VIDEO: ಸುಲಭ ಕ್ಯಾಚ್ ಹಿಡಿಯದ ಸುಂದರ್: ಅಶ್ಲೀಲವಾಗಿ ಬೈದ ರೋಹಿತ್ ಶರ್ಮಾ

Rohit Sharma-Washington Sundar Video: 43ನೇ ಓವರ್‌ನಲ್ಲಿ ಶಾರ್ದೂಲ್ ಠಾಕೂರ್ ಎಸೆತವನ್ನು ಮೆಹದಿ ಹಸನ್ ಥರ್ಡ್​ ಮ್ಯಾನ್​ನತ್ತ ಬಾರಿಸಿದರು. ಚೆಂಡು ಗಾಳಿಯಲ್ಲಿದ್ದ ಕಾರಣ ಟೀಮ್ ಇಂಡಿಯಾ ಆಟಗಾರರು ಈ ಕ್ಯಾಚ್​ನೊಂದಿಗೆ ಪಂದ್ಯ ಗೆಲ್ಲಲಿದ್ದೇವೆ ಎಂದು ಭಾವಿಸಿದ್ದರು.

VIDEO: ಸುಲಭ ಕ್ಯಾಚ್ ಹಿಡಿಯದ ಸುಂದರ್: ಅಶ್ಲೀಲವಾಗಿ ಬೈದ ರೋಹಿತ್ ಶರ್ಮಾ
Rohit-Sundar
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 04, 2022 | 9:32 PM

Bangladesh vs India, 1st ODI: ಢಾಕಾದ ಶೇರ್ ಈ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ವಿರುದ್ಧ ಬಾಂಗ್ಲಾದೇಶ್ (Bangladesh) ತಂಡವು ರೋಚಕ ಗೆಲುವು ದಾಖಲಿಸಿತ್ತು. ಟೀಮ್ ಇಂಡಿಯಾ ನೀಡಿದ 187 ರನ್​ಗಳ ಸುಲಭ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಮೊದಲ ಓವರ್​ನ ಮೊದಲ ಎಸೆತದಲ್ಲೇ ನಜ್ಮುಲ್ (0) ವಿಕೆಟ್ ಪಡೆಯುವ ಮೂಲಕ ದೀಪಕ್ ಚಹರ್ (Deepak Chahar) ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಅನಾಮುಲ್ ಹಕ್ (14) ಕೂಡ ಮೊಹಮ್ಮದ್ ಸಿರಾಜ್ (Mohammed Siraj)  ಎಸೆತದಲ್ಲಿ ಔಟಾದರು.

ಈ ಹಂತದಲ್ಲಿ ಜೊತೆಗೂಡಿದ ಲಿಟನ್ ದಾಸ್ ಹಾಗೂ ಶಕೀಬ್ ಅಲ್ ಹಸನ್ ಅತ್ಯುತ್ತಮ ಜೊತೆಯಾಟವಾಡಿದರು. 3ನೇ ವಿಕೆಟ್​ಗೆ 48 ರನ್​ಗಳ ಜೊತೆಯಾಟವಾಡುವ ಮೂಲಕ ಈ ಜೋಡಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ವೇಳೆ 41 ರನ್​ಗಳಿಸಿದ್ದ ಲಿಟನ್ ದಾಸ್ ವಾಷಿಂಗ್ಟನ್ ಸುಂದರ್ ಎಸೆತದಲ್ಲಿ ಕ್ಯಾಚ್ ನೀಡಿದರು.

ಇದನ್ನೂ ಓದಿ
Image
IPL 2023: RCB ಈ ನಾಲ್ವರು ಆಟಗಾರರ ಖರೀದಿಗೆ ಮುಂದಾಗಬಹುದು..!
Image
IPL 2023: ಈ ಬಾರಿಯ ಐಪಿಎಲ್​ನಿಂದ 5 ಆಟಗಾರರು ಔಟ್..!
Image
IPL 2023 Mini Auction: ಐಪಿಎಲ್ ಮಿನಿ ಹರಾಜು ಲೀಸ್ಟ್ ಔಟ್: ಯಾವ ದೇಶದಿಂದ ಎಷ್ಟು ಆಟಗಾರರು?
Image
New Record: ಅತ್ಯಧಿಕ ಟೆಸ್ಟ್ ಶತಕ: ಕೊಹ್ಲಿ, ರೂಟ್​ರನ್ನು ಹಿಂದಿಕ್ಕಿದ ಸ್ಟೀವ್ ಸ್ಮಿತ್

ಇದರ ಬೆನ್ನಲ್ಲೇ ವಾಷಿಂಗ್ಟನ್ ಸುಂದರ್ ಎಸೆದ 24ನೇ ಓವರ್​ನ 3ನೇ ಎಸೆತವನ್ನು ಶಕೀಬ್ ಡೀಪ್ ಕವರ್​ನತ್ತ ಭರ್ಜರಿಯಾಗಿ ಬಾರಿಸಿದ್ದರು. ಚೆಂಡು ಗಾಳಿಯಲ್ಲಿ ಹಾರುತ್ತಿದ್ದಂತೆ ಇತ್ತ ಫ್ರಂಟ್ ಫೀಲ್ಡಿಂಗ್​ನಲ್ಲಿದ್ದ ವಿರಾಟ್ ಕೊಹ್ಲಿ ಬಲಭಾಗದತ್ತ ಜಿಗಿದು ಅತ್ಯಾದ್ಭುತವಾಗಿ ಕ್ಯಾಚ್ ಹಿಡಿದರು.

ಈ ಯಶಸ್ಸಿನೊಂದಿಗೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಟೀಮ್ ಇಂಡಿಯಾ ಬೌಲರ್​ಗಳು ಉತ್ತಮ ದಾಳಿ ಸಂಘಿಟಿಸಿದರು. ಮೊಹಮ್ಮದ್ ಸಿರಾಜ್ 10 ಓವರ್​ಗಳಲ್ಲಿ ಕೇವಲ 32 ರನ್​ ನೀಡಿ 3 ವಿಕೆಟ್ ಕಬಳಿಸಿದೆ, ಕುಲ್ದೀಪ್ ಸೇನ್ ಕೂಡ 2 ವಿಕೆಟ್ ಪಡೆದರು. ಪರಿಣಾಮ ಬಾಂಗ್ಲಾದೇಶ್ ತಂಡವು 136 ರನ್​ಗಳಿಗೆ 9 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿತ್ತು.ಈ ಹಂತದಲ್ಲಿ ಕೆಎಲ್ ರಾಹುಲ್ ಮೆಹದಿ ಹಸನ್ ಅವರ ಕ್ಯಾಚ್​ವೊಂದನ್ನು ಕೈಚೆಲ್ಲಿದ್ದರು. ತುಸು ಕಠಿಣವಾಗಿದ್ದ ಕ್ಯಾಚ್​ ಅನ್ನು ಹಿಡಿಯುವ ಯತ್ನದಲ್ಲಿ ರಾಹುಲ್ ವಿಫಲರಾಗಿದ್ದರು. ಇದಾದ ಬಳಿಕ ಮತ್ತೊಂದು ಅವಕಾಶ ಟೀಮ್ ಇಂಡಿಯಾ ಮುಂದಿತ್ತು.

ಇನಿಂಗ್ಸ್‌ನ 43ನೇ ಓವರ್‌ನಲ್ಲಿ ಶಾರ್ದೂಲ್ ಠಾಕೂರ್ ಎಸೆತವನ್ನು ಮೆಹದಿ ಹಸನ್ ಥರ್ಡ್​ ಮ್ಯಾನ್​ನತ್ತ ಬಾರಿಸಿದರು. ಚೆಂಡು ಗಾಳಿಯಲ್ಲಿದ್ದ ಕಾರಣ ಟೀಮ್ ಇಂಡಿಯಾ ಆಟಗಾರರು ಈ ಕ್ಯಾಚ್​ನೊಂದಿಗೆ ಪಂದ್ಯ ಗೆಲ್ಲಲಿದ್ದೇವೆ ಎಂದು ಭಾವಿಸಿದ್ದರು. ಆದರೆ ಅಲ್ಲೇ ಫೀಲ್ಡಿಂಗ್​ನಲ್ಲಿದ್ದ ವಾಷಿಂಗ್ಟನ್ ಸುಂದರ್ ಕ್ಯಾಚ್ ಹಿಡಿಯುವ ಪ್ರಯತ್ನವನ್ನೇ ಮಾಡಿಲ್ಲ ಎಂಬುದೇ ಅಚ್ಚರಿ. ಚೆಂಡು ಗಾಳಿಯಲ್ಲಿದ್ದರೂ ಓಡಿ ಬಂದು ಹಿಡಿಯುವ ಪ್ರಯತ್ನ ಮಾಡದ ಸುಂದರ್, ನಿಧಾನವಾಗಿ ನಡೆದುಕೊಂಡು ಬಂದರು.

ಇತ್ತ ಕ್ಯಾಚ್ ನಿರೀಕ್ಷೆಯಲ್ಲಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕೋಪ ನೆತ್ತಿಗೇರಿತು. ಅಲ್ಲದೆ ಕೋಪದಲ್ಲೇ ವಾಷಿಂಗ್ಟನ್ ಸುಂದರ್ ಅವರನ್ನು ಅಶ್ಲೀಲ ಪದದೊಂದಿಗೆ ಮೈದಾನದಲ್ಲೇ ನಿಂದಿಸಿದರು. ಇದೀಗ ರೋಹಿತ್ ಶರ್ಮಾ ಅವರ ಈ ಬೈಗುಳದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ವಾಷಿಂಗ್ಟನ್ ಸುಂದರ್ ನೀಡಿದ ಜೀವದಾನವನ್ನು ಬಳಸಿಕೊಂಡ ಮೆಹದಿ ಹಸನ್ ಅಂತಿಮವಾಗಿ 38 ರನ್​ ಕಲೆಹಾಕಿ ಬಾಂಗ್ಲಾದೇಶ್ ತಂಡಕ್ಕೆ 1 ರನ್​ಗಳ ರೋಚಕ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯಲ್ಲಿ ಬಾಂಗ್ಲಾದೇಶ್ ತಂಡವು 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.

ಬಾಂಗ್ಲಾದೇಶ್ ಪ್ಲೇಯಿಂಗ್ ಇಲೆವೆನ್: ಲಿಟನ್ ದಾಸ್ (ನಾಯಕ) , ಅನಾಮುಲ್ ಹಕ್ , ನಜ್ಮುಲ್ ಹೊಸೈನ್ ಶಾಂಟೋ , ಶಕೀಬ್ ಅಲ್ ಹಸನ್ , ಮುಶ್ಫಿಕರ್ ರಹೀಮ್ ( ವಿಕೆಟ್ ಕೀಪರ್ ) , ಮಹ್ಮುದುಲ್ಲಾ , ಅಫೀಫ್ ಹೊಸೈನ್ , ಮೆಹಿದಿ ಹಸನ್ ಮಿರಾಝ್ , ಮುಸ್ತಫಿಜುರ್ ರೆಹಮಾನ್ , ಹಸನ್ ಮಹಮೂದ್ , ಇಬಾದತ್ ಹೊಸೇನ್.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ) , ಶಿಖರ್ ಧವನ್ , ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ , ಕೆಎಲ್ ರಾಹುಲ್ (ವಿಕೆಟ್ ಕೀಪರ್ ) , ವಾಷಿಂಗ್ಟನ್ ಸುಂದರ್ , ಶಹಬಾಜ್ ಅಹ್ಮದ್ , ದೀಪಕ್ ಚಹಾರ್ , ಶಾರ್ದೂಲ್ ಠಾಕೂರ್ , ಮೊಹಮ್ಮದ್ ಸಿರಾಜ್ , ಕುಲದೀಪ್ ಸೇನ್

Published On - 8:53 pm, Sun, 4 December 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ