India Tour of SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಯಾವಾಗ ಪ್ರಕಟ?: ಯಾರಿಗೆ ಚಾನ್ಸ್?

India’s ODI Squad For South Africa Tour: ರೋಹಿತ್ ಶರ್ಮಾ ಏಕದಿನ ಸರಣಿ ಹೊತ್ತಿಗೆ ಗುಣಮುಖರಾಗದಿದ್ದಲ್ಲಿ ತಂಡದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ನಾಯಕನ ಜವಾಬ್ದಾರಿ ಯಾರಿಗೆ ನೀಡುವುದು ಎಂಬ ಗೊಂದಲ ಉಂಟಾಗಲಿದೆ. ಹಾಗಾದ್ರೆ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತದ ಸಂಭಾವ್ಯ ಆಟಗಾರರ ಪಟ್ಟಿ ನೋಡುವುದಾದರೆ.

India Tour of SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಯಾವಾಗ ಪ್ರಕಟ?: ಯಾರಿಗೆ ಚಾನ್ಸ್?
Team India T20 World Cup
Follow us
TV9 Web
| Updated By: Vinay Bhat

Updated on: Dec 19, 2021 | 8:19 AM

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ (IND vs SA Test) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 18 ಸದಸ್ಯರ ಬಲಿಷ್ಠ ಭಾರತ (Team India) ತಂಡವನ್ನು ಪ್ರಕಟ ಮಾಡಿದೆ. ಇದರ ನಡುವೆ ಅಚ್ಚರಿಯ ಬೆಳವಣಿಗೆಗಳು ಕೂಡ ನಡೆದಿವೆ. ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು (Virat Kohli) ಕೆಳಗಿಳಿಸಿ ರೋಹಿತ್ ಶರ್ಮಾ (Rohit Sharma) ಅವರಿಗೆ ಜವಾಬ್ದಾರಿ ನೀಡಲಾಗಿದೆ. ಜೊತೆಗೆ ಭಾರತ ಟೆಸ್ಟ್ ತಂಡಕ್ಕೆ ಅಜಿಂಕ್ಯಾ ರಹಾನೆ (Ajinkya Rahane) ಬದಲು ರೋಹಿತ್ ಶರ್ಮಾ ಅವರನ್ನು ಉಪ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಸದ್ಯ ಹಿಟ್​ಮ್ಯಾನ್ ಇಂಜುರಿಯಿಂದಾಗಿ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಲಭ್ಯರಿಲ್ಲದ ಕಾರಣ ಕೆಎಲ್ ರಾಹುಲ್ ಅವರನ್ನು ಉಪ ನಾಯಕನಾಗಿ ಘೋಷಿಸಲಾಗಿದೆ. ಆದರೆ, ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ (India vs South Africa) ಟೀಮ್ ಇಂಡಿಯಾ ಇನ್ನೂ ಪ್ರಕಟವಾಗಿಲ್ಲ. ಕೆಲವೇ ದಿನಗಳಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಈ ಬಗ್ಗೆ ಸಭೆ ನಡೆಸಿ ತಂಡವನ್ನು ಹೆರಿಸಲಿದೆ.

ಏಕದಿನ ಸರಣಿಯ ಆಯ್ಕೆ ಬಿಸಿಸಿಐಗೆ ಕಬ್ಬಿಣದ ಕಡಲೆಯಂತಾಗಿದೆ. ರುತುರಾಜ್ ಗಾಯಕ್ವಾಡ್, ಹರ್ಷಲ್ ಪಟೇಲ್ ಸೇರಿದಂತೆ ಅನೇಕ ಯುವ ಆಟಗಾರರು ತಂಡದಲ್ಲಿ ಸ್ಥಾನ ಪಡೆಯಲು ಕಾದುಕುಳಿತಿದ್ದಾರೆ. ಇದರ ನಡುವೆ ಐದು ತಿಂಗಳ ಬಳಿಕ ಶಿಖರ್ ಧವನ್ ಕೂಡ ತಂಡಕ್ಕೆ ಕಮ್​ಬ್ಯಾಕ್ ಮಾಡುವ ಹುರುಪಿನಲ್ಲಿದ್ದಾರೆ. ಧವನ್ ಜುಲೈನಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೊನೇಯದಾಗಿ ಕಣಕ್ಕಿಳಿದಿದ್ದರು. ಇದೀಗ ಮತ್ತೆ ಭಾರತ ಏಕದಿನ ತಂಡ ಸೇರಲಿದ್ದಾರೆ.

ರೋಹಿತ್ ಶರ್ಮಾ ಏಕದಿನ ಸರಣಿ ಹೊತ್ತಿಗೆ ಗುಣಮುಖರಾಗದಿದ್ದಲ್ಲಿ ತಂಡದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ನಾಯಕನ ಜವಾಬ್ದಾರಿ ಯಾರಿಗೆ ನೀಡುವುದು ಎಂಬ ಗೊಂದಲ ಉಂಟಾಗಲಿದೆ. ಹಾಗಾದ್ರೆ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತದ ಸಂಭಾವ್ಯ ಆಟಗಾರರ ಪಟ್ಟಿ ನೋಡುವುದಾದರೆ.

ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್,  ಸೂರ್ಯಕುಮಾರ್ ಯಾದವ್,  ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್, ಹರ್ಷಲ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ರಾಹುಲ್ ಚಹಾರ್.

ಇನ್ನು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಆಯೋಜನೆಯಾಗಿದ್ದ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಕೋವಿಡ್ ಕಾರಣದಿಂದ ಕೈಬಿಡಲಾಗಿದೆ. ಆದರೆ, ರದ್ದಾಗಿಲ್ಲ, ಬದಲಾಗಿ ಮುಂದೂಡಿಕೆ ಆಗಿದೆ. ಮುಂದಿನ ವರ್ಷ ಸೂಕ್ತ ಸಮಯ ನೋಡಿ ಟಿ20 ಸರಣಿಯನ್ನ ಆಡಿಸಲಾಗುವುದು ಎಂದು ಕ್ರಿಕೆಟ್ ಸೌತ್ ಆಫ್ರಿಕಾ ಹೇಳಿದೆ. ಸೆಂಚೂರಿಯನ್, ಜೋಹಾನ್ಸ್​ಬರ್ಗ್, ಕೇಪ್​ಟೌನ್ ಮತ್ತು ಪಾರ್ಲ್ ನಗರಗಳಲ್ಲಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ಸರಣಿಗಳ ಪಂದ್ಯಗಳು ನಡೆಯಲಿವೆ.

ದಕ್ಷಿಣ ಆಫ್ರಿಕಾ ಮತ್ತು ಭಾರತ ಕ್ರಿಕೆಟ್ ಸರಣಿ ವೇಳಾಪಟ್ಟಿ:

ಟೆಸ್ಟ್ ಸರಣಿ:

1) ಡಿ. 26-30: ಸೂಪರ್ ಸ್ಪೋರ್ಟ್ ಪಾರ್ಕ್, ಸೆಂಚೂರಿಯನ್

2) ಜ. 3-7: ವಾಂಡರರ್ಸ್, ಜೋಹಾನ್ಸ್​ಬರ್ಗ್

3) ಜ. 11-15: ನ್ಯೂಲ್ಯಾಂಡ್ಸ್, ಕೇಪ್ ಟೌನ್

ಏಕದಿನ ಸರಣಿ:

1) ಜ. 19: ಬೋಲ್ಯಾಂಡ್ ಪಾರ್ಕ್, ಪಾರ್ಲ್

2) ಜ. 21: ಬೋಲ್ಯಾಂಡ್ ಪಾರ್ಕ್, ಪಾರ್ಲ್

3) ಜ. 23: ನ್ಯೂಲೆಂಡ್ಸ್, ಕೇಪ್ ಟೌನ್

Akash Chopra: ಏಕದಿನ ಸರಣಿಗೆ ಈತನನ್ನು ಕೈಬಿಡಬಾರದು, ಅದು ಒಳ್ಳೆಯ ನಿರ್ಧಾರವಲ್ಲ ಎಂದ ಆಕಾಶ್ ಚೋಪ್ರಾ

(Rohit Sharma Comeback India Predicted ODI Team Squad Against South Africa 2022)

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ