ವಿರಾಟ್ ಕೊಹ್ಲಿಗೆ ಬಿಗ್ ಶಾಕ್: ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ

Rohit Sharma Captain: ದಕ್ಷಿಣ ಆಫ್ರಿಕಾ ಸರಣಿ ಇದೇ ಡಿಸೆಂಬರ್ 26 ರಿಂದ ಶುರುವಾಗಲಿದೆ.   ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 ಸೆಂಚುರಿಯನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಹಾಗೆಯೇ, ಎರಡನೇ ಟೆಸ್ಟ್ ಜನವರಿ 3 ರಿಂದ 07 ಜೋಹಾನ್ಸ್ ಬರ್ಗ್​ನಲ್ಲಿ, ಮೂರನೇ ಟೆಸ್ಟ್ ಜನವರಿ 11 ರಿಂದ 15 ಕೇಪ್ ಟೌನ್​ನಲ್ಲಿ ನಡೆಯಲಿದೆ.

ವಿರಾಟ್ ಕೊಹ್ಲಿಗೆ ಬಿಗ್ ಶಾಕ್: ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ
Rohit Sharma-Virat Kohli

ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗಾಗಿ ಟೀಮ್ ಇಂಡಿಯಾ (Team India) ಏಕದಿನ ತಂಡದ ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಏಕದಿನ ಹಾಗೂ ಟಿ20 ತಂಡಕ್ಕೆ ಹಿಟ್​ಮ್ಯಾನ್ ಅವರಿಗೆ ಕಪ್ತಾನನ ಸ್ಥಾನ ನೀಡಲಾಗಿದೆ. ಈ ಹಿಂದೆ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ (Virat Kohli) ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು. ಇದಾಗ್ಯೂ ಕೊಹ್ಲಿ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯುವುದಾಗಿ ತಿಳಿಸಿದ್ದರು. ಆದರೀಗ ವಿರಾಟ್ ಕೊಹ್ಲಿಯನ್ನು ಏಕದಿನ ತಂಡದ ನಾಯಕ ಸ್ಥಾನದಿಂದ ಕೂಡ ಕೆಳಗಿಳಿಸಲಾಗಿದೆ. ಬದಲಿಗೆ ರೋಹಿತ್ ಶರ್ಮಾ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ. ಇನ್ನು ಕೊಹ್ಲಿ ಟೆಸ್ಟ್ ತಂಡದ ಕ್ಯಾಪ್ಟನ್ ಆಗಿ ಮಾತ್ರ ಮುಂದುವರೆಯಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ತಿಳಿಸಿದೆ.

ಇದರೊಂದಿಗೆ ಸೀಮಿತ ಓವರ್​ಗಳ ತಂಡದ ಸಂಪೂರ್ಣ ಜವಾಬ್ದಾರಿ ರೋಹಿತ್ ಶರ್ಮಾ ಹೆಗಲೇರಿದೆ. ಇನ್ನು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್​ ತಂಡದ ನಾಯಕನಾಗಿ ಮುಂದುವರೆಯಲಿದ್ದು, ಅದರಂತೆ ದಕ್ಷಿಣ ಆಫ್ರಿಕಾ ಸರಣಿಯಲ್ಲೂ ಅವರು ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾ ಸರಣಿ ಇದೇ ಡಿಸೆಂಬರ್ 26 ರಿಂದ ಶುರುವಾಗಲಿದೆ.   ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 ಸೆಂಚುರಿಯನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಹಾಗೆಯೇ, ಎರಡನೇ ಟೆಸ್ಟ್ ಜನವರಿ 3 ರಿಂದ 07 ಜೋಹಾನ್ಸ್ ಬರ್ಗ್​ನಲ್ಲಿ, ಮೂರನೇ ಟೆಸ್ಟ್ ಜನವರಿ 11 ರಿಂದ 15 ಕೇಪ್ ಟೌನ್​ನಲ್ಲಿ ನಡೆಯಲಿದೆ.

ಅದೇ ರೀತಿ ಮೂರು ಪಂದ್ಯಗಳ ಏಕದಿನ ಸರಣಿ ಕೂಡ ನಡೆಯಲಿದ್ದು, ಮೊದಲ ಏಕದಿನ ಪಂದ್ಯ ಜನವರಿ 19 (ಪಾರ್ಲ್, ಸಮಯ – 2.00 PM), 2ನೇ ಏಕದಿನ ಪಂದ್ಯ- ಜನವರಿ 21, (ಪಾರ್ಲ್, ಸಮಯ – 2.00 PM), 3ನೇ ಏಕದಿನ ಪಂದ್ಯ- 23 ಜನವರಿ ಕೇಪ್ ಟೌನ್​ನಲ್ಲಿ ನಡೆಯಲಿದೆ.

ಇದನ್ನೂ ಓದಿ: World Record: ಬರೋಬ್ಬರಿ 15 ಸಿಕ್ಸ್​: ಕ್ರಿಕೆಟ್ ಇತಿಹಾಸದ ಅತೀ ವೇಗದ ಶತಕ

ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Rohit Sharma as the Captain of the ODI & T20I teams)

Published On - 7:26 pm, Wed, 8 December 21

Click on your DTH Provider to Add TV9 Kannada