ಪ್ರ್ಯಾಕ್ಟೀಸ್ ಸೆಷನ್ಗೆ ಚಕ್ಕರ್ ಹಾಕಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ
Team India’s first practice session in Colombo: ಕೊಲಂಬೊದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಟೀಮ್ ಇಂಡಿಯಾ ಆಟಗಾರರು ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಆದರೆ, ಮೊದಲ ಅಭ್ಯಾಸಕ್ಕೆ ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗೈರಾಗಿದ್ದರು.
ಏಷ್ಯಾಕಪ್ 2023ರ (Asia Cup 2023) ಸೂಪರ್ 4 ಸ್ಟೇಜ್ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಎದುರಿಸಲಿದೆ. ಸೆಪ್ಟೆಂಬರ್ 10 ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂ ಸಾಕ್ಷಿಯಾಗಲಿದೆ. ಈ ಮಹತ್ವದ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಈಗಾಗಲೇ ಕೊಲಂಬೊಕ್ಕೆ ತಲುಪಿದ್ದಾರೆ. ಆದರೆ, ಮೈದಾನದಲ್ಲಿ ಅಭ್ಯಾಸ ನಡೆಸಲು ಸಾಧ್ಯವಾಗುತ್ತಿಲ್ಲ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆಟಗಾರರು ಹೊರಾಂಗಣದಲ್ಲಿ ಪ್ರ್ಯಾಕ್ಟೀಸ್ ನಡೆಸಲು ಆಗುತ್ತಿಲ್ಲ.
ಮಳೆಯ ಪರಿಣಾಮ ಭಾರತೀಯ ಆಟಗಾರರು ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಆದರೆ, ಮೊದಲ ಅಭ್ಯಾಸಕ್ಕೆ ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗೈರಾಗಿದ್ದರು.
ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ನಡೆಸುತ್ತಿರುವ ಫೋಟೋ:
🏏💪🏾 🤜🏾🤛🏾 pic.twitter.com/uHPmRUtK9I
— BCCI (@BCCI) September 7, 2023
ಕೊಲಂಬೊದ ಮೈದಾನದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಟೀಮ್ ಇಂಡಿಯಾ ಆಟಗಾರರು ಒಳಾಂಗಣ ಅಭ್ಯಾಸ ನಡೆಸಬೇಕಾಗಿ ಬಂತು. ಪಾಕ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ವೈಫಲ್ಯ ಅನುಭವಿಸಿದ್ದರು. ಇದು ಅಗ್ರ ಕ್ರಮಾಂಕದ ಕುಸಿತಕ್ಕೆ ಕಾರಣವಾಯಿತು. ಹೀಗಿದ್ದರೂ, ಇಬ್ಬರೂ ಮೊದಲ ಅಭ್ಯಾಸ ಸೆಷನ್ ಮಿಸ್ ಮಾಡಿಕೊಂಡಿದ್ದಾರೆ. ಆದಾಗ್ಯೂ, ರೋಹಿತ್ ಶರ್ಮಾ ಜಿಮ್‌ನಿಂದ ಗ್ರೂಪ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಕ್ಷರ್ ಪಟೇಲ್, ತಿಲಕ್ ವರ್ಮಾ ಮತ್ತು ತರಬೇತುದಾರರೊಂದಿಗೆ ರೋಹಿತ್ ಜಿಮ್ನಲ್ಲಿ ಫೋಟೋಕ್ಕೆ ಪೋಸ್ ನೀಡಿದ್ದಾರೆ.
ರೋಹಿತ್ ಶರ್ಮಾ ಹಂಚಿಕೊಂಡ ಫೋಟೋ:
View this post on Instagram
RevSportz ನ ವರದಿಯ ಪ್ರಕಾರ, ಅಭ್ಯಾಸದ ಅವಧಿಯು ಕೊಹ್ಲಿ ಮತ್ತು ರೋಹಿತ್ ಉಪಸ್ಥಿತಿಯಿಲ್ಲದೆ ನಡೆಯಿತು. ಏತನ್ಮಧ್ಯೆ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಮತ್ತು ಶುಭ್ಮನ್ ಗಿಲ್ ಸೇರಿದಂತೆ ಇತರೆ ಆಟಗಾರರು ಅಭ್ಯಾಸ ಮಾಡುತ್ತಿರುವ ಫೋಟೋವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದೆ.
VIDEO: ಪಾಕಿಸ್ತಾನದಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿಯ ಅಭಿಮಾನಿ
ಭಾರತೀಯ ಆಟಗಾರರು ಅಭ್ಯಾಸಕ್ಕೆ ಆಗಮಿಸುತ್ತಿರುವ ವಿಡಿಯೋ:
Look who has turned up for indoor nets here in Colombo. #AsiaCup2023 #KLRahul pic.twitter.com/8FOF3anORL
— XtraTime (@xtratimeindia) September 7, 2023
ಶ್ರೇಯಸ್ ಸ್ಥಾನಕ್ಕೆ ಕೆಎಲ್ ರಾಹುಲ್?
ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಸೆ.10 ರಂದು ನಡೆಯಲಿರುವ ಭಾರತ-ಪಾಕ್ ಕದನಕ್ಕೆ ಕೆಎಲ್ ರಾಹುಲ್ ಅವರನ್ನು ಶ್ರೇಯಸ್ ಅಯ್ಯರ್ ಜಾಗದಲ್ಲಿ ಆಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇಶಾನ್ ಕಿಶನ್ ಪಾಕಿಸ್ತಾನ ವಿರುದ್ಧ 5ನೇ ಸ್ಥಾನದಲ್ಲಿ ಅದ್ಭುತವಾದ ಪ್ರದರ್ಶನ ನೀಡಿದ್ದರು. ಹೀಗಾಗಿ ಮ್ಯಾನೇಜ್‌ಮೆಂಟ್ ಇವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎನ್ನಲಾಗಿದೆ. ಜೊತೆಗೆ ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಶಮಿ ನಡುವೆ ಯಾರಿಗೆ ಅವಕಾಶ ನೀಡಬೇಕು ಎಂಬುದು ತಲೆನೋವಾಗಿದೆ. ಏಷ್ಯಾಕಪ್ 2023 ರ ಸೂಪರ್ 4 ಪಂದ್ಯಕ್ಕೆ ಜಸ್ಪ್ರಿತ್ ಬುಮ್ರಾ ಲಭ್ಯರಿರುವ ಕಾರಣ, ಶಮಿ ಅಥವಾ ಶಾರ್ದೂಲ್ ಒಬ್ಬರಿ ಹೊರಗುಳಿಯಬೇಕಾಗುತ್ತದೆ.
ಏಷ್ಯಾಕಪ್ 2023 ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರಿತ್ ಬುಮ್ರಾಜ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ