ಹಿಟ್‌ಮ್ಯಾನ್, 2023 ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿನ ಸೋಲನ್ನು ಇನ್ನೂ ಮರೆಯಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಇದೇ ಸಂದರ್ಭದಲ್ಲಿ, 2027 ರಲ್ಲಿ ನಡೆಯಲಿರುವ 50 ಓವರ್‌ಗಳ ವಿಶ್ವಕಪ್ ಗೆಲ್ಲುವುದು ನನ್ನ ಮುಂದಿನ ಪ್ರಮುಖ ಗುರಿ ಎಂದು ರೋಹಿತ್ ಸ್ಪಷ್ಟಪಡಿಸಿದ್ದಾರೆ.

ವಿಶ್ವಕಪ್ ಗೆದ್ದಾಗ ಸಿಗುವ ಸಂತೋಷವೇ ಬೇರೆ

ಜಿಯೋಸ್ಟಾರ್‌ಗೆ ನೀಡಿದ ಸಂದರ್ಶನದಲ್ಲಿ ರೋಹಿತ್, ‘ವಿಶ್ವಕಪ್ ಗೆದ್ದ ಅನುಭವ ಅವರ್ಣನೀಯ. 2007 ರಲ್ಲಿ 20 ವರ್ಷದ ಹುಡುಗನಾಗಿದ್ದಾಗ ಟಿ20 ವಿಶ್ವಕಪ್ ಗೆದ್ದ ದಿನಗಳನ್ನು ಮತ್ತು 2013 ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆಲುವಿನ ದಿನಗಳನ್ನು ಮರೆಯಲು ಸಾಧ್ಯವಿಲ್ಲ. ಸುಮಾರು 11 ವರ್ಷಗಳ ದೀರ್ಘ ಕಾಯುವಿಕೆಯ ನಂತರ 2024 ರಲ್ಲಿ ಟಿ20 ವಿಶ್ವಕಪ್ ಗೆದ್ದಾಗ, ಆ ಗೆಲುವು ಎಷ್ಟು ಮುಖ್ಯ ಎಂಬುದನ್ನು ಅರಿತುಕೊಂಡೆ. ಏಕದಿನ ವಿಶ್ವಕಪ್ ರೂಪದಲ್ಲಿ ಆ ಭಾವನೆಯನ್ನು ಮತ್ತೆ ಪಡೆಯಲು ನಾನು ಉತ್ಸುಕನಾಗಿದ್ದೇನೆ.

ಸಿಕ್ಸರ್‌ಗಳ ದ್ವಿಶತಕ; ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ರೋಹಿತ್ ಶರ್ಮಾ

ಪ್ರಸ್ತುತದಲ್ಲಿರುವುದೇ ನನ್ನ ತಂತ್ರ

ಇನ್ನು ಮುಂದೆ ಅಕ್ಟೋಬರ್ 2027 ರ ಬಗ್ಗೆ ಹೆಚ್ಚು ಯೋಚಿಸುವುದರಲ್ಲಿ ಅರ್ಥವಿಲ್ಲ. ಪ್ರತಿ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುವುದು, ಫಿಟ್ನೆಸ್ ಕಾಯ್ದುಕೊಳ್ಳುವುದು ಮತ್ತು ಪ್ರತಿದಿನ ಕಠಿಣ ಪರಿಶ್ರಮ ಪಡುವುದು ನನ್ನ ಮುಖ್ಯ ಕೆಲಸ. ಮುಂಬರುವ ಪ್ರತಿಯೊಂದು ಸರಣಿಯಲ್ಲಿ ತಂಡಕ್ಕೆ ಅಗತ್ಯವಾದ ಬೆಂಬಲವನ್ನು ನೀಡುವುದು ಗುರಿಯಾಗಿದೆ ಮತ್ತು ಹಂತ ಹಂತವಾಗಿ ಮುಂದುವರಿಯುವುದು ನನ್ನ ವೃತ್ತಿಜೀವನಕ್ಕೆ ತುಂಬಾ ಉಪಯುಕ್ತವಾಗಿದೆ ಎಂದು ರೋಹಿತ್ ಹೇಳಿಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More