AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

India vs West Indies: ಈ ಸರಣಿಯಲ್ಲಿ ಹಿಟ್​ಮ್ಯಾನ್ 200 ಕ್ಕೂ ಅಧಿಕ ರನ್ ಬಾರಿಸಿ ಭರ್ಜರಿ ಪ್ರದರ್ಶನ ನೀಡಿದರೆ ವೆಸ್ಟ್ ಇಂಡೀಸ್​ ವಿರುದ್ದ ತವರಿನಲ್ಲಿ ಅತೀ ಹೆಚ್ಚು ರನ್​ ಬಾರಿಸಿದ ಭಾರತದ ನಂಬರ್ 1 ಬ್ಯಾಟ್ಸ್​ಮನ್ ಎನಿಸಿಕೊಳ್ಳಬಹುದು.

Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ
Rohit Sharma
TV9 Web
| Updated By: ಝಾಹಿರ್ ಯೂಸುಫ್|

Updated on: Feb 06, 2022 | 7:37 PM

Share

ಅಹಮದಾಬಾದ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ (India vs West Indies) ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ವಿಶೇಷ ದಾಖಲೆಯನ್ನು ಬರೆದಿದ್ದಾರೆ. ವಿಂಡೀಸ್ ನೀಡಿದ 177 ರನ್​ಗಳ ಟಾರ್ಗೆಟ್​ ಅನ್ನು ಬೆನ್ತತ್ತಿದ ಟೀಮ್ ಇಂಡಿಯಾ (Team India) ಪರ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ (Ishan Kishan) ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಹಿಟ್​ಮ್ಯಾನ್ ವಿಂಡೀಸ್ ಬೌಲರುಗಳ ವಿರುದ್ದ ತಿರುಗಿಬಿದ್ದರು.

ಅದರಂತೆ 42 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದೊಂದಿಗೆ ಹಿಟ್​ಮ್ಯಾನ್ ಸಚಿನ್ ತೆಂಡೂಲ್ಕರ್ ದಾಖಲೆಯೊಂದನ್ನು ಮುರಿದರು. ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ದ 39 ಪಂದ್ಯಗಳಲ್ಲಿ ಸಚಿನ್ 1573 ರನ್ ಬಾರಿಸಿದ್ದರು. ಈ ಮೂಲಕ ವಿಂಡೀಸ್ ವಿರುದ್ದ ಅತೀ ಹೆಚ್ಚು ರನ್​ ಬಾರಿಸಿದ ಭಾರತ 2ನೇ ಆಟಗಾರ ಎಂಬ ದಾಖಲೆ ಬರೆದಿದ್ದರು. ಇದೀಗ 34 ಪಂದ್ಯಗಳಲ್ಲಿ ರೋಹಿತ್ ಶರ್ಮಾ 1583 ರನ್ ಬಾರಿಸುವ ಮೂಲಕ ಸಚಿನ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಸದ್ಯ ವಿರಾಟ್ ಕೊಹ್ಲಿ 40 ಪಂದ್ಯಗಳಲ್ಲಿ 2243 ರನ್ ಬಾರಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಇನ್ನು ಈ ಸರಣಿಯಲ್ಲಿ ಹಿಟ್​ಮ್ಯಾನ್ 200 ಕ್ಕೂ ಅಧಿಕ ರನ್ ಬಾರಿಸಿ ಭರ್ಜರಿ ಪ್ರದರ್ಶನ ನೀಡಿದರೆ ವೆಸ್ಟ್ ಇಂಡೀಸ್​ ವಿರುದ್ದ ತವರಿನಲ್ಲಿ ಅತೀ ಹೆಚ್ಚು ರನ್​ ಬಾರಿಸಿದ ಭಾರತದ ನಂಬರ್ 1 ಬ್ಯಾಟ್ಸ್​ಮನ್ ಎನಿಸಿಕೊಳ್ಳಬಹುದು. ಸದ್ಯ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಇದ್ದು, ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ದ ಭಾರತದಲ್ಲಿ 20 ಪಂದ್ಯಗಳಿಂದ 1239 ರನ್​ ಬಾರಿಸಿದ್ದಾರೆ. ಇದೀಗ 2ನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ 17 ಪಂದ್ಯಗಳಿಂದ 1100 ರನ್​ ಕಲೆಹಾಕಿದ್ದು, ಈ ಸರಣಿಯ ಮೂಲಕ ಕೊಹ್ಲಿ ದಾಖಲೆಯನ್ನು ಮುರಿಯುವ ಅವಕಾಶ ಹಿಟ್​ಮ್ಯಾನ್ ಮುಂದಿದೆ.

ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ 51 ಎಸೆತಗಳಲ್ಲಿ 60 ರನ್​ ಬಾರಿಸುವ ಮೂಲಕ ಏಕದಿನ ತಂಡದ ನಾಯಕನಾಗಿ ಬ್ಯಾಟಿಂಗ್​ನಲ್ಲಿ ಶುಭಾರಂಭ ಮಾಡಿದ್ದಾರೆ.

ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:

ಫೆಬ್ರವರಿ 6 – 1 ನೇ ODI, ಅಹಮದಾಬಾದ್

ಫೆಬ್ರವರಿ 9 – 2 ನೇ ODI, ಅಹಮದಾಬಾದ್

ಫೆಬ್ರವರಿ 11 – 3 ನೇ ODI, ಅಹಮದಾಬಾದ್

ಭಾರತ-ವೆಸ್ಟ್ ಇಂಡೀಸ್ T20 ಸರಣಿಯ ವೇಳಾಪಟ್ಟಿ:

ಫೆಬ್ರವರಿ 16 – 1 ನೇ T20, ಕೋಲ್ಕತ್ತಾ

ಫೆಬ್ರವರಿ 18 – 2 ನೇ T20, ಕೋಲ್ಕತ್ತಾ

ಫೆಬ್ರವರಿ 20 – 3 ನೇ T20, ಕೋಲ್ಕತ್ತಾ

(Rohit Sharma Breaks Sachin Tendulkar Record)

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ