ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ಭರ್ತಿ 15 ವರ್ಷ; ಭಾವನಾತ್ಮಕ ಸಂದೇಶ ಪೋಸ್ಟ್ ಮಾಡಿದ ಹಿಟ್‌ಮ್ಯಾನ್

ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ಭರ್ತಿ 15 ವರ್ಷ; ಭಾವನಾತ್ಮಕ ಸಂದೇಶ ಪೋಸ್ಟ್ ಮಾಡಿದ ಹಿಟ್‌ಮ್ಯಾನ್
Rohit Sharma

Rohit sharma: ಐಸಿಸಿ ವಿಶ್ವಕಪ್ 2011ರ ತಂಡದಲ್ಲಿ ರೋಹಿತ್ ಶರ್ಮಾ ಆಯ್ಕೆಯಾಗಿರಲಿಲ್ಲ. ರೋಹಿತ್ ಶರ್ಮಾ ಇದು ತಮ್ಮ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ ಎಂದು ಹೇಳಿಕೊಂಡಿದ್ದರು.

TV9kannada Web Team

| Edited By: pruthvi Shankar

Jun 23, 2022 | 3:17 PM

ಜೂನ್ 23, 2007…ಈ ದಿನಾಂಕ ರೋಹಿತ್ ಶರ್ಮಾ (Rohit Sharma) ಅವರ ಜೀವನದಲ್ಲಿ ಬಹಳಷ್ಟು ಪ್ರಾಮುಖ್ಯತೆಯನ್ನು ಹೊಂದಿದೆ. ಈ ದಿನ ರೋಹಿತ್ ಶರ್ಮಾ ಅವರ ಕನಸು ನನಸಾಗಿರುವುದು ವಿಶೇಷ. ರೋಹಿತ್ ಶರ್ಮಾ ಟೀಂ ಇಂಡಿಯಾ (Team India) ಪರ ಮೊದಲ ಪಂದ್ಯ ಆಡಿದ್ದು ಇದೇ ದಿನ. ಹಾಗಾಗಿ ಈ ದಿನ ರೋಹಿತ್ ಬದುಕಿನ ಅವಿಸ್ಮರಣೀಯ ದಿನವಾಗಿದೆ. ರೋಹಿತ್ ಶರ್ಮಾ ಈ ದಿನಾಂಕದಂದು ಬೆಲ್‌ಫಾಸ್ಟ್‌ನಲ್ಲಿ ಐರ್ಲೆಂಡ್ ವಿರುದ್ಧ ಮೊದಲ ಬಾರಿಗೆ ಟೀಮ್ ಇಂಡಿಯಾ ಜೆರ್ಸಿ ತೊಟ್ಟಿದ್ದರು. ಆದರೂ ಅವರಿಗೆ ಈ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇಂದಿಗೆ 15 ವರ್ಷಗಳನ್ನು ಪೂರೈಸಿದ್ದು, ಈ ಸಂದರ್ಭದಲ್ಲಿ ಈ ಹಿರಿಯ ಆಟಗಾರ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಈ ವಿಶೇಷ ದಿನದಂದು ರೋಹಿತ್ ಶರ್ಮಾ ತಮ್ಮ ಅಭಿಮಾನಿಗಳಿಗೆ ಹಾಗೂ ತನಗೆ ಸಹಾಯ ಮಾಡಿದ ಪ್ರತಿಯೊಬ್ಬ ವ್ಯಕ್ತಿಗೆ ಧನ್ಯವಾದ ಅರ್ಪಿಸಿದ್ದಾರೆ.

ರೋಹಿತ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ, ನನ್ನ ನೆಚ್ಚಿನ ಜೆರ್ಸಿಯಲ್ಲಿ ನಾನು ಕ್ರಿಕೆಟ್ ಆಡಲು ಆರಂಭಿಸಿ ಇಂದಿಗೆ 15 ವರ್ಷ. ಇಂದು ನಾನು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನನ್ನ 15 ವರ್ಷಗಳನ್ನು ಪೂರೈಸಿದೆ. ಇದೇ ದಿನ ನಾನು ಭಾರತಕ್ಕೆ ಪಾದಾರ್ಪಣೆ ಮಾಡಿದೆ. ಎಂತಹ ಅದ್ಭುತವಾದ ಪ್ರಯಾಣವನ್ನು ನಾನು ನನ್ನ ಜೀವನದಲ್ಲಿ ಯಾವಾಗಲೂ ಪಾಲಿಸುತ್ತೇನೆ. ಈ ಪ್ರಯಾಣದ ಭಾಗವಾಗಿರುವ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಜೊತೆಗೆ ನಾನು ಉತ್ತಮ ಆಟಗಾರನಾಗಲು ಸಹಾಯ ಮಾಡಿದ ಎಲ್ಲರಿಗೂ ವಿಶೇಷ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:RR vs MI Highlights, IPL 2022: ರೋಹಿತ್ ಶರ್ಮಾಗೆ ಗೆಲುವಿನ ಗಿಫ್ಟ್; ಕೊನೆಗೂ ಗೆದ್ದ ಮುಂಬೈ..!

ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ವೃತ್ತಿಜೀವನ

ರೋಹಿತ್ ಶರ್ಮಾ ತಮ್ಮ 15 ವರ್ಷಗಳ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 230 ODI, 125 T20 ಮತ್ತು 45 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ರೋಹಿತ್ ಶರ್ಮಾ ಏಕದಿನದಲ್ಲಿ 29, ಟೆಸ್ಟ್‌ನಲ್ಲಿ 8 ಮತ್ತು ಟಿ20 ಕ್ರಿಕೆಟ್‌ನಲ್ಲಿ 4 ಶತಕಗಳನ್ನು ಗಳಿಸಿದ್ದಾರೆ.

ರೋಹಿತ್ ಶರ್ಮಾ ದಾಖಲೆಗಳು

ರೋಹಿತ್ ಶರ್ಮಾ ತಮ್ಮ 15 ವರ್ಷಗಳ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಮಾಡಿದ್ದಾರೆ. ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕಗಳನ್ನು ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆ ಹೊಂದಿದ್ದಾರೆ. 2014ರಲ್ಲಿ ಶ್ರೀಲಂಕಾ ವಿರುದ್ಧ ರೋಹಿತ್ 264 ರನ್‌ಗಳ ಇನಿಂಗ್ಸ್‌ ಆಡಿದ್ದರು. ಇದಲ್ಲದೇ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4 ಶತಕ ಸಿಡಿಸಿದ ಏಕೈಕ ಬ್ಯಾಟ್ಸ್‌ಮನ್. 2019ರ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಐದು ಶತಕ ಸಿಡಿಸಿದ್ದರು. ಒಂದೇ ವಿಶ್ವಕಪ್‌ನಲ್ಲಿ ಐದು ಶತಕಗಳನ್ನು ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ರೋಹಿತ್. 2019 ರಲ್ಲಿ, ರೋಹಿತ್ ಶರ್ಮಾ ಆರಂಭಿಕರಾಗಿ ತಮ್ಮ ಮೊದಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದರು. ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ರೋಹಿತ್.

ರೋಹಿತ್ ಶರ್ಮಾ ವೃತ್ತಿಜೀವನದ ದೊಡ್ಡ ಆಘಾತ

ಇದನ್ನೂ ಓದಿ

ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಸಾಧಿಸಿದ್ದಾರೆ ಆದರೆ 2011 ವರ್ಷವು ಅವರಿಗೆ ಕೆಟ್ಟ ವರ್ಷವಾಗಿತ್ತು. ಐಸಿಸಿ ವಿಶ್ವಕಪ್ 2011ರ ತಂಡದಲ್ಲಿ ರೋಹಿತ್ ಶರ್ಮಾ ಆಯ್ಕೆಯಾಗಿರಲಿಲ್ಲ. ರೋಹಿತ್ ಶರ್ಮಾ ಇದು ತಮ್ಮ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ ಎಂದು ಹೇಳಿಕೊಂಡಿದ್ದರು. 2011ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗುವ ಹೆಗ್ಗಳಿಕೆಯನ್ನು ಸಾಧಿಸಿತ್ತು.

Follow us on

Related Stories

Most Read Stories

Click on your DTH Provider to Add TV9 Kannada