
ಐಪಿಎಲ್ 2025 (IPL 2025) ರ ಎಲಿಮಿನೇಟರ್ ಪಂದ್ಯ ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ (GT vs MI) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಆರಂಭದಲ್ಲೇ ಸಿಕ್ಕಿದ ಎರಡು ಜೀವದಾನಗಳನ್ನು ಸದುಪಯೋಗಪಡಿಸಿಕೊಂಡು ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಅಲ್ಲದೆ ಇದೇ ಪಂದ್ಯದಲ್ಲಿ ದಾಖಲೆಯೊಂದನ್ನು ನಿರ್ಮಿಸಿದ್ದು, ಐಪಿಎಲ್‌ನಲ್ಲಿ ಪ್ರಸ್ತುತ ಸಕ್ರಿಯ ಆಟಗಾರರಲ್ಲಿ ಬೇರೆ ಯಾವ ಆಟಗಾರನೂ ಮಾಡಲಾಗದಂತಹ ಸಾಧನೆಯನ್ನು ರೋಹಿತ್ ಶರ್ಮಾ ಮಾಡಿದ್ದಾರೆ.
ಗುಜರಾತ್ ವಿರುದ್ಧದ ಪಂದ್ಯದಲ್ಲಿ 2 ಸಿಕ್ಸರ್‌ಗಳನ್ನು ಬಾರಿಸಿದ ಹಿಟ್‌ಮ್ಯಾನ್ ಐಪಿಎಲ್‌ನಲ್ಲಿ 300 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ ಮೊದಲ ಸಕ್ರಿಯ ಆಟಗಾರ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ವಿರಾಟ್ ಕೊಹ್ಲಿ 291 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಧೋನಿ (264) ಮತ್ತು ಆಂಡ್ರೆ ರಸೆಲ್ (223) ಕ್ರಮವಾಗಿ ಮೂರನೇ ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ. ಗುಜರಾತ್ ವಿರುದ್ಧದ ಪಂದ್ಯದಲ್ಲಿ ಎರಡು ಸಿಕ್ಸರ್‌ಗಳನ್ನು ಬಾರಿಸಿದ ತಕ್ಷಣ ರೋಹಿತ್ ಐಪಿಎಲ್‌ನಲ್ಲಿ 300 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರು. ಈ ಪಂದ್ಯದಲ್ಲಿ, ರೋಹಿತ್ ಶರ್ಮಾ 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದು, ಉತ್ತಮ ಫಾರ್ಮ್‌ನಲ್ಲಿರುವಂತೆ ಕಾಣುತ್ತಿದ್ದಾರೆ.
ಮತ್ತೊಂದೆಡೆ, ಒಟ್ಟಾರೆ ದಾಖಲೆಯ ಬಗ್ಗೆ ಮಾತನಾಡಿದರೆ, ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಅವರು ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ 357 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಇದುವರೆಗೆ 300 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ರಾಜ್ ಬಾವಾ, ಮಿಚೆಲ್ ಸ್ಯಾಂಟ್ನರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ರಿಚರ್ಡ್ ಗ್ಲೀಸನ್.
ಇಂಪ್ಯಾಕ್ಟ್ ಪ್ಲೇಯರ್: ಕೃಷ್ಣನ್ ಶ್ರೀಜಿತ್, ರಘು ಶರ್ಮಾ, ರಾಬಿನ್ ಮಿಂಜ್, ಅಶ್ವಿನಿ ಕುಮಾರ್, ರೀಸ್ ಟೋಪ್ಲಿ.
ಗುಜರಾತ್ ಟೈಟನ್ಸ್: ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಶಾರುಖ್ ಖಾನ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಜೆರಾಲ್ಡ್ ಕೋಟ್ಜಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಇಂಪ್ಯಾಕ್ಟ್ ಪ್ಲೇಯರ್: ಶೆರ್ಫೇನ್ ರುದರ್‌ಫೋರ್ಡ್, ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ಜಯಂತ್ ಯಾದವ್, ಅರ್ಷದ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:55 pm, Fri, 30 May 25