AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ಸಿನ ಮೆಟ್ಟಿಲುಗಳ ಮೇಲಿಂದ ಜಾರಿ ಬಿದ್ದ ರೋಹಿತ್ ಶರ್ಮಾ..! ವಿಡಿಯೋ ವೈರಲ್

ತಿರುವನಂತಪುರದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆದ್ದ ನಂತರ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಬಸ್‌ನಿಂದ ಇಳಿಯುವಾಗ ಜಾರಿಬಿದ್ದರು. ಈ ಘಟನೆ ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರನ್ನು ಆಘಾತಕ್ಕೊಳಗಾಗಿಸಿತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೋಹಿತ್ ಶರ್ಮಾ ಈ ಪಂದ್ಯದಲ್ಲಿ 32 ರನ್ ಗಳಿಸಿ ಭಾರತದ ಗೆಲುವಿಗೆ ಕೊಡುಗೆ ನೀಡಿದ್ದರು.

ಬಸ್ಸಿನ ಮೆಟ್ಟಿಲುಗಳ ಮೇಲಿಂದ ಜಾರಿ ಬಿದ್ದ ರೋಹಿತ್ ಶರ್ಮಾ..! ವಿಡಿಯೋ ವೈರಲ್
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on: Sep 28, 2026 | 3:52 PM

Share

ತಿರುವನಂತಪುರದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 8 ವಿಕೆಟ್​ಗಳಿಂದ ಗೆದ್ದುಕೊಂಡಿತು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡ ಟೀಂ ಇಂಡಿಯಾ ಆಟಗಾರರು ತಂಡದ ಬಸ್​ನಲ್ಲಿ ತಾವು ತಂಗಿದ್ದ ಹೋಟೆಲ್​ನತ್ತ ಪ್ರಯಾಣ ಬೆಳೆಸಿದರು. ಬಸ್ ಹೋಟೆಲ್​ಗೆ ತಲುಪಿದ ಕೂಡಲೇ ಆಟಗಾರರು ಒಬ್ಬೊಬ್ಬರೆ ಬಸ್​ನಿಂದ ಇಳಿದು ಹೋಟೆಲ್​ ಒಳಗಡೆ ತೆರಳಿದರು. ರೋಹಿತ್ ಶರ್ಮಾ ಕೂಡ ಬಸ್​ನಿಂದ ಇಳಿದು ಹೋಟೆಲ್​ನತ್ತ ಹೋಗಲು ಬಸ್​ನ ಮೆಟ್ಟಿಲುಗಳ ಬಳಿ ಬಂದರು. ಮೆಟ್ಟಿಲುಗಳ ಮೇಲೆ ಇಳಿಯುವ ವೇಳೆ ರೋಹಿತ್ ಜಾರಿ ಬಿದ್ದರು. ಇದನ್ನು ನೋಡಿದ ಬಸ್​ನೊಳಗಿದ್ದ ಆಟಗಾರರು ಮತ್ತು ಹೊರಗಿದ್ದವರು ಆಘಾತಕ್ಕೊಳಗಾದರು. ಕೂಡಲೇ ರೋಹಿತ್​ ನೆರವಿಗೆ ಬಂದು ಅವರನ್ನು ಮೆಲಕ್ಕೇತ್ತಿದರು. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆಘಾತಕ್ಕೀಡಾದ ಕೊಹ್ಲಿ

ಈ ಅವಘಡದಲ್ಲಿ ರೋಹಿತ್​ಗಾಗಿರುವ ಗಾಯದ ಗಂಭೀರತೆ ಇದುವರೆಗೆ ಸ್ಪಷ್ಟವಾಗಿಲ್ಲ. ಆದರೆ ಅದು ವಿರಾಟ್ ಕೊಹ್ಲಿಯ ಮುಖದಲ್ಲಿ ಖಂಡಿತವಾಗಿಯೂ ಚಿಂತೆಯ ಛಾಯೆಯನ್ನು ಮೂಡಿಸಿತು. ವೆಸ್ಟ್ ಇಂಡೀಸ್ ವಿರುದ್ಧದ ಗೆಲುವಿನ ನಂತರ ಟೀಂ ಇಂಡಿಯಾವನ್ನು ಹೋಟೆಲ್‌ಗೆ ಮರಳಿ ಸ್ವಾಗತಿಸಲು ಸಿದ್ಧತೆಗಳು ನಡೆಯುತ್ತಿದ್ದವು. ಆದಾಗ್ಯೂ, ರೋಹಿತ್ ಬಸ್ಸಿನಿಂದ ಜಾರಿದ್ದನ್ನು ನೋಡಿದ ವಿರಾಟ್ ಕೆಲ ಸಮಯ ಆಘಾತಕ್ಕೊಳಗಾದವರಂತೆ ಕಂಡುಬಂದರು.

32 ರನ್ ಬಾರಿಸಿದ ರೋಹಿತ್ ಶರ್ಮಾ

ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಭಾರತದ ತಂಡದ ಗೆಲುವಿಗೆ ರೋಹಿತ್ ಶರ್ಮಾ 32 ರನ್‌ಗಳ ಕೊಡುಗೆ ನೀಡಿದರು. ಈ ಪಂದ್ಯದಲ್ಲಿ ಆಡಿದ 35 ಎಸೆತಗಳಲ್ಲಿ ರೋಹಿತ್ 3 ಸಿಕ್ಸರ್‌ಗಳು ಮತ್ತು 2 ಬೌಂಡರಿಗಳನ್ನು ಬಾರಿಸಿದರು. ಅಲ್ಲದೆ ಶುಭ್​ಮನ್ ಗಿಲ್ ಅವರೊಂದಿಗೆ 74 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

ಪಂದ್ಯ ಹೀಗಿತ್ತು

ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 50 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 295 ರನ್ ಗಳಿಸಿತು. ತಂಡದ ಪರ ಜಸ್ಟಿನ್ ಗ್ರೀವ್ಸ್ ಶತಕ ಸಿಡಿಸಿದರು. ಜಾನ್ ಕ್ಯಾಂಪ್‌ಬೆಲ್ ಮತ್ತು ಅಮೀರ್ ಜಂಗೂ ಅರ್ಧಶತಕಗಳ ಕಾಣಿಕೆ ನೀಡಿದರು. ಭಾರತದ ಪರ ಕುಲ್ದೀಪ್ ಯಾದವ್ 4 ವಿಕೆಟ್ ಪಡೆದರು. ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್ ಅವರ ಶತಕಗಳ ಸಹಾಯದಿಂದ ಭಾರತ 41.4 ಓವರ್‌ಗಳಲ್ಲಿ 296 ರನ್‌ಗಳ ಗುರಿ ತಲುಪಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ