ಪಾಕ್ ನಾಯಕ ಬಾಬರ್ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ಹಿಟ್​ಮ್ಯಾನ್! ವಿಶ್ವದಾಖಲೆ ನಿರ್ಮಾಣ ಖಚಿತ

T20 World Cup 2022: ರೋಹಿತ್ ಇದುವರೆಗೆ ಕ್ಯಾಲೆಂಡರ್ ವರ್ಷದಲ್ಲಿ 20 ಟಿ20 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಇದೀಗ 21ನೇ ಗೆಲುವಿನೊಂದಿಗೆ ಅಗ್ರಸ್ಥಾನಕ್ಕೇರಲಿದ್ದಾರೆ.

ಪಾಕ್ ನಾಯಕ ಬಾಬರ್ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ಹಿಟ್​ಮ್ಯಾನ್! ವಿಶ್ವದಾಖಲೆ ನಿರ್ಮಾಣ ಖಚಿತ
Rohit Sharma, Babar Azam
Edited By:

Updated on: Nov 06, 2022 | 12:30 PM

ಟಿ20 ವಿಶ್ವಕಪ್2022 (T20 World Cup 2022)ರ ಸೂಪರ್ 12 ಹಂತದ ಅಂತಿಮ ಪಂದ್ಯವನ್ನು ಭಾರತ ತಂಡ ಜಿಂಬಾಬ್ವೆ ವಿರುದ್ಧ ಆಡಲಿದೆ. ಈಗಾಗಲೇ ಸೆಮಿಫೈನಲ್‌ ತಲುಪಿರುವ ಟೀಂ ಇಂಡಿಯಾ ಈ ಪಂದ್ಯದ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಪ್ರಸ್ತುತ ಸೂಪರ್ 12 ಹಂತದಲ್ಲಿ ಅಗ್ರಸ್ಥಾನದಲ್ಲಿದೆ. ಆದರೆ ಜಿಂಬಾಬ್ವೆ ವಿರುದ್ಧ ಭಾರತ ಸೋತರೆ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿಯಲಿದೆ. ಇದರಿಂದ ಸೆಮಿಫೈನಲ್​ನಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಬೇಕಾಗುತ್ತದೆ ಹೀಗಾಗಿ ಟೀಂ ಇಂಡಿಯಾ ಗೆಲುವಿಗಾಗಿ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ. ಈ ಯಶಸ್ಸಿನೊಂದಿಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಅವರು ಪಾಕ್ ತಂಡದ ನಾಯಕ ಬಾಬರ್ ಅಜಮ್ (Babar Azam) ಅವರ ದಾಖಲೆಯನ್ನು ಸಹ ಮುರಿಯಲಿದ್ದಾರೆ.

2021 ರಲ್ಲಿ ಪಾಕ್ ನಾಯಕ ಬಾಬರ್, ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಮಾದರಿಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆ ಬರೆದಿದ್ದರು ರಚಿಸಿದರು. ಈಗ ಈ ಗೆಲುವಿನೊಂದಿಗೆ, ರೋಹಿತ್ ಶರ್ಮಾ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ನಾಯಕದ ದಾಖಲೆಯನ್ನು ರಚಿಸಲಿದ್ದಾರೆ. ಸದ್ಯಕ್ಕೆ ರೋಹಿತ್ ಶರ್ಮಾ ಬಾಬರ್ ಅಜಮ್ ದಾಖಲೆಯನ್ನು ಸರಿಗಟ್ಟಿದ್ದು, ಜಿಂಬಾಬ್ವೆ ವಿರುದ್ಧ ಗೆಲುವು ಸಾಧಿಸಿದರೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ನಾಯಕನಾಗಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ನಾಯಕನ ಪಟ್ಟಿಯಲ್ಲಿ ರೋಹಿತ್ ಮೊದಲಿಗರಾಗುತ್ತಾರೆ. ರೋಹಿತ್ ಇದುವರೆಗೆ ಕ್ಯಾಲೆಂಡರ್ ವರ್ಷದಲ್ಲಿ 20 ಟಿ20 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಇದೀಗ 21ನೇ ಗೆಲುವಿನೊಂದಿಗೆ ಅಗ್ರಸ್ಥಾನಕ್ಕೇರಲಿದ್ದಾರೆ.

ವಿಶ್ವಕಪ್‌ಗೂ ಮುನ್ನ 17 ಪಂದ್ಯಗಳಲ್ಲಿ ಜಯ

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ 17 ಪಂದ್ಯಗಳನ್ನು ಗೆದ್ದಿತ್ತು. ಸೂಪರ್ 12 ಹಂತದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ 18ನೇ ಜಯ ದಾಖಲಿಸಿತು. ಅದರ ನಂತರ, ಈ ಸರಣಿಯನ್ನು ವಿಸ್ತರಿಸಿ, 19 ಮತ್ತು 20 ನೇ ಗೆಲುವುಗಳನ್ನು ದಾಖಲಿಸಲಾಯಿತು. ಇದೀಗ ಈ ಗೆಲುವಿನೊಂದಿಗೆ ಭಾರತದ ನಾಯಕ ಇತಿಹಾಸ ನಿರ್ಮಿಸಲಿದ್ದಾರೆ.

ಬಾಬರ್ ಆಜಮ್ ನಂತರ ಮಹೇಂದ್ರ ಸಿಂಗ್ ಧೋನಿ ಕೂಡ ಈ ಪಟ್ಟಿಯಲ್ಲಿದ್ದು, ಧೋನಿ, ಈಗ ಮೂರನೇ ಸ್ಥಾನಕ್ಕೆ ಕುಸಿಯಲಿದ್ದಾರೆ. ಒಂದು ಕ್ಯಾಲೆಂಡರ್ ವರ್ಷದಲ್ಲಿ 15 ಪಂದ್ಯಗಳ ಧೋನಿ ಭಾರತ ತಂಡದ ನಾಯಕತ್ವ ವಹಿಸಿ 2016 ರಲ್ಲಿ ಈ ಗೆಲುವಿನ ದಾಖಲೆಯನ್ನು ದಾಖಲಿಸಿದ್ದರು.

ಇದನ್ನೂ ಓದಿ: T20 World Cup 2022: 4 ಪಂದ್ಯಗಳಲ್ಲಿ ಕೇವಲ 52 ರನ್; ತಂಡದ ನಾಯಕ- ಉಪನಾಯಕನೇ ಪದೇಪದೇ ವಿಫಲ!

ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ

ಗ್ರೂಪ್ 2ರಲ್ಲಿ ಭಾರತ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸೂಪರ್ 12 ರಲ್ಲಿ ಭಾರತ 4 ಪಂದ್ಯಗಳನ್ನು ಆಡಿದೆ. ಇದರಲ್ಲಿ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಸೋಲು ಕಂಡಿತ್ತು. ದಕ್ಷಿಣ ಆಫ್ರಿಕಾ 2 ಪಂದ್ಯಗಳನ್ನು ಗೆದ್ದು 5 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಈಗಾಗಲೇ ನೆದರ್ಲೆಂಡ್ಸ್ ವಿರುದ್ಧ ಸೋತಿರುವ ಆಫ್ರಿಕಾ ತಂಡ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ. ಪಾಕಿಸ್ತಾನ 4 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು, ಸೇಮಿಸ್​ಗೇರುವ ಕೊನೆಯ ಅವಕಾಶ ಹೊಂದಿದೆ. ಅಲ್ಲದೆ ಪಾಕ್ ತಂಡ ಉತ್ತಮ ನೆಟ್ ರನ್ ರೇಟ್ ಹೊಂದಿರುವುದು ಸಹಾಯಕವಾಗಲಿದೆ. ಅದೇ ಸಂಖ್ಯೆಯ ಅಂಕಗಳೊಂದಿಗೆ ಬಾಂಗ್ಲಾದೇಶಕ್ಕಿಂತ ಒಂದು ಸ್ಥಾನ ಮೇಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:30 pm, Sun, 6 November 22