IND vs NZ 3rd ODI: ತೃತೀಯ ಏಕದಿನಕ್ಕಾಗಿ ಇಂದೋರ್ ತಲುಪಿದ ಟೀಮ್ ಇಂಡಿಯಾ: ಈ ಪ್ಲೇಯರ್ಸ್​ಗೆ ವಿಶ್ರಾಂತಿ ಸಾಧ್ಯತೆ

India vs New Zealand 3rd ODI: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ತೃತೀಯ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಆಯೋಜಿಸಲಾಗಿದೆ. ಈಗಾಗಲೇ ಉಭಯ ತಂಡದ ಆಟಗಾರರು ಅಂತಿಮ ಕದನಕ್ಕಾಗಿ ಇಂದೋರ್ ತಲುಪಿದ್ದಾರೆ.

IND vs NZ 3rd ODI: ತೃತೀಯ ಏಕದಿನಕ್ಕಾಗಿ ಇಂದೋರ್ ತಲುಪಿದ ಟೀಮ್ ಇಂಡಿಯಾ: ಈ ಪ್ಲೇಯರ್ಸ್​ಗೆ ವಿಶ್ರಾಂತಿ ಸಾಧ್ಯತೆ
Team India
Follow us
| Edited By: Vinay Bhat

Updated on:Jan 23, 2023 | 10:02 AM

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಭಾರತ (India vs New Zealand) ಕೈವಶ ಮಾಡಿಕೊಂಡಿದೆ. ಹೈದರಾಬಾದ್​ನಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 12 ರನ್​ಗಳ ಜಯ ಸಾಧಿಸಿತು. ಬಳಿಕ ರಾಪ್​ಪುರದಲ್ಲಿ ಬಿರುಗಾಳಿ ಎಬ್ಬಿಸಿದ ಭಾರತೀಯ ಬೌಲರ್​ಗಳು ದ್ವಿತೀಯ ಪಂದ್ಯದಲ್ಲೂ 8 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿ ಮೂರು ಪಂದ್ಯಗಳ ಏಕದಿನದಲ್ಲಿ 2-0 ಮುನ್ನಡೆ ಪಡೆದುಕೊಂಡು ಸರಣಿ ಕೈವಶ ಮಾಡಿಕೊಂಡಿದೆ. ಇದೀಗ ಉಭಯ ತಂಡಗಳು ಮೂರನೇ ಏಕದಿನಕ್ಕೆ ಸಜ್ಜಾಗುತ್ತಿದೆ. ಈಗಾಗಲೇ ಭಾರತ ಹಾಗೂ ನ್ಯೂಜಿಲೆಂಡ್ ತಂಡದ ಆಟಗಾರರು ಅಂತಿಮ ಕದನಕ್ಕಾಗಿ ಇಂದೋರ್ (Indore) ತಲುಪಿದ್ದಾರೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ತೃತೀಯ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಆಯೋಜಿಸಲಾಗಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಮಧ್ಯಾಹ್ನ 1:30ಕ್ಕೆ ಮ್ಯಾಚ್ ಆರಂಭವಾಗಲಿದ್ದು, 1 ಗಂಟೆಗೆ ಟಾಸ್ ಪ್ರಕ್ರಿಯೆ ಏರ್ಪಡಿಸಲಾಗಿದೆ. ರೋಹಿತ್ ಪಡೆ ಈ ಕೊನೆಯ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್​ಸ್ವೀಪ್ ಮಾಡುವ ಗುರಿ ಹೊಂದಿದ್ದರೆ, ಇತ್ತ ಕಿವೀಸ್ ಪಡೆ ಕನಿಷ್ಠ ಒಂದು ಪಂದ್ಯವನ್ನಾದರೂ ಜಯಿಸಿ ಮಾನ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ.

ಈಗಾಗಲೇ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲವು ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ ಕೂಡ ರೆಸ್ಟ್ ಮೊರೆ ಹೋದರೆ ಅಚ್ಚರಿ ಪಡಬೇಕಿಲ್ಲ. ಹೀಗಾಗಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಹೊಸ ಮುಖಗಳು ಕಾಣುವುದು ಖಚಿತ.

ಇದನ್ನೂ ಓದಿ
Image
INDW vs SLW: 59 ರನ್​ಗೆ ಲಂಕಾ ಕಟ್ಟಿ ಹಾಕಿದ ಶಫಾಲಿ ಪಡೆ: ಅಂಡರ್-19 ವಿಶ್ವಕಪ್​ನಲ್ಲಿ ಭಾರತೀಯ ಮಹಿಳೆಯರ ಭರ್ಜರಿ ಕಮ್​ಬ್ಯಾಕ್
Image
Rovman Powell: 10 ಸಿಕ್ಸ್​, 4 ಫೋರ್: ಪೊವೆಲ್​ಗೆ ಪವರ್​ಫುಲ್ ಶತಕ ಜಸ್ಟ್​ ಮಿಸ್
Image
Shubman Gill: ಶುಭ್​ಮನ್ ಶುಭಾರಂಭ: ಆರಂಭದಲ್ಲೇ 2 ದಾಖಲೆ ಉಡೀಸ್
Image
Hockey World Cup 2023: ನ್ಯೂಜಿಲೆಂಡ್ ವಿರುದ್ಧ ಸೋತ ಭಾರತ: ಹಾಕಿ ವಿಶ್ವಕಪ್​ನಿಂದ ಔಟ್

ILT20: ಸ್ಪೋಟಕ ಶತಕ: ಟಾಮ್ ಬಿರುಗಾಳಿ ಬ್ಯಾಟಿಂಗ್​ಗೆ ನಲುಗಿದ ಕ್ಯಾಪಿಟಲ್ಸ್​

ದ್ವಿತೀಯ ಏಕದಿನ ಹೇಗಿತ್ತು?:

ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತದ ವೇಗಿಗಳ ದಾಳಿಗೆ ನ್ಯೂಜಿಲೆಂಡ್ ಆಟಗಾರರು​ ರನ್​ ಗಳಿಸಲು ಹರಸಾಹಸಪಡಬೇಕಾಯಿತು. ಸ್ಟಾರ್ ಬ್ಯಾಟರ್ ಎನಿಸಿಕೊಂಡವರಾರು ಎರಡಂಕಿ ಮೀರಲಿಲ್ಲ. ಗ್ಲೆನ್ ಫಿಲಿಪ್ಸ್ 36 ರನ್ ಗಳಿಸಿದ್ದೇ ಗರಿಷ್ಠ ಸ್ಕೋರ್ ಆಗಿತ್ತು. 34.2 ಓವರ್‌ಗಳಲ್ಲಿ ಕೇವಲ 108 ರನ್‌ಗಳನ್ನು ನೀಡಿ ಸರ್ವಪತನ ಕಂಡ ಕಿವೀಸ್ ತಂಡ ಹೀನಾಯ ಪ್ರದರ್ಶನ ತೋರಿತು. ಮೊಹಮ್ಮದ್ ಶಮಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡು, ತಮ್ಮ 6 ಓವರ್​ಗಳಲ್ಲಿ ಕೇವಲ 18 ರನ್​ ನೀಡಿ ಮೂರು ವಿಕೆಟ್ ಪಡೆದರು.

ಭಾರತ ತಂಡ ಕೇವಲ 20.1 ಓವರ್​ಗಳಿಗೆ 2 ವಿಕೆಟ್ ಕಳೆದುಕೊಂಡು 111 ರನ್​ಗಳಿಸುವ ಮೂಲಕ 8 ವಿಕೆಟ್​ಗಳ ಜಯ ದಾಖಲಿಸಿತು. ರೋಹಿತ್ ಶರ್ಮಾ 50 ಎಸೆತದಲ್ಲಿ 7 ಬೌಂಡರಿ ಮತ್ತು​ 2 ಸಿಕ್ಸ್ ಒಳಗೊಂಡಂತೆ 51 ರನ್ ಗಳಿಸಿದರೆ, ಶುಭ್​ಮನ್ ಗಿಲ್​ ಔಟ್​ ಆಗದೇ 40 (53) ರನ್​ ಗಳಿಸುವ ಮೂಲಕ ತಂಡದ ಗೆಲುವನ್ನು ಸಲೀಸಾಗಿ ಡದಕ್ಕೆ ಸೇರಿಸಿದರು. ಮೊಹಮ್ಮದ್ ಶಮಿ ಪಂದ್ಯಶ್ರೇಷ್ಠ ಬಾಚಿಕೊಂಡಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:02 am, Mon, 23 January 23

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್