ಸಿಡ್ನಿ ಟೆಸ್ಟ್ ಬಳಿಕ ರೋಹಿತ್- ಗಂಭೀರ್ ಇಬ್ಬರಿಗೂ ತಂಡದಿಂದ ಗೇಟ್​ಪಾಸ್?

Team India: ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾದ ನಿರಾಶಾದಾಯಕ ಪ್ರದರ್ಶನದಿಂದ ರೋಹಿತ್ ಶರ್ಮಾ ಮತ್ತು ಗೌತಮ್ ಗಂಭೀರ್ ಅವರ ನಾಯಕತ್ವದ ಮೇಲೆ ಪ್ರಶ್ನೆಗಳು ಎದ್ದಿವೆ. ಟೆಸ್ಟ್ ತಂಡದಿಂದ ರೋಹಿತ್ ಅವರನ್ನು ತೆಗೆದುಹಾಕುವ ಮತ್ತು ಗಂಭೀರ್ ಅವರ ಕೋಚ್ ಹುದ್ದೆಯನ್ನು ಬದಲಾಯಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿ ಮುಗಿದ ನಂತರ ಬಿಸಿಸಿಐ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಸಿಡ್ನಿ ಟೆಸ್ಟ್ ಬಳಿಕ ರೋಹಿತ್- ಗಂಭೀರ್ ಇಬ್ಬರಿಗೂ ತಂಡದಿಂದ ಗೇಟ್​ಪಾಸ್?
ರೋಹಿತ್ ಶರ್ಮಾ,ಗೌತಮ್ ಗಂಭೀರ್
Follow us
ಪೃಥ್ವಿಶಂಕರ
|

Updated on: Jan 01, 2025 | 6:09 PM

ರೋಹಿತ್ ಶರ್ಮಾ ಮತ್ತು ಗೌತಮ್ ಗಂಭೀರ್ ಜೋಡಿ ಟೀಂ ಇಂಡಿಯಾದ ನೇತೃತ್ವವನ್ನು ಜಂಟಿಯಾಗಿ ವಹಿಸಿಕೊಂಡ ಬಳಿಕ ತಂಡ ಗೆಲುವು ಸಾಧಿಸಿದಕ್ಕಿಂತ ಸೋತಿದ್ದೆ ಹೆಚ್ಚು. ಅದು ಬರಿ ಸೋಲಲ್ಲ ದಾಖಲೆಯ, ಅವಮಾನಕರ ಸೋಲು. ಲಂಕಾದಲ್ಲಿ ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮುಖಭಂಗಕ್ಕೆ ಒಳಗಾಗಿದ್ದ ರೋಹಿತ್ ಪಡೆ ಆಬಳಿಕ ತವರಿನ ಟೆಸ್ಟ್ ಸರಣಿಯಲ್ಲಿಯೂ ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋತಿತ್ತು. ಇದೀಗ ಆಸ್ಟ್ರೇಲಿಯಾ ಪ್ರವಾಸದಲ್ಲೂ ಭಾರತ ತಂಡದ ಕಳಪೆ ಪ್ರದರ್ಶನ ಮುಂದುವರೆದಿದೆ. ಹೀಗಾಗಿ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಮೇಲೆ ತೂಗುಗತ್ತಿ ನೇತಾಡಲು ಪ್ರಾರಂಭಿಸಿದೆ. ಒಂದೆಡೆ ನಾಯಕತ್ವದ ಜೊತೆಗೆ ರೋಹಿತ್​ರನ್ನು ಟೆಸ್ಟ್ ತಂಡದಿಂದ ಹೊರಗಿಡುವ ಬಗ್ಗೆ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ಮುಖ್ಯ ಕೋಚ್ ಹುದ್ದೆಯಲ್ಲಿ ಗಂಭೀರ್ ಅವರನ್ನು ಮುಂದುವರೆಸಬೇಕಾ ಎಂಬುದು ಕೂಡ ಚರ್ಚೆ ಆಗುತ್ತಿದೆ. ಹೀಗಾಗಿ ಆಸೀಸ್ ವಿರುದ್ಧದ ಟೆಸ್ಟ್ ಸರಣಿಯ ನಂತರ ಟೀಂ ಇಂಡಿಯಾದಲ್ಲಿ ಬದಲಾವಣೆಯ ಪರ್ವ ಆರಂಭವಾಗುವುದು ಖಚಿತ ಎಂದು ಹೇಳಲಾಗುತ್ತಿದೆ.

ಟೆಸ್ಟ್​ನಿಂದ ರೋಹಿತ್ ಶರ್ಮಾ ಔಟ್?

ವಾಸ್ತವವಾಗಿ ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾದ ಕಳಪೆ ಪ್ರದರ್ಶನ ಬಿಸಿಸಿಐನ ನಿದ್ದೆಗೆಡಿಸಿದೆ. ಹೀಗಾಗಿ ತಂಡದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಮೆಲ್ಬೋರ್ನ್ ಟೆಸ್ಟ್ ವೇಳೆ, ನಾಯಕತ್ವ ಮತ್ತು ನಿವೃತ್ತಿಯ ಬಗ್ಗೆ ಅವರ ಮತ್ತು ರೋಹಿತ್ ಶರ್ಮಾ ನಡುವೆ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಆದರೆ ಕ್ರಿಕ್‌ಬಝ್‌ನ ವರದಿಯ ಪ್ರಕಾರ, ಜನವರಿ 3 ರಿಂದ ಪ್ರಾರಂಭವಾಗುವ ಸಿಡ್ನಿ ಟೆಸ್ಟ್‌ನಲ್ಲಿ ರೋಹಿತ್ ಟೀಂ ಇಂಡಿಯಾದ ನಾಯಕನಾಗಿ ಕಾಣಿಸಿಕೊಳ್ಳಲಿದ್ದು, ಅವರು ತಂಡದಲ್ಲಿ ಆಡುವುದು ಖಚಿತವಾಗಿದೆ.

ಆದರೆ ಬಾರ್ಡರ್ ಗವಾಸ್ಕರ್ ಟ್ರೋಫಿಯ ನಂತರ ರೋಹಿತ್ ಅವರ ನಾಯಕತ್ವದಲ್ಲಿ ತಂಡದ ಪ್ರದರ್ಶನ, ಟೆಸ್ಟ್ ತಂಡದಲ್ಲಿ ಅವರ ಸ್ಥಾನ ಮತ್ತು ನಿವೃತ್ತಿಯ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಸದ್ಯ ಭಾರತ ತಂಡದ ಸ್ಥಿತಿ ತೀರಾ ಹದಗೆಟ್ಟಿದ್ದು, ಬಿಸಿಸಿಐನ ಎಲ್ಲ ಅಧಿಕಾರಿಗಳು ಚಿಂತಿತರಾಗಿದ್ದಾರೆ. ಆದರೆ ಈ ಪ್ರಮುಖ ಸರಣಿಯ ಮಧ್ಯೆ ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳುವುದು ಸರಿ ಇಲ್ಲ ಎಂಬ ಕಾರಣಕ್ಕಾಗಿ ಎಲ್ಲರೂ ಸರಣಿ ಮುಗಿಯುವುದಕ್ಕಾಗಿ ಕಾಯುತ್ತಿದ್ದಾರೆ ಎಂದು ವರದಿಯಾಗಿದೆ.

ಗಂಭೀರ್ ರಾಜೀನಾಮೆ?

ವಾಸ್ತವವಾಗಿ ರಾಹುಲ್ ದ್ರಾವಿಡ್ ಬಳಿಕ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಅಧಿಕಾರವಹಿಸಿಕೊಂಡಿದ್ದ ಗೌತಮ್ ಗಂಭೀರ್ ಅವರ ನೇತೃತ್ವದಲ್ಲಿ ಭಾರತ ತಂಡ ಶ್ರೀಲಂಕಾದಲ್ಲಿ ಏಕದಿನ ಸರಣಿಯನ್ನು ಕಳೆದುಕೊಂಡಿತ್ತು. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡ ಗೆಲುವು ಸಾಧಿಸಿದ್ದನ್ನು ಬಿಟ್ಟರೆ, ಉಳಿದಂತೆ ತಂಡ ಗೆದ್ದಿದ್ದಕ್ಕಿಂತ ಸೋತಿದ್ದೆ ಹೆಚ್ಚು. ಇದಲ್ಲದೇ ಆಸ್ಟ್ರೇಲಿಯಾ ಪ್ರವಾಸದ ನಡುವೆಯೇ ತಂಡದ ಅನುಭವಿ ಸ್ಪಿನ್ನರ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದ್ದು, ತಂಡದಲ್ಲಿ ಏನು ಸರಿ ಎಂಬ ಅಭಿಪ್ರಾಯವನ್ನು ಮೂಡಿಸಿದೆ. ಹಾಗೆಯೇ ಬಿಜಿಟಿ ಟೆಸ್ಟ್ ಸರಣಿಗೆ ತಂಡದ ಆಯ್ಕೆ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಈ ಎಲ್ಲಾ ಸಂಗತಿಗಳಿಂದಾಗಿ ರೋಹಿತ್ ಶರ್ಮಾ ಜೊತೆಗೆ ಸರಣಿಯಲ್ಲಿ ಗಂಭೀರ್ ಪಾತ್ರದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಆದರೆ, ಅಶ್ವಿನ್ ನಿರ್ಧಾರದಲ್ಲಿ ಭಾರತ ತಂಡದ ಮುಖ್ಯ ಕೋಚ್ ಪಾತ್ರವಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಟೆಸ್ಟ್ ಸರಣಿ ಮುಗಿದ ಬಳಿಕ ಗೌತಮ್ ಗಂಭೀರ್ ಅವರಿಂದ ತಂಡದ ಪ್ರದರ್ಶನದ ಬಗ್ಗೆ ವರದಿ ಕೇಳುವುದು ಖಚಿತವಾಗಿದೆ. ಮಾಹಿತಿ ಪ್ರಕಾರ ಗಂಭೀರ್​ ಅವರನ್ನು ಸೀಮಿತ ಓವರ್​ಗಳಿಗೆ ಕೋಚ್ ಆಗಿ ಇರಿಸಿಕೊಂಡು ಟೆಸ್ಟ್ ಮಾದರಿಗೆ ಬೇರೆಯವರನ್ನು ಕರೆತರುವ ಕೆಲಸಕ್ಕೆ ಬಿಸಿಸಿಐ ಮುಂದಾಗಬಹುದು ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ