AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 5th Test: ಈವರೆಗೆ ಯಾರೂ ಮಾಡಿಲ್ಲ: ಐದನೇ ಟೆಸ್ಟ್‌ನಲ್ಲಿ ದೊಡ್ಡ ಮೈಲಿಗಲ್ಲು ಸೃಷ್ಟಿಸಿದ ರೋಹಿತ್ ಶರ್ಮಾ

Rohit Sharma Create Record: ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್​ನಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್‌ಗೆ ಬರುವ ಮೊದಲು, ಮೊದಲ ದಿನದಲ್ಲಿ ಫೀಲ್ಡಿಂಗ್ ಮಾಡುವಾಗ ಬೃಹತ್ ದಾಖಲೆಯನ್ನು ನಿರ್ಮಿಸಿದ್ದಾರೆ. ಫೀಲ್ಡರ್ ಆಗಿ ಅನನ್ಯ ಸಾಧನೆಯನ್ನು ಮಾಡಿದ ಇತಿಹಾಸದಲ್ಲಿ ಮೊದಲ ಆಟಗಾರನಾದರು.

IND vs ENG 5th Test: ಈವರೆಗೆ ಯಾರೂ ಮಾಡಿಲ್ಲ: ಐದನೇ ಟೆಸ್ಟ್‌ನಲ್ಲಿ ದೊಡ್ಡ ಮೈಲಿಗಲ್ಲು ಸೃಷ್ಟಿಸಿದ ರೋಹಿತ್ ಶರ್ಮಾ
Rohit Sharma
Vinay Bhat
|

Updated on: Mar 08, 2024 | 7:17 AM

Share

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ನ ಮೊದಲ ದಿನದ ಆಟದಲ್ಲಿ ಭಾರತ (India vs England) ಸಂಪೂರ್ಣ ಮೇಲುಗೈ ಸಾಧಿಸಿದೆ. ಇಂಗ್ಲೆಂಡ್ ಅನ್ನು ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಶುರುಮಾಡಿರುವ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದುಕೊಂಡಿದೆ. ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ ಸಿಡಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಬ್ಯಾಟಿಂಗ್‌ಗೆ ಬರುವ ಮೊದಲು, ಭಾರತೀಯ ನಾಯಕನು ಮೊದಲ ದಿನದಲ್ಲಿ ಫೀಲ್ಡಿಂಗ್ ಮಾಡುವಾಗ ಬೃಹತ್ ದಾಖಲೆಯನ್ನು ನಿರ್ಮಿಸಿದ್ದಾರೆ. ಫೀಲ್ಡರ್ ಆಗಿ ಅನನ್ಯ ಸಾಧನೆಯನ್ನು ಮಾಡಿದ ಇತಿಹಾಸದಲ್ಲಿ ಮೊದಲ ಆಟಗಾರನಾದರು.

ರವಿಚಂದ್ರನ್ ಅಶ್ವಿನ್ ಎಸೆತದಲ್ಲಿ ಮಾರ್ಕ್ ವುಡ್ ಅವರ ಕ್ಯಾಚ್ ಅನ್ನು ಸ್ಲಿಪ್‌ನಲ್ಲಿ ರೋಹಿತ್ ಶರ್ಮಾ ಅದ್ಭುತವಾಗಿ ಹಿಡಿದರು. ಇದು ಟೆಸ್ಟ್ ಪಂದ್ಯಗಳಲ್ಲಿ ಅವರ 60ನೇ ಕ್ಯಾಚ್ ಆಗಿತ್ತು. ಈ ಮೂಲಕ ಭಾರತೀಯ ನಾಯಕ ಆಟದ ಮೂರು ಸ್ವರೂಪಗಳಲ್ಲಿ 60 ಅಥವಾ ಹೆಚ್ಚಿನ ಕ್ಯಾಚ್‌ಗಳನ್ನು ತೆಗೆದುಕೊಂಡ ಇತಿಹಾಸದ ಮೊದಲ ಔಟ್‌ಫೀಲ್ಡ್ ಆಟಗಾರನಾದರು. ಟೆಸ್ಟ್ ಮಾದರಿಯಲ್ಲಿ 60 ಕ್ಯಾಚ್‌ಗಳ ಹೊರತಾಗಿ, ರೋಹಿತ್ ಶರ್ಮಾ ಏಕದಿನದಲ್ಲಿ 93 ಮತ್ತು ಟಿ20I ನಲ್ಲಿ 60 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.

ದೀಪ್ತಿ ಹೋರಾಟ ವ್ಯರ್ಥ; 42 ರನ್​ಗಳಿಂದ ಗೆದ್ದ ಮುಂಬೈ ಇಂಡಿಯನ್ಸ್

ರೋಹಿತ್ ಶರ್ಮಾ ಬ್ಯಾಟ್‌ನೊಂದಿಗೆ ಕೂಡ ನೂತನ ಸಾಧನೆ ಮಾಡಿದ್ದಾರೆ. 1 ನೇ ದಿನದಾಟದ ಅಂತ್ಯಕ್ಕೆ 52 ರನ್ ಗಳಿಸಿ ಔಟಾಗದೆ ಉಳಿದ ಹಿಟ್​ಮ್ಯಾನ್ 2 ಸಿಕ್ಸರ್‌ಗಳನ್ನು ಸಿಡಿಸಿದರು. ಈ ಮೂಲಕ ಅವರು ಇತಿಹಾಸದಲ್ಲಿ 50 ಸಿಕ್ಸರ್‌ಗಳನ್ನು ದಾಟಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡರು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ ಬೆನ್ ಸ್ಟೋಕ್ಸ್ ನಂತರ ಈ ಸಾಧನೆ ಮಾಡಿದ ಎರಡನೇ ಆಟಗಾರನಾದರು.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಬ್ಯಾಟರ್‌ಗಳ ಪಟ್ಟಿ:

  • ಬೆನ್ ಸ್ಟೋಕ್ಸ್ (ಇಂಗ್ಲೆಂಡ್) -78
  • ರೋಹಿತ್ ಶರ್ಮಾ (ಭಾರತ)- 51
  • ರಿಷಭ್ ಪಂತ್ (ಭಾರತ)- 38
  • ಯಶಸ್ವಿ ಜೈಸ್ವಾಲ್ (ಭಾರತ)- 29
  • ಜಾನಿ ಬೈರ್‌ಸ್ಟೋವ್ (ಭಾರತ)- 29

ಐದನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ರೋಹಿತ್ ಶರ್ಮಾ ಮೊದಲ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ ಅವರೊಂದಿಗೆ 104 ರನ್ ಜೊತೆಯಾಟವಾಡಿದರು. ಇವರಿಬ್ಬರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಜೋಡಿಯಾಗಿ 980 ರನ್ ಗಳಿಸಿದ್ದಾರೆ. ಈ ಮೂಲಕ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಭಾರತೀಯ ಬ್ಯಾಟಿಂಗ್ ಜೋಡಿ ಎನಿಸಿಕೊಂಡಿದ್ದಾರೆ.

5ನೇ ಟೆಸ್ಟ್​ ಮೊದಲ ಇನ್ನಿಂಗ್ಸ್​ನಲ್ಲೇ ಹಲವು ದಾಖಲೆ ಬರೆದ ಜೈಸ್ವಾಲ್..! ಪಟ್ಟಿ ಇಲ್ಲಿದೆ

WTC ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಭಾರತೀಯ ಜೊತೆಯಾಟದ ಪಟ್ಟಿ ಇಲ್ಲಿವೆ:

  • 980 – ರೋಹಿತ್ ಶರ್ಮಾ / ಯಶಸ್ವಿ ಜೈಸ್ವಾಲ್
  • 876 – ವಿರಾಟ್ ಕೊಹ್ಲಿ/ಅಜಿಂಕ್ಯ ರಹಾನೆ
  • 816 – ರೋಹಿತ್ ಶರ್ಮಾ/ಚೇತೇಶ್ವರ ಪೂಜಾರ
  • 753 – ವಿರಾಟ್ ಕೊಹ್ಲಿ/ರವೀಂದ್ರ ಜಡೇಜಾ
  • 751 – ವಿರಾಟ್ ಕೊಹ್ಲಿ/ಚೇತೇಶ್ವರ ಪೂಜಾರ
  • 710 – ರೋಹಿತ್ ಶರ್ಮಾ/ಶುಭ್​ಮನ್ ಗಿಲ್

ಮೊದಲ ದಿನದಾಟದಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಅನ್ನು 218 ಕ್ಕೆ ಆಲೌಟ್ ಮಾಡಿತು. ಕುಲ್ದೀಪ್ ಯಾದವ್ ಐದು ವಿಕೆಟ್ ಕಿತ್ತು ಗಮನ ಸೆಳೆದರು. 100ನೇ ಟೆಸ್ಟ್ ಆಡುತ್ತಿರುವ ರವಿಚಂದ್ರನ್ ಅಶ್ವಿನ್ ಕೂಡ 4 ವಿಕೆಟ್ ಪಡೆದರು. ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಶರ್ಮಾ ಅವರ ಅವಳಿ ಅರ್ಧಶತಕಗಳ ಮೂಲಕ ಭಾರತ 135/1 ರಲ್ಲಿ 1 ನೇ ದಿನದಾಟವನ್ನು ಕೊನೆಗೊಳಿಸಿತು. ಜೈಸ್ವಾಲ್ ಔಟಾದರೆ, ರೋಹಿತ್ ಮತ್ತು ಶುಭ್​ಮನ್ ಗಿಲ್ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ