ಮುಂಬೈ ಇಂಡಿಯನ್ಸ್ ಹಂಚಿಕೊಂಡ ವಿಡಿಯೋದಲ್ಲಿ ಪ್ರತ್ಯೇಕವಾಗಿ ಕಾಣಿಸಿಕೊಂಡ ರೋಹಿತ್, ಹಾರ್ದಿಕ್
ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ 22 ರಿಂದ ಶುರುವಾಗಲಿದೆ. ಇದೀಗ ಮುಂಬೈ ಇಂಡಿಯನ್ಸ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನ ಹಂಚಿಕೊಂಡಿದೆ. ವಿಡಿಯೋದ ಮಧ್ಯದಲ್ಲಿ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಸೋಫಾದಲ್ಲಿ ಕುಳಿತು ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದಾರೆ. ಆದರೆ, ಈ ಫೋಟೋ ಸೆಷನ್‌ನಲ್ಲಿ ಇಬ್ಬರೂ ಪ್ರತ್ಯೇಕವಾಗಿ ಕುಳಿತಿದ್ದಾರೆ. ಅದು ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ 22 ರಿಂದ ಶುರುವಾಗಲಿದೆ. ಈ ಬಾರಿ ಮುಂಬೈ ಟೀಮ್ನ್ನು ಹಾರ್ದಿಕ್ ಪಾಂಡ್ಯ(Hardik Pandya) ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ(Rohit Sharma) ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಹಂಚಿಕೊಂಡಿರುವ ವಿಡಿಯೋಂದರಲ್ಲಿ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಪ್ರತ್ಯೇಕವಾಗಿ ಕಾಣಿಸಿಕೊಂಡಿದ್ದಾರೆ.
ಇತ್ತೀಚೆಗೆ ಪಾಂಡ್ಯ ಅವರು, ನನ್ನ ಮತ್ತು ರೋಹಿತ್ ಶರ್ಮಾ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಹಿಟ್‌ಮ್ಯಾನ್ ರೋಹಿತ್ ಶರ್ಮಾ ಜೊತೆಗಿನ ಸಂಬಂಧದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹಾರ್ದಿಕ್ ಹೇಳಿದ್ದರು. ಆದರೆ, ಇದೀಗ ಮುಂಬೈ ಇಂಡಿಯನ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಚರ್ಚೆಗೆ ಗ್ರಾಸವಾಗಿದೆ.
Har dhadkan, har dil ye bole 𝙈𝙪𝙢𝙗𝙖𝙞 𝙈𝙚𝙧𝙞 𝙅𝙖𝙖𝙣 🎶💙#OneFamily #MumbaiIndians #MumbaiMeriJaan pic.twitter.com/Z911mvKOI1
— Mumbai Indians (@mipaltan) March 18, 2024
ಇದನ್ನೂ ಓದಿ:IPL 2024: ರೋಹಿತ್ ಶರ್ಮಾ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ..!
ಎಲ್ಲಾ ಮುಂಬೈ ಇಂಡಿಯನ್ಸ್ ಕ್ರಿಕೆಟಿಗರೊಂದಿಗೆ, ತಂಡದ ಮಾಲೀಕ ನೀತಾ ಅಂಬಾನಿ ಮತ್ತು ಸಚಿನ್ ತೆಂಡೂಲ್ಕರ್ ಕೂಡ ಈ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾರೆ. ವಿಡಿಯೋದ ಮಧ್ಯದಲ್ಲಿ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಸೋಫಾದಲ್ಲಿ ಕುಳಿತು ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದಾರೆ. ಆದರೆ, ಈ ಫೋಟೋ ಸೆಷನ್‌ನಲ್ಲಿ ಇಬ್ಬರೂ ಪ್ರತ್ಯೇಕವಾಗಿ ಕುಳಿತಿದ್ದಾರೆ. ಅದು ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.
Mumbai Indians squad of IPL 2024. 🔥 pic.twitter.com/8MtmCGVswV
— Mufaddal Vohra (@mufaddal_vohra) March 18, 2024
ಮುಂಬೈ ಇಂಡಿಯನ್ಸ್ ವಿಡಿಯೋವನ್ನು ಹಂಚಿಕೊಂಡ ನಂತರ, ಅಭಿಮಾನಿಗಳು ತಮ್ಮ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ