AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಟೆಸ್ಟ್ ಎಫೆಕ್ಟ್: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಶ್ರೇಯಾಂಕದಲ್ಲಿ ಭಾರೀ ಕುಸಿತ

India vs Bangladesh: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 280 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಆದರೆ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

ಬಾಂಗ್ಲಾ ಟೆಸ್ಟ್ ಎಫೆಕ್ಟ್: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಶ್ರೇಯಾಂಕದಲ್ಲಿ ಭಾರೀ ಕುಸಿತ
Rohit Sharma - Virat Kohli
ಝಾಹಿರ್ ಯೂಸುಫ್
|

Updated on: Sep 26, 2024 | 9:42 AM

Share

ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಐಸಿಸಿ ರ್ಯಾಂಕಿಂಗ್​ನಲ್ಲಿ ಭಾರೀ ಕುಸಿತ ಕಂಡಿದ್ದಾರೆ. ಅದರಲ್ಲೂ ಟೆಸ್ಟ್ ಬ್ಯಾಟರ್​ಗಳ ಟಾಪ್-10 ಶ್ರೇಯಾಂಕ ಪಟ್ಟಿಯಿಂದ ವಿರಾಟ್ ಕೊಹ್ಲಿ ಹೊರಬಿದ್ದಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಟೆಸ್ಟ್ ಬ್ಯಾಟರ್​ಗಳ ರ್ಯಾಂಕಿಂಗ್​ನಲ್ಲಿ 5ನೇ ಸ್ಥಾನದಲ್ಲಿದ್ದರು. ಆದರೆ ಚೆನ್ನೈ ಟೆಸ್ಟ್​ನ ಮೊದಲ ಇನಿಂಗ್ಸ್​ನಲ್ಲಿ 6 ರನ್ ಹಾಗೂ ಎರಡನೇ ಇನಿಂಗ್ಸ್​ನಲ್ಲಿ 5 ರನ್​ಗಳಿಗೆ ಔಟಾಗಿದ್ದ ಹಿಟ್​ಮ್ಯಾನ್ ಇದೀಗ ಟೆಸ್ಟ್ ಬ್ಯಾಟರ್​ಗಳ ಶ್ರೇಯಾಂಕದಲ್ಲಿ ಐದು ಸ್ಥಾನ ಕುಸಿತ ಕಂಡಿದ್ದಾರೆ. ಅಲ್ಲದೆ ನೂತನ ರ್ಯಾಕಿಂಗ್ ಪಟ್ಟಿಯಲ್ಲಿ 10ನೇ ಸ್ಥಾನ ಅಲಂಕರಿಸಿದ್ದಾರೆ.

ಮತ್ತೊಂದೆಡೆ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ 6 ರನ್​ ಬಾರಿಸಿದ್ದ ವಿರಾಟ್ ಕೊಹ್ಲಿ ದ್ವಿತೀಯ ಇನಿಂಗ್ಸ್​ನಲ್ಲಿ 17 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದರ ಪರಿಣಾಮ ಇದೀಗ ಐಸಿಸಿ ಟೆಸ್ಟ್ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ 12ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದಕ್ಕೂ ಮುನ್ನ ಕಿಂಗ್ ಕೊಹ್ಲಿ 7ನೇ ಸ್ಥಾನದಲ್ಲಿದ್ದರು ಎಂಬುದು ವಿಶೇಷ.

ಇದನ್ನೂ ಓದಿ: IPL 2025: RCB ಉಳಿಸಿಕೊಳ್ಳುವ ಅನ್​ಕ್ಯಾಪ್ಡ್​ ಆಟಗಾರ ಯಾರು?

ಇದೀಗ ಟೀಮ್ ಇಂಡಿಯಾ ದಿಗ್ಗಜರಿಬ್ಬರೂ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಸಿದ್ಧತೆಯಲ್ಲಿದ್ದಾರೆ. ಕಾನ್ಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮಿಂಚಿದರೆ ಶ್ರೇಯಾಂಕ ಪಟ್ಟಿಯಲ್ಲಿ ಮೇಲೇರಬಹುದು. ಒಂದು ವೇಳೆ ರೋಹಿತ್ ಶರ್ಮಾ ವಿಫಲರಾದರೆ, ಮುಂದಿನ ವಾರ ಅವರು ಸಹ ಟಾಪ್-10 ಪಟ್ಟಿಯಿಂದ ಹೊರಬೀಳಲಿದ್ದಾರೆ.

ಟಾಪ್-10 ನಲ್ಲಿ ಮೂವರು ಭಾರತೀಯರು:

ಐಸಿಸಿ ಪ್ರಕಟಿಸಿರುವ ಟೆಸ್ಟ್ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಮೂವರು ಬ್ಯಾಟ್ಸ್​ಮನ್​ಗಳು ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಇಂಗ್ಲೆಂಡ್​ನ ಜೋ ರೂಟ್ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾದ ಯಶಸ್ವಿ ಜೈಸ್ವಾಲ್ 5ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ 6ನೇ ಸ್ಥಾನದಲ್ಲಿ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ. ಇನ್ನು ಟಾಪ್-10 ಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ರೋಹಿತ್ ಶರ್ಮಾ ಅಲಂಕರಿಸಿದ್ದಾರೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ