Rohit Sharma: ಟಿ20 ಕ್ರಿಕೆಟ್​ನಲ್ಲಿ ತ್ರಿಶತಕ ಸಿಡಿಸಿದ ಹಿಟ್​ಮ್ಯಾನ್! ಈ ದಾಖಲೆ ಮಾಡಿದ ಮೊದಲ ಭಾರತೀಯ

IND vs ENG: ರೋಹಿತ್ ಅವರ ನಂತರ 301 ಬೌಂಡರಿಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

Rohit Sharma: ಟಿ20 ಕ್ರಿಕೆಟ್​ನಲ್ಲಿ ತ್ರಿಶತಕ ಸಿಡಿಸಿದ ಹಿಟ್​ಮ್ಯಾನ್! ಈ ದಾಖಲೆ ಮಾಡಿದ ಮೊದಲ ಭಾರತೀಯ
ರೋಹಿತ್
Follow us
| Updated By: ಪೃಥ್ವಿಶಂಕರ

Updated on:Jul 10, 2022 | 2:44 PM

ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಅಪರೂಪದ ಸಾಧನೆ ಮಾಡಿದ್ದಾರೆ. ಟಿ20ಯಲ್ಲಿ 300 ಬೌಂಡರಿಗಳನ್ನು ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಹಿಟ್​ಮ್ಯಾನ್ ಈ ದಾಖಲೆ ಬರೆದರು. ಜೊತೆಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ರೋಹಿತ್ ಶರ್ಮಾ. ಐರ್ಲೆಂಡ್‌ನ ಸ್ಟಾರ್ ಆಟಗಾರ ಪಾಲ್ ಸ್ಟಿರ್ಲಿಂಗ್ 325 ಬೌಂಡರಿಗಳೊಂದಿಗೆ ಅಗ್ರಸ್ಥಾನದಲ್ಲಿ ಉಳಿದಿದ್ದಾರೆ.

ರೋಹಿತ್ ಅವರ ನಂತರ 301 ಬೌಂಡರಿಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ (Virat Kohli) ಮೂರನೇ ಸ್ಥಾನದಲ್ಲಿದ್ದಾರೆ. ಸಿಕ್ಸರ್‌ಗಳ ವಿಷಯದಲ್ಲಿ ಗಪ್ಟಿಲ್ (165) ಮೊದಲ ಸ್ಥಾನದಲ್ಲಿದ್ದರೆ.. ರೋಹಿತ್ (157) ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಇಂಗ್ಲೆಂಡ್-ಭಾರತದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಎದುರಾಳಿ 121 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಆತಿಥೇಯ ತಂಡ 49 ರನ್‌ಗಳಿಂದ ಸೋಲು ಕಂಡಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಂಡಿದೆ.

ಮೊದಲ 20 ಓವರ್‌ಗಳಲ್ಲಿ ಟೀಂ ಇಂಡಿಯಾ 8 ವಿಕೆಟ್ ಕಳೆದುಕೊಂಡು 170 ರನ್ ಗಳಿಸಿತ್ತು. 171 ರನ್‌ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಇಂಗ್ಲೆಂಡ್ 121 ರನ್‌ಗಳಿಗೆ ಆಲೌಟಾಯಿತು. ಹರ್ಷಲ್ ಪಟೇಲ್ ಎಸೆದ 17ನೇ ಓವರ್ ನ ಕೊನೆಯ ಎಸೆತದಲ್ಲಿ ಪಾರ್ಕಿನ್ಸನ್ (0) ಬೌಲ್ಡ್ ಆಗುವುದರೊಂದಿಗೆ ಇಂಗ್ಲೆಂಡ್ ಇನ್ನಿಂಗ್ಸ್ ಅಂತ್ಯಗೊಂಡಿತು. ಮತ್ತೊಂದೆಡೆ ಡೇವಿಡ್ ವಿಲ್ಲೆ (33) ಅಜೇಯರಾಗಿ ಉಳಿದರು.

ಇದನ್ನೂ ಓದಿ
Image
India vs England 3rd T20 Match Live Streaming: ಇಂದೇ ಅಂತಿಮ ಟಿ20 ಕದನ; ಪಂದ್ಯದ ಆರಂಭ ಯಾವಾಗ?
Image
Wimbledon 2022: ಚೊಚ್ಚಲ ವಿಂಬಲ್ಡನ್ ಗೆದ್ದು ಇತಿಹಾಸ ನಿರ್ಮಿಸಿದ ಕಜಕಿಸ್ತಾನದ ಎಲೆನಾ ರೈಬಾಕಿನಾ..!
Image
India vs England 2nd T20 Playing 11: ಭಾರತ ಮೊದಲು ಬ್ಯಾಟಿಂಗ್; 4 ಬದಲಾವಣೆ, ಯಾರಿಗೆಲ್ಲ ಛಾನ್ಸ್?

ರೋಹಿತ್-ಪಂತ್ ಉತ್ತಮ ಜೊತೆಯಾಟ

ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಲ್ಕು ಬದಲಾವಣೆಗಳನ್ನು ಮಾಡಿದ್ದು, ವಿರಾಟ್ ಕೊಹ್ಲಿ, ರಿಷಬ್ ಪಂತ್, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾಗೆ ಅವಕಾಶ ಸಿಕ್ಕಿತು. ಬುಮ್ರಾ ಅವರ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೊದಲು, ಪಂತ್ ಮತ್ತು ಜಡೇಜಾ ಅವರ ಬ್ಯಾಟಿಂಗ್ ತಮ್ಮ ಸಾಮರ್ಥ್ಯವನ್ನು ತೋರಿಸಿತು. ಎಲ್ಲಾ ಊಹಾಪೋಹಗಳಿಂದ ವಿಭಿನ್ನವಾದ ನಿಲುವನ್ನು ತೆಗೆದುಕೊಂಡ ಟೀಮ್ ಇಂಡಿಯಾ, ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಪಂತ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಿದರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು ಆಕ್ರಮಣಕಾರಿಯಾಗಿ ಆರಂಭಿಸಿದರು. ಐದನೇ ಓವರ್‌ನ ಐದನೇ ಎಸೆತದಲ್ಲಿ ರೋಹಿತ್ (31 ರನ್, 20 ಎಸೆತ) ಔಟಾಗುವ ಮೊದಲು, ಇಬ್ಬರೂ 49 ರನ್​ಗಳ ಜೊತೆಯಾಟ ನೀಡಿದರು.

ಜಡೇಜಾ ಅಬ್ಬರ

ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ಕೂಡ ಹೆಚ್ಚು ಹೊತ್ತು ನಿಲ್ಲಲಾಗದೆ 11ನೇ ಓವರ್‌ನಲ್ಲಿ ಕೇವಲ 89 ರನ್‌ಗಳಿಗೆ 5 ವಿಕೆಟ್‌ಗಳು ಪತನಗೊಂಡಿದ್ದವು. ಇಂತಹ ಪರಿಸ್ಥಿತಿಯಲ್ಲಿ ರವೀಂದ್ರ ಜಡೇಜಾ ಮುಂದಾಳತ್ವ ವಹಿಸಿದ್ದರು. ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಅದ್ಭುತ ಶತಕ ಬಾರಿಸಿದ್ದ ಜಡೇಜಾ ಈ ಮೈದಾನದಲ್ಲಿ ಮತ್ತೊಮ್ಮೆ ತಮ್ಮ ಅಬ್ಬರವನ್ನು ಪ್ರದರ್ಶಿಸಿ ಕೇವಲ 29 ಎಸೆತಗಳಲ್ಲಿ ಅಜೇಯ 46 ರನ್ (5 ಬೌಂಡರಿ) ಬಾರಿಸುವ ಮೂಲಕ ತಂಡವನ್ನು 170 ರನ್‌ಗಳಿಗೆ ಕೊಂಡೊಯ್ದರು. ಗ್ಲೀಸನ್ ಹೊರತಾಗಿ ಇಂಗ್ಲೆಂಡ್ ಪರ ಕ್ರಿಸ್ ಜೋರ್ಡಾನ್ 4 ವಿಕೆಟ್ ಪಡೆದರು.

Published On - 2:44 pm, Sun, 10 July 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ