T20 World Cup 2024: ಒಲ್ಲದ ಮನಸ್ಸಿನಲ್ಲಿ ಟಿ20 ವಿಶ್ವಕಪ್ ತಂಡಕ್ಕೆ ಹಾರ್ದಿಕ್ ಪಾಂಡ್ಯ ಆಯ್ಕೆ..!

T20 World Cup 2024: ಭಾರತ ಟಿ20 ವಿಶ್ವಕಪ್ ತಂಡದ ಉಪನಾಯಕತ್ವದ ಜವಬ್ದಾರಿ ಹೊತ್ತಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯರನ್ನು ತಂಡಕ್ಕೆ ಆಯ್ಕೆ ಮಾಡುವುದು ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್​ಗೆ ಸ್ವಲ್ಪವೂ ಇಷ್ಟವಿರಲಿಲ್ಲ ಎಂದು ವರದಿಯಾಗಿದೆ.

T20 World Cup 2024: ಒಲ್ಲದ ಮನಸ್ಸಿನಲ್ಲಿ ಟಿ20 ವಿಶ್ವಕಪ್ ತಂಡಕ್ಕೆ ಹಾರ್ದಿಕ್ ಪಾಂಡ್ಯ ಆಯ್ಕೆ..!
ಟೀಂ ಇಂಡಿಯಾ
Follow us
ಪೃಥ್ವಿಶಂಕರ
| Updated By: Digi Tech Desk

Updated on:May 16, 2024 | 12:32 PM

17ನೇ ಆವೃತ್ತಿಯ ಐಪಿಎಲ್ (IPL 2024) ಇನ್ನೇನೂ ಮುಕ್ತಾಯಕ್ಕೆ ಬಂದು ನಿಂತಿದೆ. ಲೀಗ್ ಹಂತ ಕೊನೆಗೊಳ್ಳಲು ಕೆಲವೇ ಕೆಲವು ಪಂದ್ಯಗಳು ಬಾಕಿ ಉಳಿದಿವೆ. ಇದಾದ ಬಳಿಕ ಪ್ಲೇಆಫ್‌ ಸುತ್ತು ಆರಂಭವಾಗಲಿದೆ. ಮೇ 26 ರಂದು ಫೈನಲ್ ಪಂದ್ಯ ನಡೆಯಲ್ಲಿದೆ. ಆ ಬಳಿಕ ಟಿ20 ವಿಶ್ವಕಪ್ (T20 World Cup 2024) ಆರಂಭವಾಗಲಿದೆ. ಇದಕ್ಕಾಗಿ ಟೀಂ ಇಂಡಿಯಾವನ್ನು (Team India) ಕೂಡ ಪ್ರಕಟಿಸಲಾಗಿದೆ. ಈ ಮಿನಿ ಸಮರಕ್ಕೆ ಭಾರತ ತಂಡ ಎರಡು ಗುಂಪುಗಳಾಗಿ ಅಮೆರಿಕಕ್ಕೆ ಹಾರಲಿದೆ. ಆದರೆ ಈ ನಡುವೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದ್ದು, ಭಾರತ ಟಿ20 ವಿಶ್ವಕಪ್ ತಂಡದ ಉಪನಾಯಕತ್ವದ ಜವಬ್ದಾರಿ ಹೊತ್ತಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯರನ್ನು (Hardik Pandya) ತಂಡಕ್ಕೆ ಆಯ್ಕೆ ಮಾಡುವುದು ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್​ಗೆ (Rohit Sharma and Ajit Agarkar) ಸ್ವಲ್ಪವೂ ಇಷ್ಟವಿರಲಿಲ್ಲ ಎಂದು ವರದಿಯಾಗಿದೆ.

ಒಲ್ಲದ ಮನಸಿನಲ್ಲಿ ಹಾರ್ದಿಕ್ ಆಯ್ಕೆ!

ವಾಸ್ತವವಾಗಿ 2024 ರ ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾದ 15 ಆಟಗಾರರ ಆಯ್ಕೆಯನ್ನು ಕಳೆದ ತಿಂಗಳ ಕೊನೆಯ ವಾರದಲ್ಲಿ ಮಾಡಲಾಯಿತು. ಅಹಮದಾಬಾದ್‌ನಲ್ಲಿ ತಂಡದ ಆಯ್ಕೆ ನಡೆದಿತ್ತು. ಆದರೆ ಆ ಸಮಯದಲ್ಲಿ ಹಾರ್ದಿಕ್ ಪಾಂಡ್ಯರನ್ನು ತಂಡಕ್ಕೆ ಆಯ್ಕೆ ಮಾಡುವುದು ಆಯ್ಕೆ ಸಮಿತಿಗೆ ಇಷ್ಟವಿರಲಿಲ್ಲ ಎಂದು ಕೆಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೆ ನಾಯಕ ರೋಹಿತ್ ಶರ್ಮಾಗೂ ಕೂಡ ಹಾರ್ದಿಕ್​ರನ್ನು ತಂಡಕ್ಕೆ ತೆಗೆದುಕೊಳ್ಳಲು ಇಷ್ಟವಿರಲಿಲ್ಲ ಎಂದು ವರದಿಯಲ್ಲಿ ಹೇಳಿದೆ. ಹಾಗಾದರೆ ಹಾರ್ದಿಕ್ ಪಾಂಡ್ಯ ಅವರನ್ನು ಏಕೆ ಆಯ್ಕೆ ಮಾಡಲಾಯಿತು ಎಂಬುದು ಈಗ ಪ್ರಶ್ನೆ?. ಅಲ್ಲದೆ ಪಾಂಡ್ಯರನ್ನು ತಂಡಕ್ಕೆ ಆಯ್ಕೆ ಮಾಡಿದ್ದು ಮಾತ್ರವಲ್ಲದೆ ಅವರನ್ನು ತಂಡದ ಉಪನಾಯಕರನ್ನಾಗಿಯೂ ಮಾಡಲಾಗಿದೆ. ಮುಖ್ಯ ಕೋಚ್ ಮತ್ತು ಮುಖ್ಯ ಆಯ್ಕೆಗಾರರ ​​ಇಚ್ಛೆಯಿಲ್ಲದೆ ಇದೆಲ್ಲ ಹೇಗೆ ಸಾಧ್ಯವಾಯಿತು? ಎಂಬುದು ಕಾಡುವ ಪ್ರಶ್ನೆಯಾಗಿದೆ.

IPL 2024: ‘ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ ಹಾರ್ದಿಕ್ ಪಾಂಡ್ಯ’; ಕನ್ನಡಿಗನ ಅಚ್ಚರಿಯ ಹೇಳಿಕೆ

ಒತ್ತಡದಿಂದಾಗಿ ಹಾರ್ದಿಕ್ ಆಯ್ಕೆ?

ಹೆಚ್ಚಿನ ಒತ್ತಡದಿಂದಾಗಿ ಹಾರ್ದಿಕ್ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ತಿಳಿಸಿವೆ. ಅದೇ ಒತ್ತಡದಲ್ಲಿ ಅವರಿಗೆ ಟೀಂ ಇಂಡಿಯಾದ ಉಪನಾಯಕತ್ವವನ್ನೂ ನೀಡಲಾಗಿದೆ. ಆದರೆ, ಭಾರತ ತಂಡದ ಆಯ್ಕೆಗಾರರು ಮತ್ತು ನಾಯಕನ ಮೇಲೆ ಯಾರ ಒತ್ತಡವಿತ್ತು ಎಂಬುದು ಇಲ್ಲಿ ಗಮನಿಸಬೇಕಾದ ಅಂಶವಾಗಿದೆ. ಇದೀಗ ಟಿ20 ವಿಶ್ವಕಪ್‌ನಲ್ಲಿ ಒತ್ತಡದಿಂದ ತೆಗೆದುಕೊಂಡ ಈ ನಿರ್ಧಾರದ ಪರಿಣಾಮವನ್ನು ಟೀಂ ಇಂಡಿಯಾ ಹೇಗೆ ಎದುರಿಸುತ್ತದೆ ಎಂಬುದನ್ನು ಕಾದನೋಡಬೇಕಿದೆ.

ಪಾಂಡ್ಯ ಆಯ್ಕೆ ಬಗ್ಗೆ ಪ್ರಶ್ನೆಗಳು ಎದ್ದಿದ್ದವು

ಏಪ್ರಿಲ್ 30 ರಂದು ಭಾರತೀಯ ಟಿ20 ತಂಡದ ಆಯ್ಕೆಯಾದ ಕೆಲವು ದಿನಗಳ ನಂತರ, ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಪತ್ರಿಕಾಗೋಷ್ಠಿಯನ್ನು ನಡೆಸಿದಾಗಲೂ ಈ ವಿಷಯ ಪ್ರಸ್ತಾಪಿಸಲಾಯಿತು. ಕಳಪೆ ಫಾರ್ಮ್ ನಡುವೆಯೂ ಹಾರ್ದಿಕ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮುಖ್ಯ ಆಯ್ಕೆದಾರರನ್ನು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅಗರ್ಕರ್, ‘ಕೆಳ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮತ್ತು ನಾಲ್ಕು ಓವರ್‌ ಬೌಲಿಂಗ್‌ ಮಾಡುವ ಆಟಗಾರನ ಅವಶ್ಯಕತೆ ನಮಗಿತ್ತು. ಪ್ರಸ್ತುತ ಹಾರ್ದಿಕ್ ಹೊರತಾಗಿ ಬೇರೆ ಆಯ್ಕೆ ಲಭ್ಯವಿಲ್ಲದ ಕಾರಣ ಆಯ್ಕೆ ಸಮಿತಿ ಈ ನಿರ್ಧಾರಕ್ಕೆ ಬರಬೇಕಾಯಿತು ಎಂದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Tue, 14 May 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್