Rohit Sharma-Virat Kohli: ವಿರಾಟ್ ಕೊಹ್ಲಿ-ರೋಹಿತ್ ಶರ್ಮಾರ ಮುಂದಿನ ಟಾರ್ಗೆಟ್ ಪಾಕಿಸ್ತಾನ್

Rohit Sharma and Virat Kohli: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ.

Rohit Sharma-Virat Kohli: ವಿರಾಟ್ ಕೊಹ್ಲಿ-ರೋಹಿತ್ ಶರ್ಮಾರ ಮುಂದಿನ ಟಾರ್ಗೆಟ್ ಪಾಕಿಸ್ತಾನ್
Rohit Sharma-Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 03, 2023 | 5:59 PM

ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ ಏಕದಿನ ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಭಾರತ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಆದರೆ ಈ ಮೂರು ಪಂದ್ಯಗಳಲ್ಲಿ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿದ್ದು ಕೇವಲ 1 ಪಂದ್ಯದಲ್ಲಿ ಮಾತ್ರ. ಇನ್ನುಳಿದ ಎರಡು ಪಂದ್ಯಗಳಿಂದ ವಿಶ್ರಾಂತಿ ಪಡೆದಿದ್ದರು. ಇದೀಗ ಟೀಮ್ ಇಂಡಿಯಾ ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಸಜ್ಜಾಗಿದೆ. ಆದರೆ ಈ ಸರಣಿಯಿಂದಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಅಂದರೆ ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಇಬ್ಬರು ಹಿರಿಯ ಆಟಗಾರರಿಗೆ ದೀರ್ಘಾವಧಿಯ ವಿಶ್ರಾಂತಿ ನೀಡಲಾಗಿದೆ.

ಇದರ ಬೆನ್ನಲ್ಲೇ  ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ಮತ್ತೆ ಕಣಕ್ಕಿಳಿಯುವುದು ಯಾವಾಗ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಬಿಸಿಸಿಐ ಕಡೆಯಿಂದ ಸಿಕ್ಕ ಉತ್ತರ ಆಗಸ್ಟ್ 24. ಅಂದರೆ ಏಷ್ಯಾಕಪ್​ಗೂ ಮುನ್ನ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಭಾರತ ತಂಡಕ್ಕೆ 5 ದಿನಗಳ ವಿಶೇಷ ಶಿಬಿರವನ್ನು ಏರ್ಪಡಿಸಲಾಗುತ್ತಿದೆ. ಈ ಶಿಬಿರದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಅದುವರೆಗೆ ಇಬ್ಬರು ದಿಗ್ಗಜರು ವಿಶ್ರಾಂತಿಯಲ್ಲಿದ್ದಾರೆ.

ಪಾಕಿಸ್ತಾನ್ ವಿರುದ್ಧ ಕಣಕ್ಕೆ:

ಇನ್ನು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂದಿನ ಪಂದ್ಯವಾಡುವುದು ಪಾಕಿಸ್ತಾನ್ ವಿರುದ್ಧ ಎಂಬುದು ವಿಶೇಷ. ಅಂದರೆ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಡುವುದು ಸೆಪ್ಟೆಂಬರ್ 2 ಎಂದು. ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಅದರಂತೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಮುಂದಿನ ಟಾರ್ಗೆಟ್ ಪಾಕಿಸ್ತಾನ್.

ಏಷ್ಯಾಕಪ್ ವೇಳಾಪಟ್ಟಿ ಹೀಗಿದೆ:

  • ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
  • ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
  • ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
  • ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
  • ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
  • ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)

ಇದನ್ನೂ ಓದಿ: Virat Kohli: ಭರ್ಜರಿ ಸೆಂಚುರಿ ಸಿಡಿಸಿ 8 ದಾಖಲೆ ಬರೆದ ಕಿಂಗ್ ಕೊಹ್ಲಿ

ಸೂಪರ್-4 ಹಂತದ ವೇಳಾಪಟ್ಟಿ:

  • ಸೆಪ್ಟೆಂಬರ್ 6- A1 Vs B2 (ಲಾಹೋರ್)
  • ಸೆಪ್ಟೆಂಬರ್ 9- B1 Vs B2 (ಕೊಲಂಬೊ)
  • ಸೆಪ್ಟೆಂಬರ್ 10- A1 Vs A2 (ಕೊಲಂಬೊ)
  • ಸೆಪ್ಟೆಂಬರ್ 12- A2 Vs B1 (ಕೊಲಂಬೊ)
  • ಸೆಪ್ಟೆಂಬರ್ 14- A1 Vs B1 (ಕೊಲಂಬೊ)
  • ಸೆಪ್ಟೆಂಬರ್ 15- A2 Vs B2 (ಕೊಲಂಬೊ)
  • ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)

Published On - 5:59 pm, Thu, 3 August 23

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ