‘ಯುವರಾಜ್ ನಂತರ ಯಾರೂ ಆ ಸ್ಥಾನವನ್ನು ತುಂಬಿಲ್ಲ’; ವಿಶ್ವಕಪ್‌ಗೂ ಮುನ್ನ ರೋಹಿತ್ ಶಾಕಿಂಗ್ ಹೇಳಿಕೆ

Rohit Sharma: ವಿಶ್ವಕಪ್ ಹತ್ತಿರವಾಗುತ್ತಿದ್ದಂತೆ ಟೀಂ ಇಂಡಿಯಾದ ಟೆನ್ಷನ್ ಕೂಡ ದುಪ್ಪಟ್ಟು ಆಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಬಹಳ ವರ್ಷಗಳಿಂದ ತಂಡವನ್ನು ಕಾಡುತ್ತಿರುವ ನಾಲ್ಕನೇ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯ. ಕೆಲವು ವರ್ಷಗಳಿಂದ ಈ ಸ್ಥಾನಕ್ಕೆ ಒಬ್ಬ ಖಾಯಂ ಆಟಗಾರರನನ್ನು ಕಂಡುಕೊಳ್ಳಲು ಟೀಂ ಇಂಡಿಯಾಕ್ಕೆ ಸಾಧ್ಯವಾಗಿಲ್ಲ.

‘ಯುವರಾಜ್ ನಂತರ ಯಾರೂ ಆ ಸ್ಥಾನವನ್ನು ತುಂಬಿಲ್ಲ’; ವಿಶ್ವಕಪ್‌ಗೂ ಮುನ್ನ ರೋಹಿತ್ ಶಾಕಿಂಗ್ ಹೇಳಿಕೆ
ರೋಹಿತ್ ಶರ್ಮಾ
Follow us
ಪೃಥ್ವಿಶಂಕರ
|

Updated on: Aug 11, 2023 | 7:25 AM

ಕೆಲವೇ ತಿಂಗಳ ಅಂತರದಲ್ಲಿ ಕ್ರಿಕೆಟ್ ಲೋಕದಲ್ಲಿ ಎರಡು ಪ್ರಮುಖ ಈವೆಂಟ್​ಗಳು ನಡೆಯಲ್ಲಿವೆ. ಅದರಲ್ಲಿ ಮೊದಲನೇಯದ್ದು, ಇದೇ ಆಗಸ್ಟ್ 30 ರಿಂದ ನಡೆಯಲ್ಲಿರುವ ಏಷ್ಯಾಕಪ್ (Asia Cup 2023) ಆಗಿದ್ದರೆ, ಎರಡನೇಯದ್ದು, ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್ (ODI World Cup 2023). ಹೀಗಾಗಿ ಈ ಎರಡೂ ಪ್ರಮುಖ ಸ್ಪರ್ಧೆಗಳ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಪೈಪೋಟಿ ಹತ್ತಿರವಾಗುತ್ತಿದ್ದಂತೆ ಟೀಂ ಇಂಡಿಯಾದ (Team India) ಟೆನ್ಷನ್ ಕೂಡ ದುಪ್ಪಟ್ಟು ಆಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಬಹಳ ವರ್ಷಗಳಿಂದ ತಂಡವನ್ನು ಕಾಡುತ್ತಿರುವ ನಾಲ್ಕನೇ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯ. ಕೆಲವು ವರ್ಷಗಳಿಂದ ಈ ಸ್ಥಾನಕ್ಕೆ ಒಬ್ಬ ಖಾಯಂ ಆಟಗಾರರನನ್ನು ಕಂಡುಕೊಳ್ಳಲು ಟೀಂ ಇಂಡಿಯಾಕ್ಕೆ ಸಾಧ್ಯವಾಗಿಲ್ಲ. ಅಗ್ರ ಕ್ರಮಾಂಕ ವೈಫಲ್ಯ ಸಾಧಿಸಿದರೆ, ತಂಡದ ಇನ್ನಿಂಗ್ಸ್ ನಿಭಾಯಿಸುವ ಕೆಲಸ ನಾಲ್ಕನೇ ಕ್ರಮಾಂಕ ಅಥವಾ ಮಧ್ಯಮ ಕ್ರಮಾಂಕದ್ದಾಗಿರುತ್ತದೆ. ಆದರೆ ಟೀಂ ಇಂಡಿಯಾದ ದೊಡ್ಡ ನ್ಯೂನತೆಯೆಂದರೆ, ಇದುವರೆಗೂ ತಂಡದಲ್ಲಿ ನಾಲ್ಕನೇ ಕ್ರಮಾಂಕವನ್ನು ತುಂಬುವ ಆಟಗಾರ ಇಲ್ಲದಿರುವುದು.

ಇದೀಗ ಏಷ್ಯಾಕಪ್ ಹಾಗೂ ವಿಶ್ವಕಪ್ ಸಮೀಪಿಸುತ್ತಿರುವಂತೆ ತಂಡಕ್ಕೆ ಈ ಬಗ್ಗೆ ಚಿಂತೆ ಶುರುವಾಗಿದ್ದು, ನಾಯಕ ರೋಹಿತ್ ಶರ್ಮಾ ಕೂಡ ನಾಲ್ಕನೇ ಕ್ರಮಾಂಕದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಲವು ಆಟಗಾರರು ಟೀಂ ಇಂಡಿಯಾ ಪರ ಆಡಿದ್ದಾರೆ. ಆದರೆ ನಾಲ್ಕನೇ ಕ್ರಮಾಂಕದಲ್ಲಿ ಟೀಂ ಇಂಡಿಯಾಕ್ಕೆ ಬಲ ನೀಡಬಲ್ಲ ಬ್ಯಾಟ್ಸ್‌ಮನ್‌ಗಾಗಿ ಹುಡುಕಾಟ ಇನ್ನೂ ನಿಂತಿಲ್ಲ. ನಾಲ್ಕನೇ ಕ್ರಮಾಂಕದಲ್ಲಿ ಯಾರು ಆಡಬೇಕು ಎಂಬುದು ನಮ್ಮ ಮುಂದಿರುವ ದೊಡ್ಡ ಸವಾಲು ಎಂದು ರೋಹಿತ್ ಹೇಳಿದ್ದಾರೆ.

ರೋಹಿತ್ ಶರ್ಮಾ ಸೇರಿದಂತೆ ಈ 7 ಆಟಗಾರರಿಗೆ ಇದು ಕೊನೆಯ ವಿಶ್ವಕಪ್!

4ನೇ ಕ್ರಮಾಂಕದ ಭೂತ ಕಾಡುತ್ತಿದೆ

ಹಲವು ವರ್ಷಗಳಿಂದ ಟೀಂ ಇಂಡಿಯಾಲಕ್ಕೆ 4ನೇ ಕ್ರಮಾಂಕದ ಭೂತ ಕಾಡುತ್ತಿದೆ. ಆದರೆ ಆ ನಾಲ್ಕನೇ ಸ್ಥಾನಕ್ಕೆ ನ್ಯಾಯ ಒದಗಿಸುವ ಬ್ಯಾಟ್ಸ್​ಮನ್ ಟೀಂ ಇಂಡಿಯಾಗೆ ಇನ್ನು ಸಿಕ್ಕಿಲ್ಲ. “ಯುವರಾಜ್ ಸಿಂಗ್ ನಂತರ, ಯಾವುದೇ ಬ್ಯಾಟ್ಸ್‌ಮನ್​ಗೆ ನಾಲ್ಕನೇ ಕ್ರಮಾಂಕದಲ್ಲಿ ತನ್ನನ್ನು ತಾನು ಸಾಭೀತುಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ರೋಹಿತ್ ಹೇಳಿದ್ದಾರೆ

ರೋಹಿತ್ ಶರ್ಮಾ ಹೇಳಿದ್ದೇನು?

ನಾಲ್ಕನೇ ಕ್ರಮಾಂಕವು ಕೆಲವು ಸಮಯದಿಂದ ನಮಗೆ ತಲೆನೋವಾಗಿದೆ. ಯುವರಾಜ್ ಸಿಂಗ್ ನಂತರ ಯಾವುದೇ ಬ್ಯಾಟ್ಸ್‌ಮನ್​ಗೆ ಆ ಸ್ಥಾನವನ್ನು ತುಂಬಲು ಸಾಧ್ಯವಾಗುತ್ತಿಲ್ಲ. ಆದರೆ ಶ್ರೇಯಸ್ ಅಯ್ಯರ್ ನಾಲ್ಕನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಅವರ ಅಂಕಿಅಂಶಗಳು ಉತ್ತಮವಾಗಿವೆ” ಎಂದು ರೋಹಿತ್ ಹೇಳಿದರು.

ಶ್ರೇಯಸ್ ಆಗಾಗ ಟೀಂ ಇಂಡಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ದಾರೆ. ಆರಂಭಿಕ ಜೋಡಿ ವಿಫಲವಾದ ನಂತರ, ಒನ್-ಡೌನ್ ಮತ್ತು ನಾಲ್ಕನೇ ಸ್ಥಾನದಲ್ಲಿ ಆಡುವ ಬ್ಯಾಟ್ಸ್‌ಮನ್‌ನ ಮೇಲೆ ತಂಡದ ಇನ್ನಿಂಗ್ಸ್ ಜವಬ್ದಾರಿ ನಿಂತಿರುತ್ತದೆ. ನಾಲ್ಕನೇ ಕ್ರಮಾಂಕದಲ್ಲಿ ಆಡುವಾಗ ಶ್ರೇಯಸ್ ಆಗಾಗ್ಗೆ ಪ್ರಬಲ ಪ್ರದರ್ಶನ ನೀಡುತ್ತಿದ್ದರು. ಆದರೆ ಶ್ರೇಯಸ್ ಬೆನ್ನುನೋವಿನಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ತಂಡದಿಂದ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯುಂಟು ಮಾಡಿದೆ. ಹೀಗಾಗಿ ಪ್ರಮುಖ ಪಂದ್ಯಾವಳಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ತನ್ನ ಈ ನ್ಯೂನತೆಯನ್ನು ಸರಿಪಡಿಸಿಕೊಳ್ಳಬೇಕಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್